ಉಡುಪಿ : ಜಿಲ್ಲೆಯಲ್ಲಿ ಜುಲೈ 10 ರಂದು ಆಚರಿಸಲಾಗುವ ಬಕ್ರೀದ್ ಹಬ್ಬ ಆಚರಣೆಯ ಸಂದರ್ಭದಲ್ಲಿ ಅನಧೀಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಲಾಗಿದ್ದು, ಗೋಹತ್ಯೆ ನಿಷೇಧ ಕಾಯ್ದೆಯಡಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇರಿಸುವಂತೆ ಸಂಬAಧಪಟ್ಟ ಇಲಾಖೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು.
ಅವರು ಇಂದು ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ, ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ರಚಿಸಿರುವ ಜಿಲ್ಲಾ ಸಮಿತಿಯೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಾದ್ಯಂತ ಇರುವ ಚೆಕ್ ಪೋಸ್ಟ್ಗಳಲ್ಲಿ ಅನಧಿಕೃತವಾಗಿ ಜಾನುವಾರುಗಳು ಸಾಗಾಣಿಕೆ ಆಗದಂತೆ ನಿಗಾ ಇರಿಸುವಂತೆ ಸೂಚಿಸಿದ ಅವರು, ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ತಿಳಿಸಿದರು.
ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ವಶಪಡಿಸಿಕೊಂಡಲ್ಲಿ ಅವುಗಳ ರಕ್ಷಣೆಗಾಗಿ ಗುರುತಿಸಿದ ಗೋಶಾಲೆಗಳಲ್ಲಿ ಸಂರಕ್ಷಣೆ ಮಾಡುವಂತೆ ಸಂಬAಧಿಸಿದ ಇಲಾಖೆಗೆ ಸೂಚಿಸಿದರು. ಗೋಹತ್ಯೆ ಜಾನುವಾರು ಸಾಗಾಣಿಕೆ ಕಂಡುಬAದಲ್ಲಿ ಸಾರ್ವಜನಿಕರು ಹತ್ತಿರದ ಪೋಲೀಸ್ ಠಾಣೆ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದರು.
ಬಕ್ರಿದ್ ಹಬ್ಬದ ಧಾರ್ಮಿಕ ಆಚರಣೆಯಲ್ಲಿ ಕಾನೂನು ಸುವ್ಯವಸ್ಥೆಗೆ ಲೋಪವಾಗದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಪಶು ಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಂಕರ್ ಶೆಟ್ಟಿ ಹಾಗೂ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…