ಉಡುಪಿ: ಕರಾವಳಿ ಕಾವಲು ಪಡೆಯ ಬೋಟ್ ಗಳು ಮತ್ತು ವಾಹನಗಳಿಗೆ ಸರಕಾರ ಇಂಧನ ಕಡಿತ ಮಾಡಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಭದ್ರತೆ, ಸುರಕ್ಷತೆಯ ವಿಚಾರದಲ್ಲಿ ಸರಕಾರ ರಾಜಿಯಾಗಬಾರದು. ಬಜೆಟ್ ನಲ್ಲಿ ಕರಾವಳಿ ಕಾವಲು ಪಡೆಗೆ ಅಗತ್ಯ ಅನುದಾನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು ರಾಜ್ಯದ ಆರ್ಥಿಕ ಪರಿಸ್ಥಿತಿ ಎಲ್ಲರಿಗೂ ಗೊತ್ತಿದೆ.ಅಭಿವೃದ್ಧಿ ಚಟುವಟಿಕೆಗಳಿಗೆ ಮತ್ತು ಮಳೆ ಹಾನಿಗೆ ಯಾವುದಕ್ಕೂ ಅನುದಾನ ಬಂದಿಲ್ಲ.ಕಡಲು ಕೊರೆತಕ್ಕೂ ಸರಕಾರ ಅನುದಾನ ಕೊಟ್ಟಿಲ್ಲ. ಜನಪರವಾಗಿ ಸ್ಪಂದಿಸುವ ಶಕ್ತಿ ಈ ಸರ್ಕಾರಕ್ಕೆ ಇಲ್ಲ.ಕರಾವಳಿ ಕಾವಲು ಪಡೆ ನಮ್ಮ ಗಡಿಯನ್ನು ಕಾಯುತ್ತದೆ. ಕೇವಲ ಜವಾಬ್ದಾರಿ ಕೊಟ್ಟರೆ ಸಾಲದು, ವ್ಯವಸ್ಥೆ ಕಲ್ಪಿಸಬೇಕು. ರಕ್ಷಣೆಗೆ ಬೇಕಾದ ಪರಿಹಾರಗಳನ್ನು ಸರ್ಕಾರ ವ್ಯವಸ್ಥೆ ಮಾಡಬೇಕು.
ಮೂರು ಜಿಲ್ಲೆಗಳಲ್ಲಿ ಕಾರ್ಯಾಚರಿಸುವ ಕರಾವಳಿ ಕಾವಲು ಪಡೆಗೆ ಸರಕಾರ ಹೆಚ್ಚಿನ ಅನುದಾನ ನೀಡಬೇಕು.ಗಡಿ ರಕ್ಷಣೆಗೆ ಸಂಬಂಧಪಟ್ಟ ಹಾಗೆ ಬಜೆಟ್ ನಲ್ಲಿ ಸರಕಾರ ಉತ್ತಮ ಅನುದಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…