Featured

ಉಡುಪಿ: ಬಜೆಟ್ ನಲ್ಲಿ ಯಾವ ವಿಚಾರದಲ್ಲಿ ತೊಡಕುಂಟಾಗಿದೆ ಎಂಬುದನ್ನು ಕಾಂಗ್ರೆಸ್ ಸ್ಪಷ್ಟಪಡಿಸಲಿ : ಸಂಸದ ಕೋಟ – vishwanews24

ಉಡುಪಿ: ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳು ಟೀಕಿಸುವುದು ಹೊಸದಲ್ಲ

ರಾಜ್ಯ ಸರ್ಕಾರ ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸಲಿ, ನಂತರ ಟೀಕಿಸಲಿ ..

ಉಡುಪಿ: ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳು ಟೀಕಿಸುವುದು ಹೊಸದಲ್ಲ. ಆದರೆ ಇಂತಹ ಅದ್ಭುತ ಬಜೆಟ್ ನಲ್ಲಿ ರಾಜ್ಯಕ್ಕೆ ಅಥವಾ ದೇಶಕ್ಕೆ ಯಾವ ವಿಚಾರದಲ್ಲಿ ತೊಡಕುಂಟಾಗಿದೆ ಎಂಬುದನ್ನು ಕಾಂಗ್ರೆಸ್ ಪಕ್ಷವು ಸ್ಪಷ್ಟಪಡಿಸಲಿ. ಮತ್ತು ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವಲ್ಲಿ ಸಹಕರಿಸಲಿ ಎಂದು ಲೋಕಸಭಾ ಸಚೇತಕರು ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಅವರು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರವು ಕೇಂದ್ರ ಸರ್ಕಾರದ ಯೋಜನೆಗಳನ್ನು ತಡೆ ಹಿಡಿಯುವಲ್ಲಿ ಪರಿಣಾಮಕಾರಿ ಕೆಲಸ ಮಾಡುತ್ತಿರುವುದು ನಮ್ಮ ಗಮನದಲ್ಲಿದೆ. ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಕೇಂದ್ರ ಸರ್ಕಾರವು 6000 ನೀಡಿದರೆ ಈ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿ 4000 ನೀಡಿತ್ತು. ಒಟ್ಟು 10,000 ರೂಪಾಯಿ ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ರೈತರ ಕೈ ಸೇರುತ್ತಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದ ಮರುದಿನವೇ 4000 ರೂಪಾಯಿ ರೈತರಿಗೆ ನೀಡುತ್ತಿದ್ದ ಯೋಜನೆಯನ್ನು ರದ್ದುಗೊಳಿಸಿತ್ತು. ಈ ಮೂಲಕ ರೈತರಿಗೆ ಅನ್ಯಾಯ ಮಾಡಿದ್ದು ರಾಜ್ಯ ಕಾಂಗ್ರೆಸ್ ಅಲ್ಲವೇ? ಎಂದು ಸಂಸದರು ಪ್ರಶ್ನಿಸಿದ್ದಾರೆ.

ಕುಶಲ ಕರ್ಮಿಗಳಿಗೆ ಉಪಯೋಗವಾಗುವಂತಹ ವಿಶ್ವಕರ್ಮ ಯೋಜನೆ ಆಗಿರಬಹುದು, ಮುದ್ರಾ ಯೋಜನೆ ಆಗಿರಬಹುದು ಅಥವಾ ಆಯುಷ್ಮಾನ್ ಯೋಜನೆಗಳನ್ನು ಕೂಡಾ ಪರಿಣಾಮಕಾರಿ ಬಳಕೆ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಉದಾಸೀನ ತೋರುತ್ತಿರುವುದು ರಾಜ್ಯದ ಜನತೆಗೆ ಗೊತ್ತಿಲ್ಲದೇನಲ್ಲ. ಇಂತಹ ಉತ್ತಮ ಯೋಜನೆಗಳನ್ನು ಜನರಿಗೆ ಮುಟ್ಟಿಸುವಲ್ಲಿ ಸರ್ಕಾರವು ಕೆಲಸ ಮಾಡುವುದನ್ನು ಬಿಟ್ಟು ಜನರಿಗೆ ಕೇವಲ ರಾಜಕೀಯ ದ್ವೇಷಕ್ಕಾಗಿ ಜನರಿಗೆ ಮೋಸ ಮಾಡುವುದು ಎಷ್ಟು ಸರಿ? ಮೊದಲು ರಾಜ್ಯ ಸರ್ಕಾರವು ತಮ್ಮಲ್ಲಿ ಆಗುವಂತಹ ಲೋಪ ದೋಷಗಳನ್ನು ಸರಿಪಡಿಸಿಕೊಂಡು ನಂತರ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡಲಿ ಎಂದು ಸಂಸದರು ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ -vishwanews24

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…

3 hours ago

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ -vishwanews24

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…

3 hours ago

ನಂದಿನಿ ಹಾಲಿನ ದರ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ -vishwanews24

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…

4 hours ago

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ -vishwanews24

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…

4 hours ago

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್‌ ಠಾಣಾ…

4 hours ago

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ -vishwanews24

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…

5 hours ago