Featured

ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 19.37 ಕೋಟಿ ರೂ. ಲಾಭ : ಜಯಕರ ಶೆಟ್ಟಿ ಇಂದ್ರಾಳಿ – vishwanews24

ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 19.37 ಕೋಟಿ ರೂ. ಲಾಭ : ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2024-25ನೇ ಸಾಲಿನಲ್ಲಿ 2,935 ಕೋಟಿ ರೂ. ವಾರ್ಷಿಕ ವಹಿವಾಟು ನಡೆಸಿ 19.37 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 107 ವರ್ಷಗಳಿಂದ ಸಾರ್ಥಕ ಸೇವೆಯನ್ನು ನೀಡುತ್ತಿರುವ ಸಂಘವು 2024-25 ಆರ್ಥಿಕ ವರ್ಷಾಂತ್ಯಕ್ಕೆ 21,519 ಸದಸ್ಯರಿಂದ 4.83 ಕೋ.ರೂ ಪಾಲು ಬಂಡವಾಳ ಹೊಂದಿದೆ. 1,050 ಕೋಟಿ ರೂ. ವ್ಯವಹಾರ ವರದಿ ವರ್ಷಾಂತ್ಯಕ್ಕೆ ಸಂಘವು ಒಟ್ಟು 573 ಕೋಟಿ ರೂ. ಠೇವಣಿ ಸಂಗ್ರಹಿಸಿದೆ. ಕಳೆದ ಸಾಲಿಗಿಂತ ಶೇ.12.45 ಏರಿಕೆ ಕಂಡಿದೆ ಎಂದರು.

ಸದಸ್ಯರಿಗೆ ವಿವಿಧ ಸಾಲವನ್ನು ವಿತರಿಸುತ್ತಿದ್ದು ವರದಿ ವರ್ಷಾಂತ್ಯಕ್ಕೆ 477 ಕೋಟಿ ರೂ. ಸದಸ್ಯರ ಹೊರಬಾಕಿ ಸಾಲ ಇದ್ದು, ಕಳೆದ ಸಾಲಿಗಿಂತ ಶೇ.18.62 ಏರಿಕೆ ಕಂಡಿದೆ. 95.18 ಕೋ.ರೂ ನಿಧಿಗಳು, 229.73ಕೋಟಿ ರೂ ಹೂಡಿಕೆಗಳು ಇದ್ದು, 673.20 ಕೋಟಿ ರೂ. ದುಡಿಯುವ ಬಂಡವಾಳವನ್ನು ಹೊಂದಿದೆ ಎಂದು ಅವರು ಹೇಳಿದರು.ಸಂಘವು ತನ್ನ ಕಾರ್ಯಕ್ಷೇತ್ರದಲ್ಲಿ 11 ಶಾಖೆಗಳನ್ನು ಹೊಂದಿದ್ದು ಈ ಪೈಕಿ 8 ಶಾಖೆಗಳು ಸಂಘದ ಸ್ವಂತ ನಿವೇಶನದಲ್ಲಿವೆ. 12ನೇ ಶಾಖೆಯಾಗಿ ಕುಂದಾಪುರದ ಹೃದಯಭಾಗದಲ್ಲಿ ಸ್ವಂತ ಕಛೇರಿಯನ್ನು ಈಗಾಗಲೇ ಖರೀದಿಸ ಲಾಗಿದ್ದು, ಸದ್ಯದಲ್ಲೇ ಗ್ರಾಹಕರ ಸೇವೆಗೆ ಲಭ್ಯವಾಗಲಿದೆ. ವಾರ್ಷಿಕ ಸುಮಾರು 20 ಲಕ್ಷ ರೂ.ನಷ್ಟು ಹಣವನ್ನು ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸಲಾಗುತ್ತದೆ ಎಂದರು.

ಮುಂದಿನ ವರದಿ ವರ್ಷದಲ್ಲಿ 800 ಕೋಟಿ ರೂ. ಠೇವಣಿ, 700 ಕೋಟಿ ರೂ. ಹೊರಬಾಕಿ ಸಾಲ ಅಂದರೆ ಒಟ್ಟು 1,500 ಕೋಟಿ ರೂ. ವ್ಯವಹಾರ ನಡೆಸುವ ಗುರಿ ಹೊಂದಿದೆ. ಉಡುಪಿಯ ಹೃದಯ ಭಾಗದಲ್ಲಿ ಈಗಾಗಲೇ ಖರೀದಿಸಿರುವ 1 ಎಕ್ರೆ ಆಸ್ತಿಯಲ್ಲಿ 10ಕೋಟಿ ರೂ. ವೆಚ್ಚದಲ್ಲಿ ಸಹಕಾರ ಸೌಧ ನಿರ್ಮಾಣದ ಯೋಜನೆಯನ್ನು ಹಮ್ಮಿಕೊಂಡಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಜಾರ್ಜ್ ಸಾಮ್ಯುಯೆಲ್, ಆಡಳಿತ ಮಂಡಳಿ ಸದಸ್ಯರಾದ ಉಮಾನಾಥ ಎಲ್., ವಿನಯ ಕುಮಾರ್ ಟಿ.ಎ, ಪದ್ಮನಾಭ ನಾಯಕ್, ಸದಾಶಿವ ನಾಯ್ಕಿ, ಮನೋಹರ ಎಸ್. ಶೆಟ್ಟಿ, ಜಯಾ ಶೆಟ್ಟಿ, ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

8 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

10 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

10 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

11 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

11 hours ago