Featured

ಉಡುಪಿ : ಬಡಗಬೆಟ್ಟು ಕ್ರೆಡಿಟ್ ಕೋ ಆ.ಸೊಸೈಟಿಗೆ 15.23 ಕೋ.ರೂ. ನಿವ್ವಳ ಲಾಭ – vishwanews24

ಉಡುಪಿ : ಬಡಗಬೆಟ್ಟು ಕ್ರೆಡಿಟ್ ಕೋ ಆ.ಸೊಸೈಟಿಗೆ 15.23 ಕೋ.ರೂ. ನಿವ್ವಳ ಲಾಭ ; ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

ಉಡುಪಿ : ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 2023-24ನೆ ಸಾಲಿನಲ್ಲಿ 15.23 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಗಿದೆ.

ಉಡುಪಿ ಅಜ್ಜರಕಾಡು ಪುರಭವನದಲ್ಲಿ ರವಿವಾರ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು.

ಸಂಘದ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಿದರು. ವರದಿ ಸಾಲಿನ ಅಂತ್ಯಕ್ಕೆ ಸಂಘವು ಒಟ್ಟು 18,309 ಸದಸ್ಯರಿಂದ 4.77ಕೋಟಿ ರೂ. ಪಾಲು ಬಂಡವಾಳ ಹಾಗೂ 509.55 ಕೋಟಿ ರೂ. ಠೇವಣಿ ಹೊಂದಿದ್ದು, 402.12ಕೋಟಿ ರೂ. ಹೊರ ಬಾಕಿ ಸಾಲ ಹೊಂದಿದೆ. ಈ ಮೂಲಕ ಸಂಘವು 2023-24ನೇ ಸಾಲಿನಲ್ಲಿ ಸುಮಾರು 2500ಕೋಟಿ ರೂ.ಗೂ ಮೇಲ್ಪಟ್ಟು ವಾರ್ಷಿಕ ವಹಿವಾಟು ನಡೆಸಿದೆ ಎಂದು ಅವರು ತಿಳಿಸಿದರು. ಈ ಸಂದರ್ಭ ನಗರಸಭೆಯ ಆಯ್ದ 24 ಪೌರಕಾರ್ಮಿಕರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಸಂಘದ ಉಪಾಧ್ಯಕ್ಷ ಜಾರ್ಜ್ ಸ್ಯಾಮುವೆಲ್, ಆಡಳಿತ ಮಂಡಳಿ ಸದಸ್ಯರಾದ ಎಲ್.ಉಮಾನಾಥ, ಪುರುಷೋತ್ತಮ ಶೆಟ್ಟಿ, ಹಾಜಿ ಸಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಪದ್ಮನಾಭ ಕೆ.ನಾಯಕ್, ಸದಾಶಿವ ನಾಯ್ಕ್, ಮನೋಹರ್ ಎಸ್.ಶೆಟ್ಟಿ, ಸಾಧು ಸಾಲ್ಯಾನ್, ಜಯಾ ಶೆಟ್ಟಿ, ಗಾಯತ್ರಿ ಎಸ್.ಭಟ್ ಉಪಸ್ಥಿತರಿದ್ದರು.

ಸಂಘದ ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ವಂದಿಸಿದರು. ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ – vishwanews24

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…

14 minutes ago

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

36 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

21 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

21 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago