ಉಡುಪಿ : ಬಡಗು ತಿಟ್ಟಿನ ಹಿರಿಯ ವೇಷಧಾರಿ ಅನಂತ ಕುಲಾಲ (೬೬ ವರ್ಷ) ಕಳೆದ ಆರು ತಿಂಗಳಿನಿ0ದ ಅಸೌಖ್ಯದಲ್ಲಿದ್ದ ಇವರು ನಿನ್ನೆ (೧೨-೧೦-೨೦೨೧) ತಡರಾತ್ರಿ ಕುಂದಾಪುರ ತಾಲೂಕಿನ ಮೊಳಹಳ್ಳಿಯಲ್ಲಿ ನಿಧನ ಹೊಂದಿದರು.
ಇವರು ಉಡುಪಿ ಯಕ್ಷಗಾನ ಕೇಂದ್ರದಲ್ಲಿ ಗುರು ವೀರಭದ್ರ ನಾಯಕರಲ್ಲಿ ಯಕ್ಷಗಾನ ಕುಣಿತ ಆಭ್ಯಾಸ ಮಾಡಿ, ಹಳ್ಳಾಡಿ ಮಂಜಯ್ಯ ಶೆಟ್ಟಿ ಮತ್ತು ಹಳ್ಳಾಡಿ ಕೃಷ್ಣರಲ್ಲಿ ಮಾತುಗಾರಿಕೆ, ರಂಗತAತ್ರ ಕಲಿತು ಪ್ರೌಢ ಪುರುಷ ವೇಷಧಾರಿಯಾಗಿ ರೂಪುಗೊಂಡರು. ಅಮೃತೇಶ್ವರೀ, ಹಿರಿಯಡಕ, ಸಾಲಿಗ್ರಾಮ, ಪೆರ್ಡೂರು, ಹಾಲಾಡಿ, ಮಾರಣಕಟ್ಟೆ ಮೇಳಗಳಲ್ಲಿ ಸುಮಾರು ಐದು ದಶಕಗಳ ಕಾಲ ವೈವಿಧ್ಯಮಯ ವೇಷಗಳನ್ನು ಮಾಡುತ್ತಾ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು.
ಕೇವಲ ಮಾರಣಕಟ್ಟೆ ಮೇಳವೊಂದರಲ್ಲಿ ನಾಲ್ಕು ದಶಕಗಳ ಕಾಲ ಕಲಾಸೇವೆಗೈದಿದ್ದರು. ಕಳೆದ ವರ್ಷ ಯಕ್ಷಗಾನ ಕಲಾರಂಗವು ಡಾ. ಬಿ. ಬಿ. ಶೆಟ್ಟಿ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ನೀಡಿ ಅವರನ್ನು ಸಮ್ಮಾನಿಸಿತ್ತು. ಕಳೆದ ತಿಂಗಳು ಎಮ್. ಎಮ್. ಹೆಗಡೆ ಪ್ರಶಸ್ತಿಯನ್ನು ಪಿ. ಕಿಶನ್ ಹೆಗ್ಡೆಯವರ ನೇತೃತ್ವದಲ್ಲಿ ಅವರ ಮನೆಯಲ್ಲೆ ನೀಡಿ ಗೌರವಿಸಲಾಗಿತ್ತು. ಇವರು ಪತ್ನಿ, ನಾಲ್ವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಮ್. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತ ಪಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…