Featured

ಉಡುಪಿ: ಬಡವರ ಏಳಿಗೆಗಾಗಿ ಸದಾ ಶ್ರಮಿಸುತ್ತಿರುವ ಸಿದ್ಧರಾಮಯ್ಯ ಅವರನ್ನು ಸದೆಬಡಿಯುವ ಬಿಜೆಪಿಯ ಕನಸು ನನಸಾಗದು : ಗೀತಾ ವಾಗ್ಳೆ – vishwanews24

ಉಡುಪಿ: ಬಡವರ ಏಳಿಗೆಗಾಗಿ ಸದಾ ಶ್ರಮಿಸುತ್ತಿರುವ ಸಿದ್ಧರಾಮಯ್ಯ ಅವರನ್ನು ಸದೆಬಡಿಯುವ ಬಿಜೆಪಿಯ ಕನಸು ನನಸಾಗದು- ಗೀತಾ ವಾಗ್ಳೆ

ಉಡುಪಿ: ಬಡವರ ಏಳಿಗೆಗಾಗಿ ಸದಾ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆ,ಬಡವರಿಗೆ ಅವರ ಮೇಲಿರುವ ಪ್ರೀತಿ, ಸಿದ್ಧರಾಮಯ್ಯ ಅವರು ತಮ್ಮ ವಿರುದ್ಧ ನಡೆಯುತ್ತಿರುವ ಎಲ್ಲಾ ರೀತಿಯ ಪಿತೂರಿಗಳನ್ನು ನಿರ್ಭೀತರಾಗಿ ಎದುರಿಸುತ್ತಿರುವ ರೀತಿ ಇದೆಲ್ಲವನ್ನೂ ಸಹಿಸಲಾಗದೇ ಮಾನ್ಯ ಸಿದ್ಧರಾಮಯ್ಯ ಅವರನ್ನು ಸದೆಬಡಿಯಲು ಬಿಜೆಪಿ ಹಾಕಿಕೊಂಡಿರುವ ಯೋಜನೆ ಎಂದಿಗೂ ನನಸಾಗುವುದಿಲ್ಲ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಅವರು ಹೇಳಿದ್ದಾರೆ.

ಸಿದ್ಧರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಎಲ್ಲರೂ ಖಂಡಿಸಬೇಕಾಗಿದೆ . ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಬಿಜೆಪಿಯ ಕೈಗೊಂಬೆಗಳಂತೆ ಕೆಲಸ ಮಾಡುತ್ತಿರುವುದು ಈ ದೇಶದ ದುರಂತ.ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಮೇಶ್ ಜಾರಕಿಹೊಳಿ, ಯಡಿಯೂರಪ್ಪ ಮುಂತಾದವರ ಮೇಲೆ ಅದೆಷ್ಟೋ ಆರೋಪಗಳಿದ್ದರೂ ಯಾವುದೇ ಪ್ರತಿಕ್ರಿಯೆ ನೀಡದೇ ರಾಜ್ಯಪಾಲರು ಸಿದ್ಧರಾಮಯ್ಯ ಅವರ ವಿಷಯದಲ್ಲಿ ಯಾವುದೇ ರೀತಿಯ ಆರೋಪ ಸಾಬೀತಾಗಿರದಿದ್ದರೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ಹೇಗೆ? ಮುಡಾ ಹಗರಣದಲ್ಲಿ ಬಿಜೆಪಿಯ ಪಾಲೆಷ್ಟು? ಭ್ರಷ್ಟಾಚಾರದಲ್ಲಿ ಸಿದ್ಧ ಹಸ್ತರೆನಿಸಿಕೊಂಡಿರುವ ಬಿಜೆಪಿಗರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರದ ದಿನಗಳಲ್ಲಿ ತಾವು ಬಹಳ ಶುದ್ಧ ಹಸ್ತರು ಎಂಬಂತೆ ಬಿಂಬಿಸತೊಡಗಿರುವುದು ಆಶ್ಚರ್ಯ ತರಿಸುತ್ತಿದೆ.

ಬಿಜೆಪಿಗರ ಈ ವರ್ತನೆ ನೋಡಿದರೆ ಅವರಿಗೆ ಯಾವುದೇ ಹಗರಣದ ಚಿಂತೆ ಇಲ್ಲ,ಅವರಿಗೆ ಬೇಕಾಗಿರುವುದು ಒಂದೇ, ಅದು ಪ್ರಸ್ತುತ ಸರ್ಕಾರವನ್ನು ಅಸ್ತಿರಗೊಳಿಸಿ ಬೀಳಿಸೋದು, ಜೊತೆಗೇ ಸಿದ್ಧರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು. ಇದೇ ಉದ್ದೇಶದಿಂದ ಈಗ ರಾಜ್ಯಪಾಲರನ್ನು ದಾಳವಾಗಿ ಉಪಯೋಗಿಸಿ ಸಿದ್ಧರಾಮಯ್ಯ ಅವರನ್ನು ಕೆಳಗಿಳಿಸುವ ಕನಸು ಕಾಣುತ್ತಿದ್ದಾರೆ.ಆದರೆ ಇದು ಎಂದಿಗೂ ಸಾಧ್ಯವಾಗದು. ಸಿದ್ಧರಾಮಯ್ಯ ಅವರೊಂದಿಗೆ ಕೋಟ್ಯಂತರ ಬಡ ಮತದಾರರರಿದ್ದಾರೆ. ಅವರ ಆಶೀರ್ವಾದವಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಲಕ್ಷಾಂತರ ಮತದಾರರನ್ನು ಅವರು ತಲುಪಿದ್ದಾರೆ. ಅವರ ಒಳ್ಳೆಯತನ ಎಂದಿಗೂ ಅವರನ್ನು ಬಿಡದು ಎಂದು ಗೀತಾ ವಾಗ್ಳೆ ಭರವಸೆ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago