ಉಡುಪಿ: ಬನ್ನಂಜೆ ಬಿಲ್ಲವರ ಸೇವಾ ಸಂಘದ ಶ್ರೀ ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್ ವತಿಯಿಂದ 431 ವಿದ್ಯಾರ್ಥಿಗಳಿಗೆ 25 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ವಿತರಣೆ,ಸಾಧಕರಿಗೆ ಸನ್ಮಾನ ಕಾರ್ಯಕ್ರಮ ರವಿವಾರ ಬನ್ನಂಜೆ ನಾರಾಯಣಗುರು ಆಡಿಟೋರಿಯಂನಲ್ಲಿ ಜರಗಿತು.
ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಸಮಾಜದ ಪ್ರತಿಯೊಬ್ಬ ಮಕ್ಕಳು ಉನ್ನತವಾದ ಶಿಕ್ಷಣ ಪಡೆದು, ಉನ್ನತ ಹುದ್ದೆ ಪಡೆದು,ಇಲ್ಲವೆ ಯಶಸ್ವಿ ಉದ್ಯಮಿಗಳಾಗಿ ಸಮಾಜಕ್ಕೆ ಮಾದರಿಯಾಗಿ ಬದುಕಬೇಕು.ಆ ಮೂಲಕ ಇನ್ನು ಹೆಚ್ಚಿನ ವಿದ್ಯಾರ್ಥಿ ವೇತನವನ್ನು ನೀಡುವಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ಮಂಜುನಾಥ ಪೂಜಾರಿ,ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ವಿಠಲ ಪೂಜಾರಿ,ರಾಜ್ಯ ಪ್ರಶಸ್ತಿ ಪಡೆದ ದೇಯಿ ಬೈದಿತಿ ಚಿತ್ರದ ನಿರ್ಮಾಪಕ ನಿರ್ದೇಶಕ ಸೂರ್ಯೋದಯ ಪೆರಂಪಳ್ಳಿ ವಿದ್ಯಾರ್ಥಿಗಳಾದ ಹರ್ಷ ಯು.ಪೂಜಾರಿ,ಪ್ರಣತಿ ಜತ್ತನ್, ಸಾಯಿ ವೈಷ್ಣವ್ ದಯಕರ್ ಅವರುಗಳನ್ನು ಸಂಘದ ವತಿಯಿಂದ ಸಮ್ಮಾನಿಸಲಾಯಿತು. 431 ಮಂದಿ ವಿದ್ಯಾರ್ಥಿಗಳಿಗೆ 25 ಲಕ್ಷ ರೂ. ವೇತನ ವಿತರಿಸಲಾಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶಶಿಧರ ಎಂ. ಅಮೀನ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂತೋಷ್,ಮಣಿಪಾಲದ ಸಂಶೋದನಾ ವಿದ್ಯಾರ್ಥಿ ಶ್ರೇಯಸ್ ಜಿ. ಕೋಟ್ಯಾನ್, ಸಂಘದ ಉಪಾಧ್ಯಕ್ಷ ಸದಾನಂದ ಪೂಜಾರಿ, ಕೋಶಾಧಿಕಾರಿ ಸದಾನಂದ ಅಮೀನ್,ಸದಸ್ಯರಾದ ಅಶೋಕ್ ಪೂಜಾರಿ,ಸುಧಾಕರ ಪೂಜಾರಿ, ಉದಯ ಪೂಜಾರಿ, ಪ್ರವೀಣ್ ಆರ್ ಸುವರ್ಣ,ವಿಶ್ವನಾಥ್ ಕಲ್ಮಾಡಿ, ಗಣೇಶ್ ಕೋಟ್ಯಾನ್, ಸತೀಶ್ ಅಮೀನ್, ಲಕ್ಷ್ಮಣ ಪೂಜಾರಿ,ಸಂದೀಪ್ ಸನಿಲ್,ಸುಕನ್ಯಾ,ವಿದ್ಯಾ ನಿಧಿ ಟ್ರಸ್ಟ್‌ನ ಸದಸ್ಯರಾದ ಪ್ರಭಾಕರ ಪೂಜಾರಿ, ದೀಪಕ್ ಕುಮಾರ್,ಕೃಷ್ಣ ಆಂಚನ್,ಜಿತೇಶ್,ಎಸ್. ಟಿ. ಕುಂದರ್, ಜಯಕರ್ ಉಪಸ್ಥಿತರಿದ್ದರು..
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…