Featured

ಉಡುಪಿ:  ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳ ಬ್ರಹ್ಮಕಲಶೋತ್ಸವ: ಮನೆ ಮನೆಗೆ ಕಾಣಿಕೆ ಡಬ್ಬಿ, ಆಮಂತ್ರಣ ಪತ್ರಿಕೆ ಬಿಡುಗಡೆ – vishwanews24

ಉಡುಪಿ:  ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳ ಬ್ರಹ್ಮಕಲಶೋತ್ಸವ: ಮನೆ ಮನೆಗೆ ಕಾಣಿಕೆ ಡಬ್ಬಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.16ರಿಂದ 20ರವರೆಗೆ ಬ್ರಹ್ಮಕಲಶೋತ್ಸವ ವೈಭವ 2026 ಅದ್ಧೂರಿ ಯಾಗಿ ನಡೆಯಲಿದ್ದು, ದೇವತಾ ಕಾರ್ಯ ದ ಪೂರ್ವಭಾವಿಯಾಗಿ ಮನೆಮನೆಗೆ ಕಾಣಿಕೆ ಡಬ್ಬಿ, ಆಮಂತ್ರಣ ಪತ್ರಿಕೆ ಹಾಗೂ ಪ್ರಚಾರದ ಸ್ಟಿಕ್ಕ‌ನ್ನು ಸೋಮವಾರ ಬಿಡುಗಡೆಗೊಳಿಸಲಾಯಿತು.

ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ನಾಡೋಜ ಡಾ.ಜಿ. ಶಂಕರ್ ಭಕ್ತರಿಗೆ ಮನೆ ಮನೆಗೆ ಕಾಣಿಕೆ ಡಬ್ಬಿಯನ್ನು ಹಸ್ತಾಂತರಿಸಿ ಮಾತನಾಡಿ, ನಮ್ಮ ಜೀವಿತಾ ವಧಿಯಲ್ಲಿ ನಡೆಯುವ ಗ್ರಾಮ, ಊರಿನ ದೇವಳದ ಜೀರ್ಣೋದ್ಧಾರ, ಬ್ರಹ್ಮಕಲ ಶೋತ್ಸವದಂತಹ ಪುಣ್ಯ ಕಾರ್ಯದಲ್ಲಿ ಕೈ ಜೋಡಿಸಿದರೆ ಪುಣ್ಯ ಫಲ ನಮಗೆ ಪ್ರಾಪ್ತಿ ಯಾಗುತ್ತದೆ ಎಂದರು.

ಬ್ರಹ್ಮಕಲಶೋತ್ಸವದ ಪೂರ್ವಭಾವಿ ಯಾಗಿ 200ಕ್ಕೂ ಅಧಿಕ ವಾಹನಗಳಲ್ಲಿ ಅದ್ಧೂರಿಯ ಹೊರೆಕಾಣಿಕೆ ಸಮರ್ಪಣೆ ಯಾಗಲಿದೆ. ಬ್ರಹ್ಮಕಲಶೋತ್ಸವದಂದು 20 ಸಾವಿರಕ್ಕೂ ಅಧಿಕ ಮಂದಿಗೆ ಅನ್ನ ಸಂತರ್ಪಣೆ ನಡೆಯುತ್ತದೆ ಎಂದರು.

ಇದನ್ನೂ ಓದಿ :

ಬನ್ನಂಜೆ ಶಾಸಕ ಯಶಪಾಲ್ ಎ. ಸುವರ್ಣ ಮಾತನಾಡಿ, ಶ್ರೀಮಹಾಲಿಂಗೇಶ್ವರ ದೇವಳ ಮಾಗಣೆಗೆ ಸಂಬಂಧಿಸಿದ್ದು, ಪ್ರಾಚೀನ, ಪುರಾಣ ಪ್ರಸಿದ್ಧವಾ ಗಿರುವ ದೇವಸ್ಥಾನವಾಗಿದೆ ಎಂದರು.

ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಕೆ. ಕೃಷ್ಣಮೂರ್ತಿ ಆಚಾರ್ಯ ಮಾತನಾಡಿ, ಸಂಸ್ಕಾರ, ಸಂಸ್ಕೃತಿಯ ಪ್ರತೀಕವಾಗಿರುವ ದೇಗುಲದಲ್ಲಿ ನಡೆಯುವ ದೇವತಾ ಕಾರ್ಯದಲ್ಲಿ ಭಾಗಿಯಾಗುವುದು ನಮ್ಮೆಲ್ಲರ ಪೂರ್ವಜನ್ಮದ ಪುಣ್ಯ ಫಲಕನ್ನರ್ಪಾಡಿ ದೇವಳದಿಂದ ಊರಿನ ಸಮಸ್ತರ ಸಹಕಾರದೊಂದಿಗೆ ಅದ್ದೂರಿಯ ಹೊರೆಕಾಣಿಕೆಯನ್ನು ಸಮರ್ಪಣೆ ಮಾಡಲಾಗುವುದೆಂದರು.

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವ ಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕ ರಮೇಶ್ ಕಾಂಚನ್, ಹೋಟೆಲ್ ಉದ್ಯಮಿ ಪ್ರಭಾಕರ್ ಪೂಜಾರಿ, ನಗರಸಭೆ ಮಾಜಿ ಸದಸ್ಯ ಟಿ.ಜಿ. ಹೆಗ್ಡೆ ಉಪಸ್ಥಿತರಿದ್ದರು. ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾಧವ ಬನ್ನಂಜೆ ಸ್ವಾಗತಿಸಿದರು. ಕೃತಿ ಮೂಡುಬೆಟ್ಟು ನಿರೂಪಿಸಿ, ವಂದಿಸಿದರು.

ಇದನ್ನೂ ಓದಿ :

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

15 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

16 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

16 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

19 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

19 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

19 hours ago