ನಟ ರಮೇಶ್ ಅರವಿಂದ್ ಯಕ್ಷ ಯುವರಾಜನಾಗಿ ಮಿಂಚಿದ್ದಾರೆ. ಬಹುಭಾಷಾ ಕಲಾವಿದ ರಮೇಶ್ ಅರವಿಂದ್ ಯಕ್ಷಗಾನದ ವೇಷ ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಹಲವು ದಶಕಗಳ ಕನಸನ್ನು ನನಸು ಮಾಡಿಕೊಂಡಿದ್ದಾರೆ.
ಉಡುಪಿಯ ಪ್ರವಾಸದಲ್ಲಿರುವ ರಮೇಶ್ ಅರವಿಂದ್ ಕೂದ್ರು ನೆಸ್ಟ್ ಗೆಸ್ಟ್ ಹೌಸಿಗೆ ಭೇಟಿ ಕೊಟ್ಟಿದ್ದರು. ಈ ಸಂದರ್ಭ ಬಹುಕಾಲದ ಕನಸಾಗಿದ್ದ ಯಕ್ಷಗಾನದ ವೇಷವನ್ನು ಹಾಕಿಸಿಕೊಂಡಿದ್ದಾರೆ. ಸಾಂಪ್ರದಾಯಿಕ ವೇಷ ಮತ್ತು ಬಣ್ಣಗಾರಿಕೆಯನ್ನು ಕಲಾವಿದ ಶೈಲೇಶ್ ವ್ಯವಸ್ಥೆ ಮಾಡಿದ್ದರು. ಅಂತರಾಷ್ಟ್ರೀಯ ಛಾಯಾಗ್ರಾಹಕ ಫೋಕಸ್ ರಾಘು , ರಮೇಶ್ ಅರವಿಂದ್ ಅವರ ಫೋಟೋ ಶೂಟ್ ಮಾಡಿದ್ದಾರೆ. ಇದನ್ನೂ ಓದಿ: ಮಂಗಳೂರು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಕರ್ತವ್ಯನಿರತ ಮಹಿಳಾ ಪಿಎಸ್‌ಐ – Vishwanews24
ಯಕ್ಷಗಾನ ಕಲೆಯ ಬಗ್ಗೆ ರಮೇಶ್ ಅರವಿಂದ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಛಾಯಾಗ್ರಹಣದಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ, ಉಡುಪಿ ಕೊಡಂಗಳದ ರಾಘವೇಂದ್ರ ಫೋಟೋ ಕ್ಲಿಕ್ ಮಾಡಿದ್ದಾರೆ. ಸುವರ್ಣಾ ನದಿ ತೀರದಲ್ಲಿರುವ ಕುದ್ರು ನೆಸ್ಟ್ ಎಂಬ ಹೋಮ್ ಸ್ಟೇಯಲ್ಲಿ ರಮೇಶ್ ಅರವಿಂದ್ ಸಾಂಪ್ರದಾಯಿಕವಾಗಿ ಬಣ್ಣಹಚ್ಚಿದ್ದಾರೆ.
ಶಿವರಾಮ ಕಾರಂತ ಪ್ರಶಸ್ತಿ ಸ್ವೀಕರಿಸಲು ಉಡುಪಿಗೆ ಬಂದಿದ್ದ ರಮೇಶ್ ಅರವಿಂದ್, ನಟ, ಬರಹಗಾರ, ಸ್ಫೂರ್ತಿ ತುಂಬುವ ಭಾಷಣಕಾರ, ನಿರೂಪಕ, ರಮೇಶ್ ಅರವಿಂದ್ ಉಡುಪಿಯ ಮನೋವೈದ್ಯ ಡಾ. ವಿರೂಪಾಕ್ಷ ದೇವರು ಮನೆಯವರೊಂದಿಗೆ ಫೋಕಸ್ ರಾಘು ಅವರ ಕುದ್ರು ನೆಸ್ಟ್ ಭೇಟಿ ನೀಡಿದ್ದರು. ಪರಿಸರ, ನದಿ, ಮನೆ, ಕ್ರಿಯಾಶೀಲ ವಿನ್ಯಾಸವನ್ನು ಕಂಡು ಮೆಚ್ಚುಗೆ ಸೂಚಿಸಿದ್ದರು. ರಾಘು ಅವರ ಛಾಯಾಚಿತ್ರಗಳನ್ನು ಕಂಡು ಬೆರಗು ವ್ಯಕ್ತಪಡಿಸಿ ತನಗೂ ಫೋಟೋ ಶೂಟ್ ಮಾಡ್ತೀರಾ ಎಂದು ಕೇಳಿದ್ದರು. ಅದರಂತೆ ರಮೇಶ್ ಅರವಿಂದ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
ಕಾಪು: ನಿವೃತ್ತ ಯೋಧ ಮೂಳೂರು ನಿವಾಸಿ ಹಾಜಿ ಅಬ್ದುರಝಾಕ್ ಶಾಬಾನ್ ನಿಧನ – Vishwanews24
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…