Featured

ಉಡುಪಿ : ಬಹುಕಾಲದ ಕನಸಾಗಿದ್ದ ಯಕ್ಷಗಾನದ ವೇಷ ಹಾಕಿ ಮಿಂಚಿದ ಬಹುಭಾಷಾ ಕಲಾವಿದ ರಮೇಶ್ ಅರವಿಂದ್ – Vishwanews24

ಉಡುಪಿ : ಬಹುಕಾಲದ ಕನಸಾಗಿದ್ದ ಯಕ್ಷಗಾನದ ವೇಷ ಹಾಕಿ ಮಿಂಚಿದ ಬಹುಭಾಷಾ ಕಲಾವಿದ ರಮೇಶ್ ಅರವಿಂದ್

ನಟ ರಮೇಶ್ ಅರವಿಂದ್  ಯಕ್ಷ ಯುವರಾಜನಾಗಿ ಮಿಂಚಿದ್ದಾರೆ. ಬಹುಭಾಷಾ ಕಲಾವಿದ ರಮೇಶ್ ಅರವಿಂದ್ ಯಕ್ಷಗಾನದ ವೇಷ ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಹಲವು ದಶಕಗಳ ಕನಸನ್ನು ನನಸು ಮಾಡಿಕೊಂಡಿದ್ದಾರೆ.

ಉಡುಪಿಯ ಪ್ರವಾಸದಲ್ಲಿರುವ ರಮೇಶ್ ಅರವಿಂದ್ ಕೂದ್ರು ನೆಸ್ಟ್ ಗೆಸ್ಟ್ ಹೌಸಿಗೆ ಭೇಟಿ ಕೊಟ್ಟಿದ್ದರು. ಈ ಸಂದರ್ಭ ಬಹುಕಾಲದ ಕನಸಾಗಿದ್ದ ಯಕ್ಷಗಾನದ ವೇಷವನ್ನು ಹಾಕಿಸಿಕೊಂಡಿದ್ದಾರೆ. ಸಾಂಪ್ರದಾಯಿಕ ವೇಷ ಮತ್ತು ಬಣ್ಣಗಾರಿಕೆಯನ್ನು ಕಲಾವಿದ ಶೈಲೇಶ್ ವ್ಯವಸ್ಥೆ ಮಾಡಿದ್ದರು. ಅಂತರಾಷ್ಟ್ರೀಯ ಛಾಯಾಗ್ರಾಹಕ ಫೋಕಸ್ ರಾಘು , ರಮೇಶ್ ಅರವಿಂದ್ ಅವರ ಫೋಟೋ ಶೂಟ್ ಮಾಡಿದ್ದಾರೆ. ಇದನ್ನೂ ಓದಿ: ಮಂಗಳೂರು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಕರ್ತವ್ಯನಿರತ ಮಹಿಳಾ ಪಿಎಸ್‌ಐ – Vishwanews24

ಯಕ್ಷಗಾನ  ಕಲೆಯ ಬಗ್ಗೆ ರಮೇಶ್ ಅರವಿಂದ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಛಾಯಾಗ್ರಹಣದಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ, ಉಡುಪಿ ಕೊಡಂಗಳದ ರಾಘವೇಂದ್ರ ಫೋಟೋ ಕ್ಲಿಕ್ ಮಾಡಿದ್ದಾರೆ. ಸುವರ್ಣಾ ನದಿ ತೀರದಲ್ಲಿರುವ ಕುದ್ರು ನೆಸ್ಟ್ ಎಂಬ ಹೋಮ್ ಸ್ಟೇಯಲ್ಲಿ ರಮೇಶ್ ಅರವಿಂದ್ ಸಾಂಪ್ರದಾಯಿಕವಾಗಿ ಬಣ್ಣಹಚ್ಚಿದ್ದಾರೆ.

ಶಿವರಾಮ ಕಾರಂತ ಪ್ರಶಸ್ತಿ ಸ್ವೀಕರಿಸಲು ಉಡುಪಿಗೆ ಬಂದಿದ್ದ ರಮೇಶ್ ಅರವಿಂದ್, ನಟ, ಬರಹಗಾರ, ಸ್ಫೂರ್ತಿ ತುಂಬುವ ಭಾಷಣಕಾರ, ನಿರೂಪಕ, ರಮೇಶ್ ಅರವಿಂದ್ ಉಡುಪಿಯ ಮನೋವೈದ್ಯ ಡಾ. ವಿರೂಪಾಕ್ಷ ದೇವರು ಮನೆಯವರೊಂದಿಗೆ ಫೋಕಸ್ ರಾಘು ಅವರ ಕುದ್ರು ನೆಸ್ಟ್ ಭೇಟಿ ನೀಡಿದ್ದರು. ಪರಿಸರ, ನದಿ, ಮನೆ, ಕ್ರಿಯಾಶೀಲ ವಿನ್ಯಾಸವನ್ನು ಕಂಡು ಮೆಚ್ಚುಗೆ ಸೂಚಿಸಿದ್ದರು. ರಾಘು ಅವರ ಛಾಯಾಚಿತ್ರಗಳನ್ನು ಕಂಡು ಬೆರಗು ವ್ಯಕ್ತಪಡಿಸಿ ತನಗೂ ಫೋಟೋ ಶೂಟ್ ಮಾಡ್ತೀರಾ ಎಂದು ಕೇಳಿದ್ದರು. ಅದರಂತೆ ರಮೇಶ್ ಅರವಿಂದ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಕಾಪು: ನಿವೃತ್ತ ಯೋಧ ಮೂಳೂರು ನಿವಾಸಿ ಹಾಜಿ ಅಬ್ದುರಝಾಕ್ ಶಾಬಾನ್ ನಿಧನ – Vishwanews24

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago