ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಿತಿ ಮೀರಿದ ಅಲ್ಪ ಸಂಖ್ಯಾತರ ಓಲೈಕೆಯಿಂದ ಮತೀಯ ಶಕ್ತಿಗಳು ರಾಜಾರೋಷವಾಗಿ ಪೊಲೀಸರ ಭಯವಿಲ್ಲದೆ ಹಿಂದೂಗಳ ಮೇಲೆ ದೌರ್ಜನ್ಯ ನಡೆಸಲು ಮುಂದಾಗಿದ್ದು, ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಬಸವನ ಗುಡಿಯಲ್ಲಿ ಈದ್ ಮೆರವಣಿಗೆ ಸಾಗುವಾಗ ಕಿಡಿಗೇಡಿಗಳು ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಜೀವ ಬೆದರಿಕೆ ಘೋಷಣೆ ಹಾಕಿ ಸ್ಥಳದಲ್ಲಿದ್ದ ಹಿಂದೂ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮೊನ್ನೆ ಪುತ್ತೂರಿನಲ್ಲಿ ಮಹಿಳೆಯೊಬ್ಬರ ಮೇಲೆ ಹಾಡಹಗಲೇ ಅಂಗಡಿಗೆ ನುಗ್ಗಿ ಹಲ್ಲೆ ಮಾಡಿ ಬಳಿಕ ಪೊಲೀಸ್ ಜೀಪ್ ಒಳಗೆ ಪ್ರವೇಶಿಸಿ, ಪೊಲೀಸರ ಸಮ್ಮುಖದಲ್ಲೇ ಹಲ್ಲೆ ನಡೆಸುವ ಘಟನೆಗಳು ರಾಜ್ಯದಲ್ಲಿ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಗೃಹ ಇಲಾಖೆ ಇದೆಯೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡುತ್ತಿದೆ.
ಪೊಲೀಸ್ ಇಲಾಖೆಯನ್ನು ಕೈಗೊಂಬೆಯನ್ನಾಗಿಸಿರುವ ಕಾಂಗ್ರೆಸ್ ಸರ್ಕಾರ ಕಣ್ಣಮುಂದೆ ಇಂತಹ ಘಟನೆಗಳು ನಡೆಯುತ್ತಿದ್ದರೂ ಪೊಲೀಸರು ಕಣ್ಣುಮುಚ್ಚಿ ಕುಳಿತುಕೊಳ್ಳುವ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ.
ಮತಾಂಧ ಶಕ್ತಿಗಳು ಪುಂಡಾಟಿಕೆಯ ಮೂಲಕ ಹಿಂದೂ ಕಾರ್ಯಕರ್ತರು, ಹಿಂದೂ ಸಮಾಜವನ್ನು ಪ್ರಚೋದಿಸುವ ಕೆಲಸವನ್ನು ಮುಂದುವರೆಸಿದರೆ ಹಿಂದೂ ಸಮಾಜ ತಕ್ಕ ಉತ್ತರ ನೀಡುವ ಅನಿವಾರ್ಯತೆ ಎದುರಾಗಲಿದೆ ಎಂಬುದಕ್ಕೆ ನಿನ್ನೆ ಪುತ್ತೂರು ಬಂದ್ ಕರೆಗೆ ಸಮಸ್ತ ಹಿಂದೂ ಜನತೆ ನೀಡಿದ ಬೆಂಬಲವೇ ಸಾಕ್ಷಿ.
ಪೊಲೀಸ್ ಇಲಾಖೆ ತಕ್ಷಣ ಬಸವನಗುಡಿಯಲ್ಲಿ ಪುಂಡಾಟ ಮೆರೆದ ಮತಾಂಧ ಶಕ್ತಿಗಳನ್ನು ತಕ್ಷಣ ಬಂಧಿಸಬೇಕು, ಆರ್ ಎಸ್ ಎಸ್ ವಿರುದ್ಧ ಹೇಳಿಕೆ ನೀಡುವುದನ್ನೇ ದಿನಚರಿಯಾಗಿ ಮಾಡಿಕೊಂಡಿರುವ ಗೃಹ ಸಚಿವರು ಇನ್ನಾದರೂ ಎಚ್ಚೆತ್ತು ರಾಜ್ಯದ ಕಾನೂನು ಸುವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು.
ತಪ್ಪಿದಲ್ಲಿ ರಾಜ್ಯದ ಹಿಂದೂ ಸಮಾಜ ತನ್ನ ರಕ್ಷಣೆಗೆ ರಾಜ್ಯ ಸರ್ಕಾರದ ಮೇಲಿನ ನಂಬಿಕೆಯನ್ನೇ ಕಳೆದುಕೊಂಡು ಮತಾಂಧ ಶಕ್ತಿಗಳಿಗೆ ತಾವೇ ಉತ್ತರ ನೀಡುವ ಸನ್ನಿವೇಶ ನಿರ್ಮಾಣವಾಗಲಿದೆ ಎಂದು ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…
ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ ; ಕಲಬುರಗಿಯ ಇಬ್ಬರು ಸುರಕ್ಷಿತ ಬೆಂಗಳೂರು: ನೇಪಾಳ-ಟಿಬೆಟ್…
ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ ಸುಳ್ಯ :ಅರಂತೋಡಿನ ದೇವರಕೊಲ್ಲಿ ಬಳಿ…
ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯಾ ಮನೆಗೆ ಆರ್‌ಸ್ಎಸ್…
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…