ಉಡುಪಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದುಗಳ ಮೇಲೆ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಸ್ವಾಮೀಜಿ, ಹಿಂದೂ ಮುಖಂಡರ ಬಂಧನ ಖಂಡಿಸಿ ಹಿಂದು ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಡಿ.4ರಂದು ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಸಮಿತಿಯ ಸಂಚಾಲಕ ರಾಧಾಕೃಷ್ಣ ಮೆಂಡನ್ ತಿಳಿಸಿದರು.
ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಮಧ್ಯಾಹ್ನ 3 ಗಂಟೆಗೆ ಜೋಡುಕಟ್ಟೆಯಿಂದ ಪ್ರತಿಭಟನಾ ಜಾಥ ಆರಂಭಗೊಳ್ಳಲಿದೆ. ಜಾಥವು ಕೋರ್ಟ್ ರಸ್ತೆ, ಕೆ.ಎಮ್.ಮಾರ್ಗ, ಸರ್ವೀಸ್ ರಸ್ತೆ, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಕೃಷ್ಣ ಮಠದ ಪಾರ್ಕಿಂಗ್ ವಠಾರವನ್ನು ತಲುಪಲಿದೆ ಎಂದರು.
ಸಂಜೆ 4.30ಕ್ಕೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂಧ್ರತೀರ್ಥರ ಅಧ್ಯಕ್ಷತೆಯಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಪ್ರತಿಭಟನೆಗೆ ಸಂಘ ಪರಿವಾರ, ವಿವಿಧ ಸಂಘ ಸಂಸ್ಥೆಗಳು, ಬಿಜೆಪಿ ಬೆಂಬಲವನ್ನು ಸೂಚಿಸಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಗೋವಿಂದದಾಸ್, ಸಂಜಿತ್ ಹಾವಂಜೆ, ಅಖಿಲೇಶ್ ಉಪಸ್ಥಿತರಿದ್ದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…