Featured

ಉಡುಪಿ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ಮುಖಂಡರ ಬಂಧನ ಖಂಡಿಸಿ ಡಿ.4ರಂದು ಬೃಹತ್ ಪ್ರತಿಭಟನೆ – vishwanews24

ಉಡುಪಿ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ಮುಖಂಡರ ಬಂಧನ ಖಂಡಿಸಿ ಡಿ.4ರಂದು ಬೃಹತ್ ಪ್ರತಿಭಟನೆ

ಉಡುಪಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದುಗಳ ಮೇಲೆ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಸ್ವಾಮೀಜಿ, ಹಿಂದೂ ಮುಖಂಡರ ಬಂಧನ ಖಂಡಿಸಿ ಹಿಂದು ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಡಿ.4ರಂದು ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಸಮಿತಿಯ ಸಂಚಾಲಕ ರಾಧಾಕೃಷ್ಣ ಮೆಂಡನ್ ತಿಳಿಸಿದರು.

ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಮಧ್ಯಾಹ್ನ 3 ಗಂಟೆಗೆ ಜೋಡುಕಟ್ಟೆಯಿಂದ ಪ್ರತಿಭಟನಾ ಜಾಥ ಆರಂಭಗೊಳ್ಳಲಿದೆ. ಜಾಥವು ಕೋರ್ಟ್ ರಸ್ತೆ, ಕೆ.ಎಮ್.ಮಾರ್ಗ, ಸರ್ವೀಸ್ ರಸ್ತೆ, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಕೃಷ್ಣ ಮಠದ ಪಾರ್ಕಿಂಗ್ ವಠಾರವನ್ನು ತಲುಪಲಿದೆ‌ ಎಂದರು.

ಸಂಜೆ 4.30ಕ್ಕೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂಧ್ರತೀರ್ಥರ ಅಧ್ಯಕ್ಷತೆಯಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಪ್ರತಿಭಟನೆಗೆ ಸಂಘ ಪರಿವಾರ, ವಿವಿಧ ಸಂಘ ಸಂಸ್ಥೆಗಳು, ಬಿಜೆಪಿ ಬೆಂಬಲವನ್ನು ಸೂಚಿಸಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಗೋವಿಂದದಾಸ್, ಸಂಜಿತ್ ಹಾವಂಜೆ, ಅಖಿಲೇಶ್ ಉಪಸ್ಥಿತರಿದ್ದರು.

Vishwa News 24

Recent Posts

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

16 minutes ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

26 minutes ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

32 minutes ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

35 minutes ago

ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್‌ಒ – vishwanews24

ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್‌ಒ ಮಂಗಳೂರು: ದ.ಕ. ಜಿಲ್ಲೆಯಲ್ಲಿ ಎಚ್1ಎನ್1 ನಿಯಂ ತ್ರಣದಲ್ಲಿದ್ದು,…

53 minutes ago

ನವೆಂಬರ್ ಮೊದಲ ವಾರದಲ್ಲಿ ಉಡುಪಿ ನಗರಕ್ಕೆ ಪೈಪ್‌ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ – vishwanews24

ನವೆಂಬರ್ ಮೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ ಮಣಿಪಾಲ: ನವೆಂಬರ್ ಮೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ…

1 hour ago