ಉಡುಪಿ : ಬಾಕಿಯಿರುವ ಹಣ ನೀಡದ ಹಿನ್ನಲೆ ಸ್ನೇಹಿತನನ್ನು ಬಾವಿಗೆ ನೂಕಿ ಹತ್ಯೆ -Vishwanews24

ಉಡುಪಿ : ಹಣಕ್ಕಾಗಿ ದ್ವೇಷದಿಂದ ಸ್ನೇಹಿತನನ್ನು ಬಾವಿಗೆ ನೂಕಿ ಹತ್ಯೆಗೈದ ಘಟನೆ ಮಂದಾರ್ತಿ ಸಮೀಪದ ಹೆಗ್ಗುಂಜೆ ಗ್ರಾಮದ ಪಡುಕೋಮೆ ನಿರ್ಜೆಡ್ಡು ಎಂಬಲ್ಲಿ ನಡೆದಿದೆ.

ಮೃತ ಯುವಕನನ್ನು ನಿರ್ಜೆಂಡ್ಡುವಿನ ಮನೋಜ್‌ (21) ಎಂದು ಗುರುತಿಸಲಾಗಿದೆ.

ಹತ್ಯೆ ಮಾಡಿದ ಆರೋಪಿ ನಿರ್ಜೆಂಡ್ಡುವಿನ ಸುನಿಲ್‌ ಶೆಟ್ಟಿ (21) ತಲೆಮರೆಸಿಕೊಂಡಿದ್ದು ಪೊಲೀಸರು ಶೋಧ ಕಾರ್ಯಚರಣೆ ನಡೆಸುತ್ತಿದ್ದಾರೆ.

೨ ವರ್ಷಗಳ ಹಿಂದೆ ಮನೋಜ್‌ ಸುನಿಲ್‌ನಿಂದ 2,500 ರೂಪಾಯಿ ಹಣ ಪಡೆದಿದ್ದು ಅದನ್ನು ವಾಪಾಸ್‌ ಮಾಡಿರಲಿಲ್ಲ. ಫೋನ್‌ ಮಾಡಿದರೂ ಉತ್ತರಿಸುವುದಿಲ್ಲ ಎಂಬ ಕಾರಣಕ್ಕಾಗಿ ಮನೆಯವರಲ್ಲಿ ಸುನಿಲ್‌ ಗಲಾಟೆ ಮಾಡಿದ್ದನು.

ಈ ಸಂದರ್ಭದಲ್ಲಿ ಮನೆಯೊಳಗೆ ಮಲಗಿದ್ದ ಮನೋಜ್‌ ಹೊರಗೆ ಬಂದು ಹಣ ನೀಡುವುದಾಗಿ ಹೇಳಿದರೂ ಸುನಿಲ್ ಶೆಟ್ಟಿ ಈ ಕೂಡಲೇ ಹಣ ನೀಡಬೇಕು ಎಂದು ಪಟ್ಟುಹಿಡಿದನು. ಮನೋಜ್‌ ಹಲ್ಲು ಉಜ್ಜಲೆಂದು ಬಾವಿ ಕಟ್ಟೆಗೆ ಹೋದ ಸಂದರ್ಭದಲ್ಲಿ ಸುನಿಲ್‌ ಶೆಟ್ಟಿ ಕೂಡಾ ಅಲ್ಲಿಗೆ ಹೋಗಿದ್ದು ಸ್ವಲ್ಪ ಹೊತ್ತಿನಲ್ಲೇ ಸುನಿಲ್‌ ಶೆಟ್ಟಿ ಮನೋಜ್‌ ತಾಯಿ ರಾಧಾಬಾಯಿಗೆ ನಿಮ್ಮ ಪುತ್ರ ಬಾವಿಗೆ ಬಿದ್ದಿದ್ದಾನೆ ಎಂದು ಹೇಳಿ ಅಲ್ಲಿಂದ ಓಡಿ ಹೋಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಾಕಿಯಿರುವ ಹಣ ನೀಡದ ಹಿನ್ನಲೆಯಲ್ಲಿ ದ್ವೇಷದಿಂದ ಸುನಿಲ್‌ ಶೆಟ್ಟಿ ನನ್ನ ಪುತ್ರನನ್ನು ಬಾವಿಗೆ ದೂಡಿ ಹತ್ಯೆ ಮಾಡಿದ್ದಾನೆ ಎಂದು ರಾಧಾಬಾಯಿ ನೀಡಿದ ದೂರಿದ್ದಾರೆ.

ಈ ಕುರಿತಂತೆ ಬ್ರಹ್ಮಾವರ ಠಾಣೆಯಲ್ಲಿ ಹತ್ಯೆ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

1 hour ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

1 hour ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

4 hours ago