Featured

ಉಡುಪಿ: ಬಾಣಂತಿಯರ ಸಾವಿನ ನೈಜ ಕಾರಣಗಳನ್ನು ತಿಳಿಯಲು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಿ : ಮಹಿಳಾ ಮೋರ್ಚಾ ಒತ್ತಾಯ – vishwanews24

ಉಡುಪಿ: ಬಾಣಂತಿಯರ ಸಾವು ತಡೆಯಲು ರಾಜ್ಯ ಸರಕಾರ ವಿಫಲ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ  ಸಚಿವ ದಿನೇಶ್ ಗುಂಡೂರಾವ್ ಕೂಡಲೇ ರಾಜೀನಾಮೆ ನೀಡಬೇಕು

ಸರಕಾರಿ ಆಸ್ಪತ್ರೆಗಳಲ್ಲಿ ಮೃತಪಟ್ಟ ಬಾಣಂತಿಯ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಬೇಕು..

ಅನಾಥಗೊಂಡಿರುವ ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರ ಆ ಮಕ್ಕಳನ್ನು ದತ್ತು ಪಡೆಯಬೇಕು : ಬಿಜೆಪಿ ಮಹಿಳಾಮೋರ್ಚಾ

ಉಡುಪಿ: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಆಗುತ್ತಿರುವ ಬಾಣಂತಿಯರ ಸಾವುಗಳನ್ನು ತಡೆಯಲು ವಿಫಲರಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮಹಿಳಾಮೋರ್ಚಾದ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಒತ್ತಾಯಿಸಿದರು.

ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಣಂತಿಯರ ಸಾವಿನ ನೈಜ ಕಾರಣಗಳನ್ನು ತಿಳಿಯಲು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.

ಕಾಂಗ್ರೆಸ್ ಸರಕಾರವು ಆತ್ಮಹತ್ಯೆ ಹಾಗೂ ಹತ್ಯೆ ಭಾಗ್ಯವನ್ನು ಕರ್ನಾಟಕದ ಜನತೆಗೆ ನೀಡಿದೆ. ಕಳೆದ 19 ತಿಂಗಳಲ್ಲಿ 6 ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, 700 ಕ್ಕೂ ಹೆಚ್ಚು ಗರ್ಭಿಣಿಯರು, 1100 ಕ್ಕೂ ಅಧಿಕ ನವಜಾತ ಶಿಶುಗಳ ಸಾವಿಗೆ ಕಾಂಗ್ರೆಸ್ ಸರಕಾರ ಕಾರಣವಾಗಿದೆ.

ಗರ್ಭಿಣಿಯರ ಆರೈಕೆಗಾಗಿ ಕೇಂದ್ರ ಸರಕಾರ ಜಾರಿಗೊಳಿಸಿರುವ ಜನನಿ ಸುರಕ್ಷಾ ಯೋಜನೆ, ಜನನಿ ಶಿಶು ಸುರಕ್ಷಾ ಕಾರ್ಯಕ್ರಮ ಮೊದಲಾದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಿತಿ ಸರಕಾರದ ಹೊಣೆಗೇಡಿ ತನದಿಂದಾಗಿ ಸಂಪೂರ್ಣ ಹದಗೆಟ್ಟಿದೆ. ಸಿಬ್ಬಂದಿ ಕೊರತೆಯಿಂದ ಸೊರಗುತ್ತಿದೆ ಎಂದು ದೂರಿದರು.

ಸರಕಾರಿ ಆಸ್ಪತ್ರೆಗಳಲ್ಲಿ ಮೃತಪಟ್ಟ ಬಾಣಂತಿಯ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಬೇಕು. ಅನಾಥಗೊಂಡಿರುವ ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರ ಆ ಮಕ್ಕಳನ್ನು ದತ್ತು ಪಡೆಯಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್ ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago