ಉಡುಪಿ

ಉಡುಪಿ : ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ ಮಕ್ಕಳ ರಕ್ಷಣೆ – vishwanews24

ಉಡುಪಿ : ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ ಮಕ್ಕಳ ರಕ್ಷಣೆ

ಉಡುಪಿ: ನಗರದ ಚಿತ್ತರಂಜನ್ ಸರ್ಕಲ್ ಬಳಿ ಚಿನ್ನದ ಅಂಗಡಿಯೊoದರಲ್ಲಿ ಬಾಲಕಾರ್ಮಿಕರು ದುಡಿಯುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಮೇರೆಗೆ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಮಹಿಳಾ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ನಾಗರಿಕ ಸಮಿತಿ ಇವರುಗಳು ಮಂಗಳವಾರ ಜಂಟಿ ಕಾರ್ಯಾಚರಣೆ ನಡೆಸಿ, ಚಿನ್ನದ ಅಂಗಡಿಯಲ್ಲಿ ಅಪಾಯಕಾರಿ ಉದ್ದಿಮೆಯಾದ ಚಿನ್ನಕ್ಕೆ ಹೊಳಪು ನೀಡುವ ಕೆಲಸದಲ್ಲಿ ನಿರತರಾಗಿದ್ದ 2 ಬಾಲಕಾರ್ಮಿಕ ಮತ್ತು 1 ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಿ, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಬಾಲಕರ ಬಾಲ ಮಂದಿರದಲ್ಲಿ ಪುನರ್ ವಸತಿ ಕಲ್ಪಿಸಲಾಯಿತು.

ರಕ್ಷಣಾ ಕಾರ್ಯಾಚರಣೆಯಲ್ಲಿ ಕಾರ್ಮಿಕ ಇಲಾಖೆಯ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಅಮ್ರತಾ , ಕಾರ್ಮಿಕ ನಿರೀಕ್ಷಕ ಸಂಜಯ್, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಹೇಶ ಹಾಗೂ ಯೋಗೀಶ್, ಮಕ್ಕಳ ಸಹಾಯವಾಣಿ ಸಿಬ್ಬಂದಿ ಜ್ಯೋತಿ ಹಾಗೂ ಪ್ರಕಾಶ್, ನಗರ ಠಾಣಾ ಪೊಲೀಸರು ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

ಸಾರ್ವಜನಿಕರು ತಮ್ಮ ಸುತ್ತಮುತ್ತಲ ಪ್ರದೇಶದಲ್ಲಿ ಕೆಲಸಕ್ಕೆ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡು ಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ- 1098 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ-112 ಸಂಖ್ಯೆಗೆ ಕರೆ ಮಾಡಿ ಮಕ್ಕಳ ರಕ್ಷಣೆಗೆ ಸಹಕಾರ ನೀಡಬೇಕು. ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಹಾಗೆಯೇ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಹಾಗೂ ವಾರೆಂಟ್ ರಹಿತ ಬಂಧಿಸಬಹುದಾದ ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕನಿಷ್ಠ 6 ತಿಂಗಳಿAದ ಗರಿಷ್ಠ 2 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 20 ಸಾವಿರದಿಂದ 50 ಸಾವಿರದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago