Featured

ಉಡುಪಿ: ಬಾಲಕಿಗೆ ಲೈಂಗಿಕ ದೌರ್ಜನ್ಯ : ಅಪರಾಧಿಗೆ 3 ವರ್ಷ ಜೈಲು -Vishwanews24

ಉಡುಪಿ: ಬಾಲಕಿಗೆ ಲೈಂಗಿಕ ದೌರ್ಜನ್ಯ : ಅಪರಾಧಿಗೆ 3 ವರ್ಷ ಜೈಲು -Vishwanews24

ಉಡುಪಿ : ಏಳು ವರ್ಷದ ಬಾಲಕಿ ಸಹೋದರನ ಜೊತೆ ಮನೆಯಲ್ಲಿದ್ದ ವೇಳೆ ಅಕ್ರಮ ಪ್ರವೇಶ ಮಾಡಿ ಆಕೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಮೇಲಿನ ದೋಷಾರೋಪಣೆಗಳು ಸಾಭೀತಾದ ಹಿನ್ನೆಲೆ ದೌರ್ಜನ್ಯವೆಸಗಿದ ಆರೋಪಿ ಜಡ್ಕಲ್ ಮೂಲದ ಪ್ರಮೋದ್ (26) ಮೇಲಿದ್ದ ಅಪರಾಧ ಸಾಬೀತಾದ ಹಿನ್ನಲೆಯಲ್ಲಿ ಆತ ಅಪರಾಧಿ ಎಂದು ಘೋಷಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳು ಕಲ್ಪನಾ ಅವರು ತೀರ್ಪು ಪ್ರಕಟಿಸಿದ್ದಾರೆ.

ಘಟನೆ ವಿವರ: 2016 ಜನವರಿ ತಿಂಗಳಿನಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಕೂಲಿ ಕೆಲಸ ಮಾಡಿಕೊಂಡಿದ್ದ ಪ್ರಮೋದ್ ನೊಂದ ಬಾಲಕಿ ಹಾಗೂ ಆಕೆ ಸಹೋದರ ಮನೆಯಲ್ಲಿರುವಾಗ ಅಕ್ರಮ ಪ್ರವೇಶ‌ ಮಾಡಿದ್ದ. ಸಂತ್ರಸ್ತೆ ಸೋದರ ಮನೆಯಿಂದ ಹೊರಗಡೆ ಹೋದ ಸಂದರ್ಭ ಹೊಂಚು ಹಾಕಿ ಕಾದ ಪ್ರಮೋದ್ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ಮುಂದಾಗಿದ್ದು ಬಾಲಕಿ ಕೂಗಿಕೊಂಡಾಗ ಆಕೆ ತಾಯಿ ಹಾಗೂ ಸಹೋದರ ಬರುವುದನ್ನು ಗಮನಿಸಿದ ಆತ ಬಾಲಕಿ ಹಾಗೂ ಕುಟುಂಬಿಕರಿಗೆ ಕೊಲೆ ಬೆದರಿಕೆ ಹಾಕಿ ಪರಾರಿಯಾಗಿದ್ದ. ಈ ಬಗ್ಗೆ‌ ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ತದನಂತರ ಈ ಪ್ರಕರಣ ಅಂದು ಕುಂದಾಪುರದಲ್ಲಿದ್ದ ಮಹಿಳಾ ಠಾಣೆಗೆ ವರ್ಗಾವಣೆಯಾಗಿದ್ದು ಅಂದಿನ ಮಹಿಳಾ ಠಾಣೆ ಪಿಎಸ್ಐ ಸುಜಾತಾ ಸಾಲ್ಯಾನ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. 17 ಸಾಕ್ಷಿದಾರರಲ್ಲಿ 10 ಮಂದಿ ಸಾಕ್ಷಿ ವಿಚಾರಣೆ ನಡೆಸಿದ್ದು ಪ್ರಮುಖವಾಗಿ ಸಂತ್ರಸ್ತ ಬಾಲಕಿ ಹಾಗೂ ಆಕೆ ಸಹೋದರ ನುಡಿದ ಸಾಕ್ಷಿ ಅಭಿಯೋಜನೆಗೆ ಪೂರಕವಾಗಿದ್ದು ಆರೋಪಿ ಪ್ರಮೋದ್ ಕುಕೃತ್ಯ ನಡೆಸಿರುವುದು ಸಾಭೀತಾಗಿದೆ.

ಶಿಕ್ಷೆ ಪ್ರಮಾಣ:

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಕ್ಕೆ ಪೋಕ್ಸೋ ಕಾಯ್ದೆಯಡಿ 3 ವರ್ಷ ಕಠಿಣ ಸಜೆ, 10 ಸಾವಿರ ದಂಡ, ದಂಡ ಪಾವತಿಸದಿದ್ದಲ್ಲಿ 1 ವರ್ಷ ಸಜೆ, ಅಕ್ರಮ ಪ್ರವೇಶ (ಐಪಿಸಿ ಸೆಕ್ಷನ್ 448), ಅಕ್ರಮ ತಡೆಗೆ (ಐಪಿಸಿ 342) ತಲಾ 6 ತಿಂಗಳಿನಂತೆ 1 ವರ್ಷ ಸಜೆ, 1 ಸಾವಿರ ದಂಡ ತಪ್ಪಿದಲ್ಲಿ 2 ತಿಂಗಳು ಜೈಲು, ಕೊಲೆ ಬೆದರಿಕೆ (ಐಪಿಸಿ ಕಲಂ 506) 1 ವರ್ಷ ಜೈಲು, 1500 ರೂ ದಂಡ ತಪ್ಪಿದಲ್ಲಿ 6 ತಿಂಗಳು ಸಜೆ. ಒಟ್ಟು 12,500 ರೂ. ದಂಡದ ಮೊತ್ತದಲ್ಲಿ 7,500 ರೂ. ಸರಕಾರಕ್ಕೆ ಹಾಗೂ 5 ಸಾವಿರ ಮೊತ್ತವನ್ನು ಬಾಲಕಿಗೆ ನೀಡಲು ಮತ್ತು ಸರಕಾರದಿಂದ ನೊಂದ ಬಾಲಕಿಗೆ 25 ಸಾವಿರ ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ.

ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.

 

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 days ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 days ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 days ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago