ಉಡುಪಿ : ಏಳು ವರ್ಷದ ಬಾಲಕಿ ಸಹೋದರನ ಜೊತೆ ಮನೆಯಲ್ಲಿದ್ದ ವೇಳೆ ಅಕ್ರಮ ಪ್ರವೇಶ ಮಾಡಿ ಆಕೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಮೇಲಿನ ದೋಷಾರೋಪಣೆಗಳು ಸಾಭೀತಾದ ಹಿನ್ನೆಲೆ ದೌರ್ಜನ್ಯವೆಸಗಿದ ಆರೋಪಿ ಜಡ್ಕಲ್ ಮೂಲದ ಪ್ರಮೋದ್ (26) ಮೇಲಿದ್ದ ಅಪರಾಧ ಸಾಬೀತಾದ ಹಿನ್ನಲೆಯಲ್ಲಿ ಆತ ಅಪರಾಧಿ ಎಂದು ಘೋಷಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳು ಕಲ್ಪನಾ ಅವರು ತೀರ್ಪು ಪ್ರಕಟಿಸಿದ್ದಾರೆ.
ಘಟನೆ ವಿವರ: 2016 ಜನವರಿ ತಿಂಗಳಿನಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಕೂಲಿ ಕೆಲಸ ಮಾಡಿಕೊಂಡಿದ್ದ ಪ್ರಮೋದ್ ನೊಂದ ಬಾಲಕಿ ಹಾಗೂ ಆಕೆ ಸಹೋದರ ಮನೆಯಲ್ಲಿರುವಾಗ ಅಕ್ರಮ ಪ್ರವೇಶ ಮಾಡಿದ್ದ. ಸಂತ್ರಸ್ತೆ ಸೋದರ ಮನೆಯಿಂದ ಹೊರಗಡೆ ಹೋದ ಸಂದರ್ಭ ಹೊಂಚು ಹಾಕಿ ಕಾದ ಪ್ರಮೋದ್ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ಮುಂದಾಗಿದ್ದು ಬಾಲಕಿ ಕೂಗಿಕೊಂಡಾಗ ಆಕೆ ತಾಯಿ ಹಾಗೂ ಸಹೋದರ ಬರುವುದನ್ನು ಗಮನಿಸಿದ ಆತ ಬಾಲಕಿ ಹಾಗೂ ಕುಟುಂಬಿಕರಿಗೆ ಕೊಲೆ ಬೆದರಿಕೆ ಹಾಕಿ ಪರಾರಿಯಾಗಿದ್ದ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ತದನಂತರ ಈ ಪ್ರಕರಣ ಅಂದು ಕುಂದಾಪುರದಲ್ಲಿದ್ದ ಮಹಿಳಾ ಠಾಣೆಗೆ ವರ್ಗಾವಣೆಯಾಗಿದ್ದು ಅಂದಿನ ಮಹಿಳಾ ಠಾಣೆ ಪಿಎಸ್ಐ ಸುಜಾತಾ ಸಾಲ್ಯಾನ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. 17 ಸಾಕ್ಷಿದಾರರಲ್ಲಿ 10 ಮಂದಿ ಸಾಕ್ಷಿ ವಿಚಾರಣೆ ನಡೆಸಿದ್ದು ಪ್ರಮುಖವಾಗಿ ಸಂತ್ರಸ್ತ ಬಾಲಕಿ ಹಾಗೂ ಆಕೆ ಸಹೋದರ ನುಡಿದ ಸಾಕ್ಷಿ ಅಭಿಯೋಜನೆಗೆ ಪೂರಕವಾಗಿದ್ದು ಆರೋಪಿ ಪ್ರಮೋದ್ ಕುಕೃತ್ಯ ನಡೆಸಿರುವುದು ಸಾಭೀತಾಗಿದೆ.
ಶಿಕ್ಷೆ ಪ್ರಮಾಣ:
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಕ್ಕೆ ಪೋಕ್ಸೋ ಕಾಯ್ದೆಯಡಿ 3 ವರ್ಷ ಕಠಿಣ ಸಜೆ, 10 ಸಾವಿರ ದಂಡ, ದಂಡ ಪಾವತಿಸದಿದ್ದಲ್ಲಿ 1 ವರ್ಷ ಸಜೆ, ಅಕ್ರಮ ಪ್ರವೇಶ (ಐಪಿಸಿ ಸೆಕ್ಷನ್ 448), ಅಕ್ರಮ ತಡೆಗೆ (ಐಪಿಸಿ 342) ತಲಾ 6 ತಿಂಗಳಿನಂತೆ 1 ವರ್ಷ ಸಜೆ, 1 ಸಾವಿರ ದಂಡ ತಪ್ಪಿದಲ್ಲಿ 2 ತಿಂಗಳು ಜೈಲು, ಕೊಲೆ ಬೆದರಿಕೆ (ಐಪಿಸಿ ಕಲಂ 506) 1 ವರ್ಷ ಜೈಲು, 1500 ರೂ ದಂಡ ತಪ್ಪಿದಲ್ಲಿ 6 ತಿಂಗಳು ಸಜೆ. ಒಟ್ಟು 12,500 ರೂ. ದಂಡದ ಮೊತ್ತದಲ್ಲಿ 7,500 ರೂ. ಸರಕಾರಕ್ಕೆ ಹಾಗೂ 5 ಸಾವಿರ ಮೊತ್ತವನ್ನು ಬಾಲಕಿಗೆ ನೀಡಲು ಮತ್ತು ಸರಕಾರದಿಂದ ನೊಂದ ಬಾಲಕಿಗೆ 25 ಸಾವಿರ ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ.
ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…