Featured

ಉಡುಪಿ : ಬಾಲಕಿಯರ ಸರಕಾರಿ ಪ್ರೌಢಶಾಲೆ ಉಡುಪಿ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿನಿಯರಿಗೆ ಅಭಿನಂದನಾ ಸಮಾರಂಭ – Vishwanews24

ಉಡುಪಿ : ಬಾಲಕಿಯರ ಸರಕಾರಿ ಪ್ರೌಢಶಾಲೆ ಉಡುಪಿ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿನಿಯರಿಗೆ ಅಭಿನಂದನಾ ಸಮಾರಂಭ – Vishwanews24

ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇದರ ಪ್ರೌಢಶಾಲಾ ವಿಭಾಗದಲ್ಲಿ 2022 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿನ ಸಾಧಕ ವಿದ್ಯಾರ್ಥಿನಿಯರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.
ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಾಸಕ ಶ್ರೀ ಕೆ ರಘುಪತಿ ಭಟ್ ಮಾತನಾಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದು, ತಮ್ಮ ಈ ಸಾಧನೆ ಮುಂದಿನ ವರ್ಷದ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿ ಎಂದರು.
ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಶ್ರೀ ಯಶ್ ಪಾಲ್ ಸುವರ್ಣ ಮಾತನಾಡಿ ಬಡ ಕುಟುಂಬದ ವಿದ್ಯಾರ್ಥಿನಿ ಕುಮಾರಿ ಗಾಯತ್ರಿ 625 ಅಂಕಗಳಿಸಿ ರಾಜ್ಯಕ್ಕೇ ಪ್ರಥಮ ಸ್ಥಾನಿಯಾಗಿ, ಪ್ರಸಕ್ತ ಸಾಲಿನಲ್ಲಿ  ಶಾಲೆಯಲ್ಲಿ ಗೊಂದಲ ಸೃಷ್ಟಿಸಿ ಬಡ ವಿದ್ಯಾರ್ಥಿನಿಯರ ಶಿಕ್ಷಣವನ್ನು ಮೊಟಕುಗೊಳಿಸಲು ಯತ್ನಿಸಿದವರಿಗೆ ತನ್ನ ಸಾಧನೆಯ ಮೂಲಕ ಉತ್ತರ ನೀಡಿದ್ದಾಳೆ. ಹೃದ್ರೋಗ ತಜ್ಞೆ ಯಾಗುವ ಕನಸು ಹೊಂದಿರುವ ಗಾಯತ್ರಿಯ ಮುಂದಿನ ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚವನ್ನೂ ವೈಯುಕ್ತಕವಾಗಿ ಭರಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ 50 ಮಂದಿ ಸಾಧಕ ವಿದ್ಯಾರ್ಥಿನಿಯರಿಗೆ ಯಶ್ ಪಾಲ್ ಸುವರ್ಣ ನಗದು ಪುರಸ್ಕಾರ ನೀಡಿ ಅಭಿನಂದಿಸಿದರು.
ಸಮಾರಂಭದಲ್ಲಿ ಉಡುಪಿ ನಗಸಭೆಯ ಸದಸ್ಯರಾದ ಶ್ರೀ ರಶ್ಮಿ ಸಿ. ಭಟ್, ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರುದ್ರೇ ಗೌಡ, ಶಿಕ್ಷಣ ಇಲಾಖೆಯ  ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ವಿಶ್ವನಾಥ ಬಾಯರಿ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ  ಶ್ರೀಮತಿ ಜಯಲಕ್ಷ್ಮೀ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ವಿನೋದ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago