ಉಡುಪಿ : ಮೂರು ವರ್ಷಗಳ ಹಿಂದೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಸಗ್ರಿ ರೈಲ್ವೆ ಹಳಿಯ ಸಮೀಪದ ಹಾಡಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣದ ಆರೋಪಿ ಬಾಗಲಕೋಟೆ ಜಿಲ್ಲಾ ಬಾದಾಮಿ ತಾಲೂಕಿನ ಹನುಮಂತ ಬಸಪ್ಪ ಕಂಬಳಿ (42)ಗೆ ಜೀವಿತಾವಾಧಿ ಕಾರಾಗೃಹ ಶಿಕ್ಷೆ ಸಹಿತ ಇತರೆ ಪ್ರಕರಣಗಳಿಗೂ ಶಿಕ್ಷೆ ಹಾಗೂ ದಂಡ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.
ಆರೋಪಿ ಮೇಲಿನ ಆರೋಪ ಸಾಬೀತಾಗಿರುವುದರಿಂದ ನ್ಯಾಯಾಧೀಶ ಶ್ರಿನಿವಾಸ ಸುವರ್ಣ, ಆರೋಪಿಯನ್ನು ದೋಷಿ ಎಂಬುದಾಗಿ ಸೆ.5ರಂದು ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಸೆ.6ರಂದು ಪ್ರಕಟಿದರು.
ಬಂಟ್ವಾಳ : ಎಸ್ ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ಮನೆ ಮೇಲೆ ಎನ್ಐಎ ದಾಳಿ – Vishwanews24
ಆರೋಪಿಗೆ ಐಪಿಸಿ ಕಲಂ 302(ಕೊಲೆ) ಅಡಿಯಲ್ಲಿ ಜೀವಿತಾವಧಿ ಜೈಲು ಶಿಕ್ಷೆ ಮತ್ತು 15 ಸಾವಿರ ರೂ. ದಂಡ, ಪೋಕ್ಸೋ ಕಾಯ್ದೆಯಡಿ ಬರುವ ಅಪ್ರಾಪ್ತಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ 20 ವರ್ಷ ಜೈಲು ಮತ್ತು 10 ಸಾವಿರ ರೂ. ದಂಡ, ಅಪ್ರಾಪ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ 10 ವರ್ಷ ಜೈಲು ಮತ್ತು 5 ಸಾವಿರ ರೂ. ದಂಡ, ಸಾಕ್ಷ್ಯನಾಶದಡಿ 7 ವರ್ಷ ಜೈಲು ಹಾಗೂ 2 ಸಾವಿರ ರೂ. ದಂಡ ವಿಧಿಸಿದ್ದು ದಂಡ ಪಾವತಿ ಮಾಡಲು ತಪ್ಪಿದಲ್ಲಿ ಒಂದು ವರ್ಷ ಕಠಿನ ಸಜೆ ವಿಧಿಸಿ ಆದೇಶಿಸಿದ್ದಾರೆ. ದಂಡದ 32 ಸಾವಿರ ರೂ. ಮೊತ್ತದಲ್ಲಿ 7 ಸಾವಿರ ರೂ. ಸರಕಾರಕ್ಕೆ, 25 ಸಾವಿರ ರೂ. ಮೊತ್ತ ಮೃತ ಬಾಲಕಿ ಕುಟುಂಬಕ್ಕೆ ಹಾಗೂ ಸರಕಾರದಿಂದ ಬಾಲಕಿ ಪೋಷಕರಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯದ ತೀರ್ಪಿನಲ್ಲಿ ಹೇಳಲಾಗಿದೆ.
ಉಡುಪಿಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 17 ವರ್ಷ ಪ್ರಾಯದ ಬಾಲಕಿ 2019ರ ಮಾ. 9ರಂದು ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಹನುಮಂತ ಅಪಹರಿಸಿ, ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿದ್ದ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆಗಿನ ಮಣಿಪಾಲ ಪೊಲೀಸ್ ನಿರೀಕ್ಷಕ ಸುನಿಲ್ ಕುಮಾರ್ ತನಿಖೆ ನಡೆಸಿದ್ದರು. ಪೊಲೀಸರು ಆರೋಪಿಯನ್ನು ಹಿರಿಯಡ್ಕ ಜೈಲಿಗೆ ಕರೆದುಕೊಂಡು ಹೋಗುವಾಗ ಜೀಪಿನಿಂದ ಹಾರಿ ತಪ್ಪಿಸಿಕೊಂಡಿದ್ದ. ಬಳಿಕ ಆರೋಪಿಯನ್ನು ಬಂಧಿಸಿ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಪ್ರಾಸಿಕ್ಯೂಶನ್ ಪರವಾಗಿ ಉಡುಪಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದ ಮಂಡಿಸಿದ್ದರು.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…