Featured

ಉಡುಪಿ: ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ  – Vishwanews24

ಉಡುಪಿ: ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ

ಉಡುಪಿ : ಮೂರು ವರ್ಷಗಳ ಹಿಂದೆ ಮಣಿಪಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಮೂಡುಸಗ್ರಿ ರೈಲ್ವೆ ಹಳಿಯ ಸಮೀಪದ ಹಾಡಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣದ ಆರೋಪಿ ಬಾಗಲಕೋಟೆ ಜಿಲ್ಲಾ ಬಾದಾಮಿ ತಾಲೂಕಿನ ಹನುಮಂತ ಬಸಪ್ಪ ಕಂಬಳಿ (42)ಗೆ ಜೀವಿತಾವಾಧಿ ಕಾರಾಗೃಹ ಶಿಕ್ಷೆ ಸಹಿತ ಇತರೆ ಪ್ರಕರಣಗಳಿಗೂ ಶಿಕ್ಷೆ ಹಾಗೂ ದಂಡ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.

ಆರೋಪಿ ಮೇಲಿನ ಆರೋಪ ಸಾಬೀತಾಗಿರುವುದರಿಂದ ನ್ಯಾಯಾಧೀಶ ಶ್ರಿನಿವಾಸ ಸುವರ್ಣ, ಆರೋಪಿಯನ್ನು ದೋಷಿ ಎಂಬುದಾಗಿ ಸೆ.5ರಂದು ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಸೆ.6ರಂದು ಪ್ರಕಟಿದರು.

ಬಂಟ್ವಾಳ : ಎಸ್ ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ಮನೆ ಮೇಲೆ ಎನ್ಐಎ ದಾಳಿ – Vishwanews24

ಆರೋಪಿಗೆ ಐಪಿಸಿ ಕಲಂ 302(ಕೊಲೆ) ಅಡಿಯಲ್ಲಿ ಜೀವಿತಾವಧಿ ಜೈಲು ಶಿಕ್ಷೆ ಮತ್ತು 15 ಸಾವಿರ ರೂ. ದಂಡ, ಪೋಕ್ಸೋ ಕಾಯ್ದೆಯಡಿ ಬರುವ ಅಪ್ರಾಪ್ತಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ 20 ವರ್ಷ ಜೈಲು ಮತ್ತು 10 ಸಾವಿರ ರೂ. ದಂಡ, ಅಪ್ರಾಪ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ 10 ವರ್ಷ ಜೈಲು ಮತ್ತು 5 ಸಾವಿರ ರೂ. ದಂಡ, ಸಾಕ್ಷ್ಯನಾಶದಡಿ 7 ವರ್ಷ ಜೈಲು ಹಾಗೂ 2 ಸಾವಿರ ರೂ. ದಂಡ ವಿಧಿಸಿದ್ದು ದಂಡ ಪಾವತಿ ಮಾಡಲು ತಪ್ಪಿದಲ್ಲಿ ಒಂದು ವರ್ಷ ಕಠಿನ ಸಜೆ ವಿಧಿಸಿ ಆದೇಶಿಸಿದ್ದಾರೆ. ದಂಡದ 32 ಸಾವಿರ ರೂ. ಮೊತ್ತದಲ್ಲಿ 7 ಸಾವಿರ ರೂ. ಸರಕಾರಕ್ಕೆ, 25 ಸಾವಿರ ರೂ. ಮೊತ್ತ ಮೃತ ಬಾಲಕಿ ಕುಟುಂಬಕ್ಕೆ ಹಾಗೂ ಸರಕಾರ‌ದಿಂದ ಬಾಲಕಿ ಪೋಷಕರಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯದ ತೀರ್ಪಿನಲ್ಲಿ ಹೇಳಲಾಗಿದೆ.

ಉಡುಪಿಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 17 ವರ್ಷ ಪ್ರಾಯದ ಬಾಲಕಿ 2019ರ ಮಾ. 9ರಂದು ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಹನುಮಂತ ಅಪಹರಿಸಿ, ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿದ್ದ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆಗಿನ ಮಣಿಪಾಲ ಪೊಲೀಸ್‌ ನಿರೀಕ್ಷಕ ಸುನಿಲ್‌ ಕುಮಾರ್‌ ತನಿಖೆ ನಡೆಸಿದ್ದರು. ಪೊಲೀಸರು ಆರೋಪಿಯನ್ನು ಹಿರಿಯಡ್ಕ ಜೈಲಿಗೆ ಕರೆದುಕೊಂಡು ಹೋಗುವಾಗ ಜೀಪಿನಿಂದ ಹಾರಿ ತಪ್ಪಿಸಿಕೊಂಡಿದ್ದ. ಬಳಿಕ ಆರೋಪಿಯನ್ನು ಬಂಧಿಸಿ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಪಡುಬಿದ್ರಿ: ಪ್ರೀತಿಸಿ ಮದುವೆಯಾಗಿ ಪತ್ನಿಯ ಹೆಸರಿನಲ್ಲಿ ಸಾಲ ಮಾಡಿ ಆತ್ಮಹತ್ಯೆ ನಾಟಕವಾಡಿ ಪತ್ನಿಯ ಕೊಲೆ – Vishwanews24

ಪ್ರಾಸಿಕ್ಯೂಶನ್‌ ಪರವಾಗಿ ಉಡುಪಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದ ಮಂಡಿಸಿದ್ದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

13 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

13 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

14 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

14 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

14 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

14 hours ago