ಉಡುಪಿ: ನಗರದ ಹೊರ ವಲಯದ ಕುಕ್ಕಿಕಟ್ಟೆ ಮಾರ್ಪಳ್ಳಿಯಲ್ಲಿ ವೃದ್ದೆಯೋರ್ವರು ಆಕಸ್ಮಿಕವಾಗಿ ಬಾವಿಗೆ ಬಿದಿದ್ದು, ನಗರ ಠಾಣೆಯ ಎಸ್‍ಐ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಆಟೋ ಚಾಲಕರೊಬ್ಬರು ತಮ್ಮ ಜೀವದ ಹಂಗು ತೊರೆದು ಕೂಡಲೇ ಬಾವಿಗಿಳಿದು ವೃದ್ದೆಯನ್ನು ರಕ್ಷಿಸಿದ್ದಾರೆ.
ವೃದ್ಧೆ ತಮ್ಮ ಮನೆಯ ಬಾವಿಗೆ ಆಕಸ್ಮಿಕವಾಗಿ ಬಿದಿದ್ದು ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿಲಾಗಿದೆ. ಉಡುಪಿ ನಗರ ಠಾಣೆಯ ಪಿ.ಎಸ್.ಐ ಸದಾಶಿವ ರಾ. ಗವರೋಜಿ ತಕ್ಷಣ ಸ್ಥಳಕ್ಕಾಗಮಿಸಿದ್ದಾರೆ.
ಬಾವಿಗಿಳಿದು ಅಜ್ಜಿಯನ್ನು ರಕ್ಷಿಸುವ ಸಿದ್ದತೆಯನ್ನು ಅಗ್ನಿಶಾಮಕ ದಳದವರು ಮಾಡುತ್ತಿದ್ದಂತೆ ಎಸ್ ಐ ಸದಾಶಿವ, ಅಗ್ನಿಶಾಮಕ ದಳದ ಸಿಬ್ಬಂದಿ ವಿನಾಯಕ ಹಾಗೂ ಸ್ಥಳೀಯ ಆಟೋ ಚಾಲಕ ರಾಜೇಶ್ ನಾಯಕ್ ಕೂಡಲೇ ಬಾವಿಗಿಳಿದು ಅಜ್ಜಿಯನ್ನು ರಕ್ಷಿಸಿದ್ದಾರೆ.
ವೃದ್ದೆಯನ್ನು ರಕ್ಷಿಸಿದ ಈ ಮೂವರ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಅಭಿನಂದಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…