Featured

ಉಡುಪಿ ಬಿಆರ್ ಶೆಟ್ಟಿ ಹೆರಿಗೆ ಆಸ್ಪತ್ರೆ : ರಘುಪತಿ ಭಟ್‌ ಅವರ ನಿರ್ಲಕ್ಷ್ಯದ ಪರಿಣಾಮ ಇಂದು ಸಿಬಂದಿಗಳು ಕಷ್ಟ ಪಡುವಂತಾಗಿದೆ : ಡಿಯೋನ್‌ ಡಿಸೋಜಾ ಆರೋಪ – Vishwanews24

ಪ್ರಮೋದ್‌ ಮಧ್ವರಾಜ್‌ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡ ಆಸ್ಪತ್ರೆ ಇಂದು ರಾಜಕೀಯ ಆಟಕ್ಕೆ ಬಲಿಯಾಗುತ್ತಿರುವುದು ವಿಪರ್ಯಾಸ..

ಉಡುಪಿಯ ಶಾಸಕರು ವಸ್ತ್ರ ಸಂಹಿತೆಯ ವಿಚಾರವನ್ನು ಎತ್ತಿಕೊಂಡು ಶಾಂತಿಯನ್ನು ಹಾಳು ಮಾಡುವ ವಿಚಾರದಲ್ಲಿ ಮಗ್ನರಾಗಿದ್ದಾರೆ..

ಆಸ್ಪತ್ರೆಯ ಸಿಬಂದಿಗಳ ವೇತನವನ್ನು ತಡೆಹಿಡಿದಿರುವುದು ನಿರ್ಲಕ್ಷ್ಯ ಮತ್ತು ಅಮಾನವೀಯ ವರ್ತನೆಯಾಗಿದ್ದು ಜಿಲ್ಲಾ ಯುವ ಕಾಂಗ್ರೆಸ್‌ ಸರಕಾರದ ಧೋರಣೆಯನ್ನು ಖಂಡಿಸುತ್ತದೆ..

ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಪ್ರಸ್ತುತ ಸ್ಥಿತಿಗತಿಗೆ ಕಾರಣವಾದ ಪ್ರಸ್ತುತ ಶಾಸಕ ರಘುಪತಿ ಭಟ್‌ ಅವರಿಗೆ ಆರೋಗ್ಯದ ವಿಚಾರದಲ್ಲಿ ಇರುವ ಕಾಳಜಿಯನ್ನು ಏನು ಎನ್ನುವುದನ್ನು ಎದ್ದು ತೋರಿಸುತ್ತದೆ. ಅವರ ದಿವ್ಯ ನಿರ್ಲಕ್ಷ್ಯದ ಪರಿಣಾಮ ಇಂದು ಅಲ್ಲಿನ ಸಿಬಂದಿಗಳು ಕಷ್ಟ ಪಡುವಂತಾಗಿದೆ ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಡಿಯೋನ್‌ ಡಿಸೋಜಾ ಆರೋಪಿಸಿದ್ದಾರೆ.

ಜಿಲ್ಲೆಯ ಮಹೀಳೆಯರಿಗೆ ಮತ್ತು ಮಕ್ಕಳಿಗೆ ಉಚಿತವಾಗಿ ಉತ್ತಮ ಆರೋಗ್ಯ ಸವಲತ್ತುಗಳು ಸಿಗಬೇಕು ಎಂಬ ಕನಸನ್ನು ಇಟ್ಟುಕೊಂಡು ಹಿಂದಿನ ಸಚಿವರಾದ ಪ್ರಮೋದ್‌ ಮಧ್ವರಾಜ್‌ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡ ಆಸ್ಪತ್ರೆ ಇಂದು ರಾಜಕೀಯ ಆಟಕ್ಕೆ ಬಲಿಯಾಗುತ್ತಿರುವುದು ವಿಪರ್ಯಾಸವಾಗಿದೆ. ಪ್ರಸ್ತುತ ಸರಕಾರ ಆರೋಗ್ಯ ಕಾರ್ಯಕರ್ತರನ್ನು ಯಾವ ರೀತಿ ನಡೆಸಿಕೊಳ್ಳುತ್ತದೆ ಎನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಕೋವಿಡ್‌ ಸಮಯದಲ್ಲಿ ಅವರುಗಳು ನೀಡಿದ ಅಪರಿಮಿತಿ ಸೇವೆಯನ್ನು ಸರಕಾರ ಮರೆತಂತಿದೆ.

ಉಡುಪಿಯ ಶಾಸಕರು ವಸ್ತ್ರ ಸಂಹಿತೆಯ ವಿಚಾರವನ್ನು ಎತ್ತಿಕೊಂಡು ಶಾಂತಿಯನ್ನು ಹಾಳು ಮಾಡುವ ವಿಚಾರದಲ್ಲಿ ಮಗ್ನರಾಗಿದ್ದಾರೆ ವಿನಹ ಆರೋಗ್ಯ ಕಾರ್ಯಕರ್ತರ ನೋವುಗಳನ್ನು ಸಂಪೂರ್ಣವಾಗಿ ಮರೆತಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಆಸ್ಪತ್ರೆಯ ಎಲ್ಲಾ ಸಿಬಂದಿಗಳು ಪ್ರತಿಭಟನೆಯಲ್ಲಿ ನಿರತರಾಗಿದ್ದರೂ ಕೂಡ ಶಾಸಕರು ದಿವ್ಯ ಮೌನವನ್ನು ವಹಿಸಿದ್ದು ನಾಚಿಕೇಗೇಡಿನ ಸಂಗತಿಯಾಗಿದೆ.

15000 ಕ್ಕೂ ಅಧಿಕ ಹೆರಿಗೆಗಳನ್ನು ಮಾಡುವ ಉತ್ತಮ ಸೇವೆಯನ್ನು ನೀಡಿರುವ ಆಸ್ಪತ್ರೆಯ ಸಿಬಂದಿಗಳ ವೇತನವನ್ನು ತಡೆಹಿಡಿದಿರುವುದು ನಿರ್ಲಕ್ಷ್ಯ ಮತ್ತು ಅಮಾನವೀಯ ವರ್ತನೆಯಾಗಿದ್ದು ಜಿಲ್ಲಾ ಯುವ ಕಾಂಗ್ರೆಸ್‌ ಸರಕಾರದ ಧೋರಣೆಯನ್ನು ಖಂಡಿಸುತ್ತದೆ. ಸರಕಾರ ಕೂಡಲೇ ಮಧ್ಯಪ್ರವೇಶಿಸಿ ಸಿಬಂದಿಗಳಿಗೆ ಬಾಕಿ ಇರುವ ವೇತನವನ್ನು ಪಾವತಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago