ಉಡುಪಿ: ಉಡುಪಿಯ ಬಿಆರ್ ಶೆಟ್ಟಿ ಹೆರಿಗೆ ಆಸ್ಪತ್ರೆಯಲ್ಲಿ ಕಳೆದ ಮೂರು ತಿಂಗಳಿನಿಂದ ವೇತನ ನೀಡದಿರುವುದನ್ನು ಖಂಡಿಸಿ 153 ಸಿಬ್ಬಂದಿಗಳು ಫೆ.23ರಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಇನ್ನು ಸರ್ಕಾರ ಮತ್ತು ಬಿಆರ್ ಶೆಟ್ಟಿ ಕಂಪನಿಯ ನಡುವಿನ ತಿಕ್ಕಾಟದಿಂದ 153 ಸಿಬ್ಬಂದಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಪ್ರತಿಭಟನೆಯಲ್ಲಿ ಖಾಲಿ ಗೃಹೋಪಯೋಗಿ ವಸ್ತು ಹಾಗೂ ಪಾತ್ರೆಯನ್ನು ಪ್ರದರ್ಶಿಸಿ ತಮಗೆ ಬಂದಿರು ದುಸ್ಥಿತಿಯನ್ನು ತೊರಿಕೊಂಡರು.
ಇದನ್ನೂ ಓದಿ :
ಸರ್ಕಾರ ಮತ್ತು ಆಸ್ಪತ್ರೆಯ ಆಡಳಿತ ಮಂಡಳಿಯ ತಿಕ್ಕಾಟದಿಂದ ನಮ್ಮನ್ನು ಅನಾಥರನ್ನಾಗಿಸಿದೆ. ಕಳೆದ ಮೂರು ತಿಂಗಳಿನಿಂದ ವೇತನ ನೀಡಿಲ್ಲ, ಮನೆಯಲ್ಲಿ ನಮ್ಮ ವೇತನವನ್ನೇ ನಂಬಿ ಜೀವನ ನಡೆಸುತ್ತಿದ್ದಾರೆ, ಇದರಿಂದ ನಾವು ಸಾಕಷ್ಟು ಕಷ್ಟಪಡಬೇಕಾಗಿದೆ, ಅದರಿಂದ ನಮ್ಮ ಸಂಬಳವನ್ನು ಬಿಡುಗಡೆ ಮಾಡುವಂತೆ ಧರಣಿ ನಿರತ ಸಿಬ್ಬಂದಿ ಮನವಿ ಮಾಡಿದರು.
ಇನ್ನು ಮಾಧ್ಯಮಗಳೊಂದಿಗೆ ಮಾತನಾಡಿದ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಅಧ್ಯಕ್ಷ ನಿತ್ಯಾನಂದ ವೊಳಕಾಡು, ಸರಕಾರದ ನಿರಾಸಕ್ತಿಯಿಂದ ಇಲ್ಲಿನ 153ಕ್ಕೂ ಹೆಚ್ಚು ಸಿಬ್ಬಂದಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿಂದೆ ಇಲ್ಲಿ ಹೆರಿಗೆ ಆಸ್ಪತ್ರೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿತ್ತು. ಅಲ್ಲದೆ ನೂತನವಾಗಿ ನಿರ್ಮಾಣಗೊಂಡಿರುವ ಆಸ್ಪತ್ರೆ ಆರಂಭದಲ್ಲಿ ಉತ್ತಮ ಸೇವೆ ನೀಡುತ್ತಾ ಬಂದಿತ್ತು, ಆದರೆ ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆಯಲ್ಲಿ ಹಲವು ಸಮಸ್ಯೆಗಳು ಸೃಷ್ಟಿಯಾಗಿದೆ ಎಂದು ಹೇಳಿದರು.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…