ಉಡುಪಿ: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ವಿನ್ನರ್ ಶೈನ್‍ಶೆಟ್ಟಿ ಗೆದ್ದ ನಂತರ ತವರು ಜಿಲ್ಲೆ ಉಡುಪಿಗೆ ಪ್ರಪ್ರಥಮ ಬಾರಿಗೆ ಆಗಮಿಸಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ.
ಶೈನ್ ಶೆಟ್ಟಿ ಬಿಗ್‍ಬಾಸ್ ಗೆದ್ದ ಬಳಿ ಮೊದಲ ಬಾರಿಗೆ ಉಡುಪಿಗೆ ಮಂಗಳವಾರ ಆಗಮಿಸಿದ್ದರು. ಹೀಗಾಗಿ ಶೈನ್ ಶೆಟ್ಟಿಯನ್ನು ನಗರದ ಜೋಡುಕಟ್ಟೆಯಿಂದ ಅದ್ಧೂರಿ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಗಿತ್ತು. ಶೈನ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ನೂರಾರು ಅಭಿಮಾನಿಗಳು ಮುಗಿಬಿದ್ದರು. ನಗರದ ಪ್ರಮುಖ ರಸ್ತೆಗಳಲ್ಲಿ ಅವರ ಮೆರವಣಿಗೆ ಮಾಡಲಾಗಿದೆ.
ಕಾಲೇಜು ವಿದ್ಯಾರ್ಥಿಗಳು, ಕಲಾತಂಡಗಳು ಚಂಡೆ, ಕೀಲುಕುದುರೆ ಮತ್ತಿತರ ಸಾಂಸ್ಕೃತಿಕ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಮಂಗಳವಾರ ಸಂಜೆ ಕಾಲೇಜು ಬಿಡುವ ಸಮಯವಾದ್ದರಿಂದ ರಸ್ತೆಯ ಇಕ್ಕೆಲಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕ-ಯುವತಿಯರು ಜಮಾಯಿಸಿದ್ದರು. ತಮ್ಮ ಮೊಬೈಲ್‍ಗಳಲ್ಲಿ ಶೈನ್ ಶೆಟ್ಟಿಯ ಫೋಟೋ ತೆಗೆದುಕೊಳ್ಳಲು ಮುಗಿಬಿದ್ದಿದ್ದರು.
ನಟ ಶೈನ್ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆಯವರಾಗಿದ್ದು, ಶೈನ್ ತಂದೆ ಕುಂದಾಪುರದ ಆರ್ಡಿಯವರು. ಉಡುಪಿಯಲ್ಲಿ ಶಿಕ್ಷಣವನ್ನು ಮುಗಿಸಿ ಬೆಳ್ಳಿತೆರೆಗೆ ಮನಸೋತು ಶೈನ್ ಬೆಂಗಳೂರು ಸೇರಿದ್ದರು. ಆದರೆ ಚಿತ್ರರಂಗದಲ್ಲಿ ಹಿನ್ನಡೆಯಾದರೂ ಸಣ್ಣ ಹೋಟೆಲ್ ಉದ್ಯಮ ಆರಂಭಿಸಿದರು. ಇದೀಗ ‘ಬಿಸ್‍ಬಾಸ್’ ವಿನ್ನರ್ ಆಗಿ ಶೈನ್ ಮತ್ತೆ ಮಿಂಚುತ್ತಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…