ಉಡುಪಿ: ಬಿಗ್‍ಬಾಸ್ ನಲ್ಲಿ ಶೈನ್ ಆದ ಶೈನಿಂಗ್ ಸ್ಟಾರ್ ಗೆ ಹುಟ್ಟೂರಲ್ಲಿ ಅದ್ಧೂರಿ ಸ್ವಾಗತ -Vishwanews24

ಉಡುಪಿ: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ವಿನ್ನರ್ ಶೈನ್‍ಶೆಟ್ಟಿ ಗೆದ್ದ ನಂತರ ತವರು ಜಿಲ್ಲೆ ಉಡುಪಿಗೆ ಪ್ರಪ್ರಥಮ ಬಾರಿಗೆ ಆಗಮಿಸಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ.

ಶೈನ್ ಶೆಟ್ಟಿ ಬಿಗ್‍ಬಾಸ್ ಗೆದ್ದ ಬಳಿ ಮೊದಲ ಬಾರಿಗೆ ಉಡುಪಿಗೆ ಮಂಗಳವಾರ ಆಗಮಿಸಿದ್ದರು. ಹೀಗಾಗಿ ಶೈನ್ ಶೆಟ್ಟಿಯನ್ನು ನಗರದ ಜೋಡುಕಟ್ಟೆಯಿಂದ ಅದ್ಧೂರಿ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಗಿತ್ತು. ಶೈನ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ನೂರಾರು ಅಭಿಮಾನಿಗಳು ಮುಗಿಬಿದ್ದರು. ನಗರದ ಪ್ರಮುಖ ರಸ್ತೆಗಳಲ್ಲಿ ಅವರ ಮೆರವಣಿಗೆ ಮಾಡಲಾಗಿದೆ.

 

ಕಾಲೇಜು ವಿದ್ಯಾರ್ಥಿಗಳು, ಕಲಾತಂಡಗಳು ಚಂಡೆ, ಕೀಲುಕುದುರೆ ಮತ್ತಿತರ ಸಾಂಸ್ಕೃತಿಕ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಮಂಗಳವಾರ ಸಂಜೆ ಕಾಲೇಜು ಬಿಡುವ ಸಮಯವಾದ್ದರಿಂದ ರಸ್ತೆಯ ಇಕ್ಕೆಲಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕ-ಯುವತಿಯರು ಜಮಾಯಿಸಿದ್ದರು. ತಮ್ಮ ಮೊಬೈಲ್‍ಗಳಲ್ಲಿ ಶೈನ್ ಶೆಟ್ಟಿಯ ಫೋಟೋ ತೆಗೆದುಕೊಳ್ಳಲು ಮುಗಿಬಿದ್ದಿದ್ದರು.

 

ನಟ ಶೈನ್ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆಯವರಾಗಿದ್ದು, ಶೈನ್ ತಂದೆ ಕುಂದಾಪುರದ ಆರ್ಡಿಯವರು. ಉಡುಪಿಯಲ್ಲಿ ಶಿಕ್ಷಣವನ್ನು ಮುಗಿಸಿ ಬೆಳ್ಳಿತೆರೆಗೆ ಮನಸೋತು ಶೈನ್ ಬೆಂಗಳೂರು ಸೇರಿದ್ದರು. ಆದರೆ ಚಿತ್ರರಂಗದಲ್ಲಿ ಹಿನ್ನಡೆಯಾದರೂ ಸಣ್ಣ ಹೋಟೆಲ್ ಉದ್ಯಮ ಆರಂಭಿಸಿದರು. ಇದೀಗ ‘ಬಿಸ್‍ಬಾಸ್’ ವಿನ್ನರ್ ಆಗಿ ಶೈನ್ ಮತ್ತೆ ಮಿಂಚುತ್ತಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

24 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

24 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

24 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

1 day ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

1 day ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

1 day ago