ಉಡುಪಿ :ಇಂದು ಕುತೂಹಲದಿಂದ ಕಾಯುತ್ತಿದ್ದ ಸ್ಥಳೀಯ ಸಂಸ್ಥೆಗಳು ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು ವಿಧಾನಸಭಾ ಚುನಾವಣೆಯ ಫಲಿತಾಂಶದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಿದೆ. ವಿಶೇಷ ಏನೆಂದರೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತಿದ್ದಾರೆ.
ಉಡುಪಿ ನಗರಸಭೆ :
ಉಡುಪಿ ನಗರಸಭೆಯಲ್ಲಿ ಬಿಜೆಪಿ ಪಾರಮ್ಯ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ನಿಂದ ಅಧಿಕಾರವನ್ನು ಕಸಿದುಕೊಂಡಿದೆ. ಉಡುಪಿ ನಗರಸಭೆ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ಈ ನಗರ ಸಭೆ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೂಲಕ ದೇಶದಲ್ಲೇ ಬಿಜೆಪಿಗೆ ಪ್ರಥಮ ಅಧಿಕಾರ ಕೊಟ್ಟಿದೆ. ಈ ನಗರಸಭೆಯಲ್ಲಿ 1998 ರಲ್ಲಿ ಜನಸಂಘ ಅಧಿಕಾರ ಹಿಡಿದಿತ್ತು. ಆದರೆ ಈಗ ಸುವರ್ಣ ವರ್ಷದಲ್ಲಿ ಬಿಜೆಪಿಗೆ ಗೆಲುವು ಲಭಸಿದೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೆ ಭಾರೀ ಮುಖಭಂಗವಾಗಿದ್ದು, ಪ್ರಮೋದ್ ಮಧ್ವರಾಜ್ ವಾರ್ಡ್ ನಲ್ಲೂ ಬಿಜೆಪಿ ಗೆಲುವು ಸಾಧಿಸಿದೆ. ನಗರಸಭಾ ಮಾಜಿ ಅಧ್ಯಕ್ಷೆ ಮೀನಾಕ್ಷಿ ಬನ್ನಂಜೆಗೆ ಸೋಲಾಗಿದೆ. ಈ ನಗರದಸಭೆಯಲ್ಲಿ ಬಿಜೆಪಿ 31 ಮತ್ತು ಕಾಂಗ್ರೆಸ್4 ಸ್ಥಾನಗಳನ್ನು ಗಳಿಸಿದೆ.
ಉಡುಪಿ ನಗರಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ. 35 ವಾರ್ಡ್‌ಗಳ ಪೈಕಿ 21 ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡು ಭರ್ಜರಿ ಜಯಗಳಿಸಿದೆ.
ಇಲ್ಲಿ ಕಾಂಗ್ರೆಸ್ ಕೇವಲ 4ರಲ್ಲಿ ಮಾತ್ರ ಜಯ ಗಳಿಸಿ ಹೀನಾಯ ಸೋಲು ಕಂಡಿದೆ. ಬಿಜೆಪಿ ಜಯಗಳಿಸುವ ಮೂಲಕ ಈ ಹಿಂದೆ ಆಡಳಿತವಿದ್ದ ಕಾಂಗ್ರೆಸ್‌ನಿಂದ ಉಡುಪಿ ನಗರಸಭೆಯನ್ನು ಬಿಜೆಪಿ ಮತ್ತೆ ತನ್ನ ಮುಷ್ಟಿಗೆ ಪಡೆದುಕೊಂಡಿದೆ.
ಕುಂದಾಪುರ ಪುರಸಭೆ
ಈ ಪುರಸಭೆಯಲ್ಲಿ ಬಿಜೆಪಿ 14, ಕಾಂಗ್ರೆಸ್ 8 ಮತ್ತು ಪಕ್ಷೇತರ 1 ಗೆಲವು ಸಾಧಿಸಿದ್ದು, ಬಿಜೆಪಿ ಅಧಿಕಾರಕ್ಕೆ ಏರಲಿದೆ. ಬಿಜೆಪಿ ಬಂಡಾಯ ಅಭ್ಯರ್ಥಿ ರಾಜೇಶ್ ಕಾವೇರಿಗೆ ಬಿಜೆಪಿಯೆದುರು ಸೋಲಾಗಿದ್ದು, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮತ್ತೆ ಮೇಲುಗೈ ಸಾಧಿಸಿದ್ದಾರೆ. ಇದರಿಂದ ಎಂಎಲ್‍ಸಿ ಪ್ರತಾಪ್ ಚಂದ್ರ ಶೆಟ್ಟಿಗೆ ಮುಖಭಂಗವಾಗಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…