Featured

ಉಡುಪಿ: ಬಿಜೆಪಿಯಲ್ಲಿ ನನಗೆ ಅಧಿಕಾರ ಕೊಡಲಿ , ಕೊಡದೇ ಇರಲಿ ನಾನು ಕೊನೆಯ ಉಸಿರಿನವರೆಗೂ ಬಿಜೆಪಿಯಲ್ಲಿಯೇ ಇರುತ್ತೇನೆ : ಪ್ರಮೋದ್ ಮಧ್ವರಾಜ್ – Vishwanews24

ಉಡುಪಿ: ಬಿಜೆಪಿಯಲ್ಲಿ ನನಗೆ ಅಧಿಕಾರ ಕೊಡಲಿ ಅಥವಾ ಕೊಡದೇ ಇರಲಿ ನಾನು ಕೊನೆಯ ಉಸಿರಿನವರೆಗೂ ಬಿಜೆಪಿಯಲ್ಲಿಯೇ ಇರುತ್ತೇನೆ : ಪ್ರಮೋದ್ ಮಧ್ವರಾಜ್

ಉಡುಪಿ: ನಾನು ಹೋದಲೆಲ್ಲಾ ಜೆಡಿಎಸ್ ನನ್ನ ಹಿಂದೇಯೇ ಬರುತ್ತಿದೆ ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇತ್ತು, ಈ ಬಾರಿ ಬಿಜೆಪಿ – ಜೆಡಿಎಸ್ ಮೈತ್ರಿ ಇದೆ ಹೀಗಾಗಿ ನನಗೆ ಸಂತೋಷ ಇದೆ. ನನಗೆ ಶಾಲು ಹಾಕಿ ಅಭ್ಯಾಸ ಇದೆ ಎಂದು ಮಾಜಿ ಸಚಿವ, ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಪತ್ರಿಕಾಭವನದಲ್ಲಿ ಪತ್ರಕರ್ತರೊಂದಿಗೆ ನಡೆದ ಸಂವಾದ ದಲ್ಲಿ ಮಾತನಾಡಿದ ಅವರು , ಆಕಾಂಕ್ಷಿಯಾಗುವುದರಲ್ಲಿ ಯಾವುದೇ ತಪ್ಪು ಇಲ್ಲ. ಎಲ್ಲರೂ ಆಸೆಯಿಂದಲೇ ರಾಜಕೀಯಕ್ಕೆ ಬರುತ್ತಾರೆ. 3-4 ತಿಂಗಳ ಹಿಂದೇಯೇ ನಾನು ಟಿಕೆಟ್ ಆಕಾಂಕ್ಷಿ ಎಂದು ಘೋಷಿಸಿದ್ದೆ ಎಂದರು.

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 8 ವಿಧಾನಸಬಾ ಕ್ಷೇತ್ರಗಳು ಇವೆ. ಹೀಗಾಗಿ ಲೆಕ್ಕ ಹಾಕಿದರೆ ಕಡಿಮೆ ಎಂದರೂ ಇಲ್ಲಿ ಕಾರ್ಯಕರ್ತರ ಭೇಟಿಗೆ ಸುಮಾರು 24 ತಿಂಗಳ ಕಾಲಾವಕಾಶ ಬೇಕಾಗಬಹುದು. ಹೀಗಾಗಿ ಈಗಾಗಲೇ ಶಕ್ತಿ ಕೇಂದ್ರ ಮತ್ತು ಪ್ರಮುಖರ ಭೇಟಿ ಮಾಡಿ ಸಭೆ ನಡೆಸುತಿದ್ದೇನೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಕೂಡಾ ನಾನು ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡಲು ತಯಾರಿದ್ದೇನೆ ಎಂದು ತಿಳಿಸಿದರು.

ಕಳೆದ ಬಾರಿ ನನಗೆ ಕೊನೆಯ ಕ್ಷಣ ಟಿಕೆಟ್ ಘೋಷಣೆ ಮಾಡಲಾಗಿತ್ತು ಹೀಗಾಗಿ ಕಾರ್ಯಕರ್ತರ ಭೇಟಿ ಮಾಡಲು ಸಮಯ ಸಿಕ್ಕಿರಲಿಲ್ಲ. ಇದರಿಂದ ಪಾಠ ಕಲಿತಿರುವ ನಾನು ಈ ಬಾರಿ ಬೇಗನೇ ಕಾರ್ಯಕರ್ತರ ಭೇಟಿ ಆರಂಭ ಮಾಡಿದ್ದೇನೆ. ಬಿಜೆಪಿಯಲ್ಲಿ ನನಗೆ ಅಧಿಕಾರ ಕೊಡಲಿ ಅಥವಾ ಕೊಡದೇ ಇರಲಿ ನಾನು ಕೊನೆಯ ಉಸಿರಿನವರೆಗೂ ಬಿಜೆಪಿಯಲ್ಲಿಯೇ ಇರುತ್ತೇನೆ” ಎಂದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago