Featured

ಉಡುಪಿ : ಬಿಜೆಪಿಯವರು ಗೃಹಲಕ್ಷ್ಮೀ ಯೋಜನೆ ಯಶಸ್ಸಿಗೆ ಮಸಿಬಳಿಯುವ ಕೆಲಸ ಮಾಡುತ್ತಿದ್ದಾರೆ :  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ – vishwanews24

ಉಡುಪಿ : ಬಿಜೆಪಿಯವರು ಗೃಹಲಕ್ಷ್ಮೀ ಯೋಜನೆ ಯಶಸ್ಸಿಗೆ ಮಸಿಬಳಿಯುವ ಕೆಲಸ ಮಾಡುತ್ತಿದ್ದಾರೆ :  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ

ಉಡುಪಿ : ಗೃಹಲಕ್ಷ್ಮೀ ಯೋಜನೆ ಹಣ ಜಮಾ ಆಗಿರುವ ಬಗ್ಗೆ ನಾನು ಸದನಕ್ಕೆ ಯಾವುದೇ ತಪ್ಪು ಮಾಹಿತಿ ನೀಡಿಲ್ಲ. ಈವರೆಗೆ 23 ಕಂತುಗಳ ಹಣವನ್ನು ಫಲಾನುಭವಿಗಳ ಖಾತೆ ಸಂದಾಯ ಮಾಡಲಾಗಿದೆ ಎಂದು ತಿಳಿಸಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಾವು ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಾಗಿನಿಂದಲೂ ಈ ಯೋಜನೆಯನ್ನು ಬಿಜೆಪಿ ನಾಯಕರು ಟೀಕಿಸುತ್ತಲೇ ಬಂದಿದ್ದರು. ಹಾದಿ ಬೀದಿಯಲ್ಲಿ ಯೋಜನೆ ವಿರುದ್ಧ ಹೋರಾಟ ಮಾಡಿ ಮಾತನಾಡುತ್ತಿದ್ದರು. ಈಗ ಗೃಹಲಕ್ಷ್ಮೀ ಯೋಜನೆ ಯಶಸ್ವಿಯಾಗಿದ್ದು, ಕೋಟ್ಯಂತರ ಮಹಿಳೆಯರ ಬದುಕಿಗೆ ಆಸರೆಯಾಗಿದೆ. ಈಗ ಇದ್ದಕ್ಕಿದಂತೆ ಬಿಜೆಪಿ ನಾಯಕರಿಗೆ ಗೃಹಲಕ್ಷ್ಮೀ ಯೋಜನೆ ಬಗ್ಗೆ ಕಾಳಜಿ ಶುರುವಾಗಿದೆ.

ಎರಡು ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮಾ ಆಗಿಲ್ಲ. ಅದನ್ನು ಹಾಕಿಸುವ ಕೆಲಸ ಮಾಡುತ್ತೇವೆ. ಗೃಹಲಕ್ಷ್ಮೀ ಯೋಜನೆ ಬಗ್ಗೆ ಯಾವುದೇ ಗೊಂದಲವೂ ಇಲ್ಲ, ಗೊಂದಲಗಳೂ ಬೇಡ. ಅನಗತ್ಯವಾಗಿ ಬಿಜೆಪಿಯವರು ಗೃಹಲಕ್ಷ್ಮೀ ಯೋಜನೆ ಯಶಸ್ಸಿಗೆ ಮಸಿಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಂತುಗಳ ಲೆಕ್ಕದಲ್ಲಿ ನಾನು ಸದನಕ್ಕೆ ಮಾಹಿತಿ ನೀಡಿದ್ದೆ. ಆದರೆ, ಫೆಬ್ರವರಿ, ಮಾರ್ಚ್ ತಿಂಗಳ ಹಣ ಸಂದಾಯ ಆಗಿಲ್ಲ ಎಂದು ವಿರೋಧ ಪಕ್ಷದವರು ಪ್ರಶ್ನಿಸಿದಾಗ, ನಾನು ಹಣಕಾಸು ಇಲಾಖೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿದೆ. ನಾನು ಇದರ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಜಮಾ ಆಗಿಲ್ಲದಿದ್ದರೆ ಹಣವನ್ನು ಹಾಕುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಸಚಿವರು ಹೇಳಿದರು.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

15 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

15 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

16 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

16 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

16 hours ago