ಉಡುಪಿ : ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಪದಾಧಿಕಾರಿಗಳು ಮತ್ತು ಆಯ್ದ ಕಾರ್ಯಕರ್ತರಿಗೆ ಕೊರೋನಾ ನಿಮಿತ್ತ ಆನ್ ಲೈನ್ ಮೂಲಕ ಹಮ್ಮಿಕೊಳ್ಳಲಾಗಿದ್ದ ಇ-ಪ್ರಶಿಕ್ಷಣದ ಸರಣಿ ವರ್ಗವು ಸೋಮವಾರ ಸಂಪನ್ನಗೊಂಡಿತು.
ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಪ್ರಕೋಷ್ಠಗಳ ಸಂಚಾಲಕರು, ಸಹ ಸಂಚಾಲಕರು, ಜಿಲ್ಲೆಯ ಕಾರ್ಯಕಾರಿಣಿ ಸದಸ್ಯರು, ಜಿಲ್ಲೆಯವರಾದ ರಾಜ್ಯ, ರಾಷ್ಟ್ರೀಯ ಪದಾಧಿಕಾರಿಗಳು ಮತ್ತು ಆಯ್ದ ಜನಪ್ರತಿನಿಧಿಗಳಿಗೆ ಪಕ್ಷದ ತತ್ವ-ಸಿದ್ಧಾಂತಗಳ ಕುರಿತಾದ ಬದ್ಧತೆ ಮತ್ತು ತಿಳುವಳಿಕೆಯನ್ನು ನೀಡುವ ಪ್ರಶಿಕ್ಷಣ ವರ್ಗವು ಬಹಳ ಮಹತ್ವದ್ದಾಗಿದ್ದು ಸಾಮಾನ್ಯವಾಗಿ ಪ್ರತೀ ಮೂರು ವರ್ಷಗಳಿಗೊಮ್ಮೆ ನಡೆಸಲಾಗುತ್ತಿದೆ.
ಈ ಬಾರಿ ಕೊರೋನಾ ಮಹಾಮಾರಿಯ ಹಿನ್ನಲೆಯಲ್ಲಿ ಜಿಲ್ಲಾ ಇ-ಶಿಕ್ಷಣ ವರ್ಗವನ್ನು ಗೂಗಲ್ ಮೀಟ್ ಮೂಲಕ ಆಯೋಜಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರದ ಎನ್.ಡಿ.ಎ. ಸರಕಾರದ ಏಳು ವರ್ಷಗಳ ಸಾಧನೆಗಳು, ಕೇಂದ್ರದ ಕೃಷಿ ಸುಧಾರಣಾ ಕಾಯ್ದೆ ಮತ್ತು ಸಾಧನೆಗಳು, ಡಾ|| ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನ ಮತ್ತು ಚಿಂತನೆಗಳು, ರಾಷ್ಟ್ರೀಯ ಸುರಕ್ಷತೆ, ನಮ್ಮ ವಿದೇಶಾಂಗ ನೀತಿ ಮತ್ತು ಸಾಧನೆಗಳು, ಬಡವರ ಕಲ್ಯಾಣಕ್ಕಾಗಿ ನಮ್ಮ ಸಂಕಲ್ಪ ಮತ್ತು ಆ ದಿಸೆಯಲ್ಲಿ ನಮ್ಮ ಸಾಧನೆಗಳು… ಇವೇ ಮೊದಲಾದ ಮಹತ್ವಪೂರ್ಣ ವಿಚಾರಗಳ ಬಗ್ಗೆ ಇ-ಪ್ರಶಿಕ್ಷಣ ವರ್ಗಗಳನ್ನು ಏರ್ಪಡಿಸಲಾಗಿತ್ತು.
ಭಾರತೀಯ ಜನತಾ ಪಾರ್ಟಿಯ ವಿವಿಧ ಸ್ತರದ ಜವಾಬ್ದಾರಿಗಳನ್ನು ಹೊಂದಿರುವ ಚಿಂತಕರುಗಳಾಸ ಸಂಜೀವ ಮಠಂದೂರು, ಎಂ.ಜಿ. ಮಹೇಶ್, ಡಾ. ಎಚ್. ವಿ. ಶಿವಯೋಗಿಸ್ವಾಮಿ, ತೇಜಸ್ವಿ ಸೂರ್ಯ, ಚನ್ನಮಲ್ಲಿಕಾರ್ಜುನ ಪಾಟೀಲ್ ಮತ್ತು ಡಾ. ಸಮೀರ್ ಕಾಗಲ್ಕರ್ ಮೊದಲಾದವರು ಇ-ಪ್ರಶಿಕ್ಷಣದ ವಿವಿಧ ವರ್ಗಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
ಇ-ಪ್ರಶಿಕ್ಷಣ ವರ್ಗದ ಅಪೇಕ್ಷಿತರಿಗೆ ಆನ್ ಲೈನ್ ಮೂಲಕ ತಾವಿದ್ದಲ್ಲಿಂದಲೇ ಈ ವರ್ಗಗಳಲ್ಲಿ ಪಾಲ್ಗೊಳ್ಳಲು ಅನುವು ಮಾಡಿಕೊಟ್ಟಿರುವುದರಿಂದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ದೊಡ್ಡ ಸಂಖ್ಯೆಯಲ್ಲಿ ಈ ಪ್ರಶಿಕ್ಷಣ ವರ್ಗಗಳಲ್ಲಿ ಸಕ್ರಿಯವಾಗಿ ಭಾಗಿಗಳಾದರು.
ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ ಎಸ್. ಕಲ್ಮಾಡಿ ಮತ್ತು ಸದಾನಂದ ಉಪ್ಪಿನಕುದ್ರು ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್ ಮತ್ತು ಪ್ರಶಿಕ್ಷಣ ಪ್ರಕೋಷ್ಠದ ಜಿಲ್ಲಾ ಸಂಚಾಲಕ ರಘುವೀರ್ ಶೆಣೈ ಯವರು ಇ-ಪ್ರಶಿಕ್ಷಣ ವರ್ಗದ ಯಶಸ್ವಿಗೆ ಶ್ರಮಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…