ಉಡುಪಿ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಅರಣ್ಯ ಸಚಿವ ಅರವಿಂದ ಲಿಂಬಾವಳಿ -Vishwanews24

Featured, ಉಡುಪಿ

ಉಡುಪಿ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಅರಣ್ಯ ಸಚಿವ ಅರವಿಂದ ಲಿಂಬಾವಳಿ -Vishwanews24

ಉಡುಪಿ : ಇಂದು ಮತ್ತು ನಾಳೆ ಜಿಲ್ಲಾ ಪ್ರವಾಸದಲ್ಲಿರುವ ಅರಣ್ಯ ಸಚಿವ ಅರವಿಂದ ಲಿಂಬಾವಳಿಯವರು ಇಂದು ಉಡುಪಿಯ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಸಚಿವರಾದ ಮೇಲೆ ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಆಗಮಿಸಿದ ಅರವಿಂದ ಲಿಂಬಾವಳಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಬಳಿಕ ಜಿಲ್ಲಾ ಬಿಜೆಪಿ ವತಿಯಿಂದ ಸಚಿವರನ್ನು ಸನ್ಮಾನಿಸಿ ಗೌರವಿಸಲಾಯಿತು. ಉಡುಪಿ ಶಾಸಕ ರಘುಪತಿ ಭಟ್, ಶಾಸಕ ಸುನಿಲ್ ಕುಮಾರ್, ಕಾಪು ಶಾಸಕ ಲಾಲಾಜಿ ಮೆಂಡನ್, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ,ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಹಿತ ಬಿಜೆಪಿ ಮುಖಂಡರು ಹಾಜರಿದ್ದರು.