ಉಡುಪಿ

ಉಡುಪಿ : ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ದಲಿತ ಕವಿ ಡಾ. ಸಿಧ್ಧಲಿಂಗಯ್ಯನವರಿಗೆ “ಕವಿನಮನ”  -Vishwanews24

ಉಡುಪಿ : ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ದಲಿತ ಕವಿ ಡಾ. ಸಿಧ್ಧಲಿಂಗಯ್ಯನವರಿಗೆ “ಕವಿನಮನ”  -Vishwanews24

ಉಡುಪಿ : 12 ಶತಮಾನದಲ್ಲಿ ನಡೆದ ಬಸವಣ್ಣನವರ ಸಾಮಾಜಿಕ ಚಳುವಳಿಯ ಮುಂದುವರಿದ ಪರಿವರ್ತನೆಯ ಭಾಗವಾಗಿ ಆಧುನಿಕ ಕನ್ನಡ ಸಾಹಿತ್ಯದ ದಲಿತ-ಬಂಡಾಯ ಸಾಹಿತ್ಯ ಚಳುವಳಿ ಡಾ.ಸಿದ್ದಲಿಂಗಯ್ಯರ ಮೂಲಕ ನೆಲೆ ಕಂಡಿದೆ ಎಂದು ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀ ಕೃಷ್ಣಮೂರ್ತಿ ಡಿ.ಬಿ. ತಿಳಿಸಿದರು.

ಇವರು ಭಾರತೀಯ ಜನತಾ ಪಾರ್ಟಿ ಉಡುಪಿ ಇದರ ಜಿಲ್ಲಾ ಹಾಗೂ ನಗರ ಎಸ್ ಸಿ ಮೋರ್ಚಾದ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚಾದ ಅಧ್ಯಕ್ಷರಾದ ಶ್ರೀ ಗೋಪಾಲ ಕಳೆಂಜಿ ಅವರ ಅಧ್ಯಕ್ಷತೆಯಲ್ಲಿ ನಡೆದ, ನಾಡೋಜ ಡಾ. ಸಿಧ್ಧಲಿಂಗಯ್ಯನವರಿಗೆ “ಕವಿ ನಮನ” ಕಾರ್ಯಕ್ರಮದಲ್ಲಿ ದಲಿತ ಕವಿ ಡಾ. ಸಿಧ್ಧಲಿಂಗಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿ ನಾಡೋಜ ಡಾ. ಸಿಧ್ಧಲಿಂಗಯ್ಯ ಇವರ ಜೀವನ ಚರಿತ್ರೆ ಕುರಿತು ಮಾತನಾಡಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ಶ್ರೀ ನವೀನ್ ಶೆಟ್ಟಿ, ಉಡುಪಿ ಜಿ.ಪಂ. ನಿಕಟಪೂರ್ವ ಅಧ್ಯಕ್ಷ, ರಾಜ್ಯ ಬಿಜೆಪಿ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀ ದಿನಕರ ಬಾಬು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ವೀಣಾ ಶೆಟ್ಟಿ, ಜಿಲ್ಲಾ ಎಸ್ ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀ ಸದಾನಂದ ಆರ್ ಕೈಪುಂಜಾಲು, ನಗರ ಎಸ್ ಸಿ ಮೋರ್ಚಾ ದ ಅಧ್ಯಕ್ಷರಾದ ಶ್ರೀ ಕಿರಣ್ ಕುತ್ಪಾಡಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago