ಉಡುಪಿ : ಬಿ.ಜೆ.ಪಿ.ಯ ಪ್ರಕೋಷ್ಠಗಳು ಸಕ್ರಿಯವಾಗಿ ತೊಡಗಿಸಿಕೊಂಡಾಗ ಪಕ್ಷ ಸಂಘಟನೆಗೆ ಹೆಚ್ಚಿನ ಶಕ್ತಿ ತುಂಬಿದ0ತಾಗುತ್ತದೆ. ಪಕ್ಷದ ವಿವಿಧ ಘಟಕಗಳ ಚಟುವಟಿಕೆಗಳೆಲ್ಲವೂ ಪಕ್ಷದ ಸೇವೆಯೇ ಆಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ರಂಗಗಳನ್ನು ಪ್ರತಿನಿಧಿಸುವ ಎಲ್ಲ ೨೪ ಪ್ರಕೋಷ್ಠಗಳು ಸಕ್ರಿಯವಾಗಿ ಕಾರ್ಯೋನ್ಮುಖವಾಗಲಿ. ಪಕ್ಷದ ಕೆಲಸ ಕಾರ್ಯಗಳ ಮೂಲಕ ದೇಶದ ಸೇವೆ ಎಂಬ ಉದಾತ್ತ ಧ್ಯೇಯ ಇನ್ನಷ್ಟು ಸದೃಢವಾಗಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಕಲೆ ಮತ್ತು ಸಾಂಸ್ಕçತಿಕ ಪ್ರಕೋಷ್ಠದ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸರಣಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಜನಧ್ವನಿ ಜಾಥಾ ಆರಂಭಿಸಿದ ಸಿದ್ದರಾಮಯ್ಯ – ಡಿಕೆಶಿ -Vishwanews24
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವೆನಿಸಿದ ಬಿಜೆಪಿಯಲ್ಲಿ ಸಂಘಟನೆಗಾಗಿ ವಿವಿಧ ಮಂಡಲ ಮೋರ್ಚಾ ಪ್ರಕೋಷ್ಠಗಳ ಮೂಲಕ ಬಹಳಷ್ಟು ಅವಕಾಶಗಳಿವೆ. ನಿರಂತರ ಚಟುವಟಿಕೆಗಳಿಂದ ಯಶಸ್ಸನ್ನು ಸಾಧಿಸಲು ಸಾಧ್ಯ. ಇಂದಿನ ತಾಂತ್ರಿಕ ಯುಗದಲ್ಲಿ ಕಲೆ, ಸಾಂಸ್ಕçತಿಕ ಕಾರ್ಯಕ್ರಮಗಳು ಒತ್ತಡಗಳ ನಡುವಿನ ಬದುಕಿನಲ್ಲಿ ಮನಸ್ಸಿಗೆ ತುಸು ಸಂತಸ ನೀಡುವ ವಾಹಕಗಳಾಗಿವೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಯ ಜೊತೆಗೆ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿವ ಜಿಲ್ಲಾ ಕಲೆ ಮತ್ತು ಸಾಂಸ್ಕçತಿಕ ಪ್ರಕೋಷ್ಠದ ಮುಂದಿನ ಯೋಜನೆಗಳು ಫಲಪ್ರದವಾಗಲಿ ಎಂದು ಶುಭ ಹಾರೈಸಿದರು.
ಬಿಜೆಪಿ ಜಿಲ್ಲಾ ಕಲೆ ಮತ್ತು ಸಾಂಸ್ಕçತಿಕ ಪ್ರಕೋಷ್ಠದ ಸಂಚಾಲಕ ಗಣೇಶ್ ಬ್ರಹ್ಮಾವರ ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕುಮಾರ್ ಉದ್ಯಾವರ ಹಾಗೂ ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಜಿಲ್ಲಾ ಕಲೆ ಮತ್ತು ಸಾಂಸ್ಕçತಿಕ ಪ್ರಕೋಷ್ಠದ ಸಮಿತಿ ಸದಸ್ಯೆ ಶೃತಿ ಕಾಶಿ ಕಾರ್ಯಕ್ರಮ ನಿರೂಪಿಸಿದರು. ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು ವಂದಿಸಿದರು.
ಸಾAಸ್ಕçತಿಕ ಕಾರ್ಯಕ್ರಮಗಳ ಅಂಗವಾಗಿ ಮಾತೃ ಮಂಡಳಿ ಕಡಿಯಾಳಿ ತಂಡದಿAದ ಭಜನಾ ಕಾರ್ಯಕ್ರಮ ಮತ್ತು ಕಲಾರ್ಘ್ಯ ಉಡುಪಿ ತಂಡದಿAದ ನೃತ್ಯ ಸಂಗೀತ ವೈವಿಧ್ಯ ಕಾರ್ಯಕ್ರಮ ಜರಗಿತು.
ನಾವು ರಾಜಕಾರಣಿಗಳೆಂದು ಹೇಳಿಕೊಳ್ಳಲು ಅಸಹ್ಯವಾಗುತ್ತಿದೆ : ಡಿ.ಕೆ.ಶಿ -Vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…