ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೆಲವೊಂದು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕರು ಸೇರಿದಂತೆ ಆಕಾಂಕ್ಷಿ ಅಭ್ಯರ್ಥಿಗಳು ಮುಂದಿನ ಚುನಾವಣೆಯ ದೃಷ್ಟಿಯಿಂದ ತಿರುಗಾಟ ಆರಂಭ ಮಾಡಿದ್ದು ಆದರೇ ಯಾರಿಗೂ ಕೂಡ ಇದುವರೆಗೆ ಟಿಕೆಟ್ ಕನ್ಫರ್ಮ್ ಮಾಡಿಕೊಟ್ಟಿಲ್ಲ ಮತ್ತು ಹೈಕಮಾಂಡ್ ಕಿವಿಯಲ್ಲೂ ಹೇಳಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಆಕಾಂಕ್ಷಿಗಳು ಕ್ಷೇತ್ರ ಪರ್ಯಟನೆ ಮಾಡುವುದು ತಪ್ಪಲ್ಲ ಆದರೇ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು ಮತ್ತು ಟಿಕೆಟ್ ಆಗಿದೆ ಎಂದು ಹೇಳಿಕೊಂಡು ತಿರುಗುವ ಮುಖೇನ ಕಾರ್ಯಕರ್ತರಲ್ಲಿ ತಳಮಳ ಉಂಟು ಮಾಡುವ ಕೆಲಸ ಆಗಬಾರದಾಗಿದೆ ಪಕ್ಷ ಸಂಘಟಿಸುವಲ್ಲಿ ಕೆಲಸ ಮಾಡಲಿ ಟಿಕೆಟ್ ಅವರನ್ನು ಹಿಂಬಾಲಿಸಿ ಬರುತ್ತದೆಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಜಾತಿ ಸಮೀಕರಣವನ್ನು ಪರಿಗಣಿಸಿಯೇ ಟಿಕೆಟ್ ನೀಡಬಹುದು ಅದರಲ್ಲೂ ಕಡಿಮೆ ಸಂಖ್ಯೆಯಿರುವ ಜಾತಿಗೂ ಕೂಡ ಈ ಸಲ ಟಿಕೆಟ್ ಸಿಗುವ ಸಾಧ್ಯತೆಯಿದೆ ಒಟ್ಟಾರೆ ಜಾತಿಗಿಂತಲೂ ಹಿಂದುತ್ವದ ಆಧಾರದಮೇಲೆ ಬಿಜೆಪಿ ಕೆಲಸ ಮಾಡುತ್ತದೆಂದರು.
ಜಿಲ್ಲೆಯಿಂದ ಇದುವರೆಗೂ ಆಕಾಂಕ್ಷಿಗಳ ಪಟ್ಟಿಯನ್ನು ರಾಜ್ಯದಿಂದ ಪಡೆದಿಲ್ಲ ಹಾಗಾಗಿ ಕಾರ್ಯಕರ್ತರು ಗೊಂದಲ ಮಾಡಿ ಕೊಳ್ಳುವ ಅಗತ್ಯವಿಲ್ಲ ಚುನಾವಣೆ ಘೋಷಣೆಯಾದ ನಂತರವಷ್ಟೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವುದು ಬಿಟ್ಟರೆ ಹೈಕಮಾಂಡ್ ಕಿವಿಯಲ್ಲಿ ಹೇಳುವುದು, ಚೀಟಿ ಬರೆದು ಕೊಡುವ ಸಂಪ್ರದಾಯ ಬಿಜೆಪಿಯಲ್ಲಿ ಇಲ್ಲ ಎಂದು ಖಡಕ್ ನುಡಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…