Featured

ಉಡುಪಿ:  ಬಿಜೆಪಿ ದೇಶದ ಅತ್ಯಂತ ಭ್ರಷ್ಟ ಸರ್ಕಾರ ಎಂದು ಹೇಳಲಾಗುತ್ತಿದ್ದು ಇದು ಸಾಬೀತಾಗಿದೆ : ಪ್ರಸಾದ್ ರಾಜ್ ಕಾಂಚನ್ – Vishwanews24

ಉಡುಪಿ:  ಬಿಜೆಪಿ ದೇಶದ ಅತ್ಯಂತ ಭ್ರಷ್ಟ ಸರ್ಕಾರ ಎಂದು ಹೇಳಲಾಗುತ್ತಿದ್ದು ಇದು ಸಾಬೀತಾಗಿದೆ : ಪ್ರಸಾದ್ ರಾಜ್ ಕಾಂಚನ್

ಉಡುಪಿ: ಬಿಜೆಪಿ ಮುಖಂಡರು ವಿಧಾನ ಸೌಧವನ್ನು ವ್ಯಾಪಾರ ಸೌಧ ಮಾಡಿರುವಾಗ ಅಮಿತ್ ಶಾ ರವರು ಕರ್ನಾಟಕಕ್ಕೆ ಬಂದು ಕಾಂಗ್ರೆಸ್ ಪಕ್ಷದೊಂದಿಗೆ ದಾಖಲೆ ಕೇಳಲು ಯಾವ ನೈತಿಕತೆ ಇದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಪ್ರಶ್ನಿಸಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ ಪ್ರಶಾಂತ್ ನಿಯೋಜನೆಯ ಮೇರೆಗೆ ಬೆಂಗಳೂರು ಜಲಮಂಡಳಿಯಲ್ಲಿ ಮುಖ್ಯ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತಿದ್ದ ಕೆ ಎಸ್ ಡಿ ಎಲ್ ಗೆ ರಾಸಾಯನಿಕ ಪೂರೈಕೆ ಆಯ್ಕೆಯಾಗಿರುವ ಗುತ್ತಿಗೆದಾರರಿಂದ 80ಲಕ್ಷ ರೂ ಲಂಚದ ಬೇಡಿಕೆ ಇಟ್ಟಿದ್ದ ಎಂದು ಆರೋಪ ಕೇಳಿ ಬಂದಿದೆ, ಬಿಜೆಪಿ ಸರ್ಕಾರದಲ್ಲಿ ವಿಧಾನಸೌದ ವ್ಯಾಪಾರ ಸೌದವಾಗಿದೆ ಎಂದು ಕಾಂಗ್ರೆಸ್ ಹೇಳುತ್ತ ಬಂದರೂ ಈ ಬಗ್ಗೆ ಸಾಕ್ಷಿ ಏನಿದೆ ಎಂದು ಸರ್ಕಾರ ಆರೋಪವನ್ನು ತಿರಸ್ಕರಿಸುತ್ತಾ ಬಂದಿತ್ತು.

ದೇಶದ ಅತ್ಯಂತ ಭ್ರಷ್ಟ ಸರ್ಕಾರ ಎಂದು ಹೇಳಲಾಗುತ್ತಿದು ಇದು ಸಾಬೀತಾಗಿದೆ, ನೋಟು ರದ್ದತಿ ಮಾಡಿ ಹಣ ನಿರ್ಮೂಲನ ಮಾಡಿದ್ದೇವೆ ಎನ್ನುವ ಬಿಜೆಪಿ ಮುಖಂಡರಲ್ಲಿಯೇ ಇಷ್ಟೊಂದು ಹಣ ಇರಲು ಹೇಗೆ ಸಾಧ್ಯ ಮುಂದುವರೆದ ದಾಳಿಯಿಂದ 6 ಕೋಟಿ ಹೆಚ್ಚುವರಿಯಾಗಿ ಸಿಕ್ಕಿದೆ ಇವರ ಬಳಿಯೇ ಇಷ್ಟು ಸಿಗಬೇಕಾದರೆ ಇವರಿಂದ ಉನ್ನತ ಮಟ್ಟದಲ್ಲಿ ಇರುವವರ ಬಳಿ ಎಷ್ಟಿರಬೇಡ.

ಡಿಮಾನಿಟೈಸೆನ್ ನಂತರ ನಗದು ವ್ಯವಹಾರ ಎಲ್ಲಾ ರದ್ದಾಗಿದೆ, ಭ್ರಷ್ಟಾಚಾರ ಬುಡಸಮೇತ ಕಿತ್ತೊಗಿದೆ ಎಂದೆಲ್ಲಾ ಬುರುಡೆ ಬಿಡುತ್ತಿದರು, ಬಿಜೆಪಿ ಮುಖಂಡರ ಮನೆ ಹಾಗೂ ಕಚೇರಿಗಳಲ್ಲಿ 8ಕೋಟಿಗಿಂತಲೂ ಹೆಚ್ಚು ಭ್ರಷ್ಟಾಚಾರದ ಹಣ ಸಿಕ್ಕಿದೆ, ಕೆಲದಿನಗಳ ಹಿಂದೆ ರಾಜ್ಯಕೆ ಬಂದಿದ್ದ ಅಮಿತ್ ಶಾ ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಇನೊಂದು ಅವಕಾಶ ಕೊಡಿ ಅಂತ ಕೇಳಿದ್ದು ಈ ಅವಧಿಯಲ್ಲಿ ಸರ್ಕಾರದಲ್ಲಿ ಭ್ರಷ್ಟಾಚಾರ ಇತ್ತು ಎಂದು ಒಪ್ಪಿದಂತೆ ಆಗಿದೆ.

ಬಿಜೆಪಿ ಶಾಸಕ ಮಾಡಳ ವಿರೂಪಾಕ್ಷಪ್ಪಾ ಪುತ್ರ ಪ್ರಶಾಂತ್ ಮನೆಯಲ್ಲಿ 1.62ಕೋಟಿ ಹಣ ಪತ್ತೆಯಾಗಿದ್ದು ನಿಜವಾಗಿಯೂ ಸರ್ಕಾರ 40% ಕಮಿಷನ್ ಪಡೆಯುತ್ತಿರುವುದು ಸಾಬೀತಾಗಿದೆ, ಸರ್ಕಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪ್ರಶಾಂತ್ ಮಾಡಳ್ ಸೇರಿದಂತೆ ಐವರನ್ನು ಬಂಧಿಸಿದ್ದಾರೆ, ಬಿಜೆಪಿ ಮುಖಂಡರು ವಿಧಾನ ಸೌಧವನ್ನು ವ್ಯಾಪಾರಸೌಧ ಮಾಡಿರುವಾಗ ಅಮಿತ್ ಶಾ ರವರು ಕರ್ನಾಟಕಕ್ಕೆ ಬಂದು ಕಾಂಗ್ರೆಸ್ ಪಕ್ಷದೊಂದಿಗೆ ದಾಖಲೆ ಕೇಳಲು ಯಾವುದೇ ನೈತಿಕತೆ ಇಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

5 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

6 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

7 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

7 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

7 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

8 hours ago