Featured

ಉಡುಪಿ : ಬಿಜೆಪಿ ನಾಲ್ವರು ಪದಾಧಿಕಾರಿಗಳು ಪಕ್ಷದಿಂದ ಉಚ್ಛಾಟನೆ – vishwanews24

ಉಡುಪಿ : ನಾಲ್ವರು ಬಿಜೆಪಿ ಪದಾಧಿಕಾರಿಗಳು ಪಕ್ಷದಿಂದ ಉಚ್ಛಾಟನೆ

ಉಡುಪಿ : ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸುತ್ತಿರುವ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಜೊತೆ ಗುರುತಿಸಿಕೊಂಡಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್ ಸಹಿತ ನಾಲ್ವರು ಬಿಜೆಪಿ ಪದಾಧಿಕಾರಿಗಳನ್ನು ಪಕ್ಷದಿಂದ ಉಚ್ಛಾಚನೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ರೋಷನ್ ಶೆಟ್ಟಿ ಮತ್ತು ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜುನೈದ್ ಬಂಡಾಯ ಅಭ್ಯರ್ಥಿಗೆ ಮತ ಯಾಚಿಸುತ್ತಿರುವ ವಿಚಾರ ಪಕ್ಷದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಅವರಿಗೆ 48 ಗಂಟೆಗಳ ಒಳಗಾಗಿ ಜಿಲ್ಲಾಧ್ಯಕ್ಷರ ಮುಂದೆ ಸ್ಪಷ್ಟೀಕರಣವನ್ನು ನೀಡುವಂತೆ ನೋಟೀಸ್ ಜಾರಿ ಮಾಡಲಾಗಿದೆ.

ಇದರಲ್ಲಿ ಕೆಲವರು ಉತ್ತರ ಕೊಟ್ಟಿದ್ದಾರೆ. ಆದರೆ ಅವರ ಸಬೂಬು ನಮ್ಮ ನೋಟೀಸ್‌ಗೆ ಸರಿಯಾದ ಉತ್ತರ ಆಗಿಲ್ಲ. ಆದುದರಿಂದ ಅವರ ಹೇಳಿಕೆಯನ್ನು ಪರಿಗಣಸದೆ ನೋಟೀಸ್ ಜಾರಿ ಮಾಡಿದ ನಾಲ್ವರನ್ನು ಪಕ್ಷದಿಂದ ಉಚ್ಛಾಟನೆ ಗೊಳಿಸಿ ಆದೇಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

16 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

16 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

17 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

17 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

17 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

17 hours ago