Featured

ಉಡುಪಿ : ಬಿಜೆಪಿ ಪಕ್ಷದವರು ಏನೇ ಮಾತನಾಡಿದರೂ ನಡೆಯುತ್ತದೆ ಎಂಬ ಅಹಂಕಾರದ ವರ್ತನೆ ಅವರ ಮಾತುಗಳಲ್ಲಿ ಎದ್ದು ಕಾಣುತ್ತದೆ – ವೆರೋನಿಕಾ ಕರ್ನೆಲಿಯೊ – Vishwanews24

ಉಡುಪಿ : ಬಿಜೆಪಿ ಪಕ್ಷದವರು ಏನೇ ಮಾತನಾಡಿದರೂ ನಡೆಯುತ್ತದೆ ಎಂಬ ಅಹಂಕಾರದ ವರ್ತನೆ ಅವರ ಮಾತುಗಳಲ್ಲಿ ಎದ್ದು ಕಾಣುತ್ತದೆ – ವೆರೋನಿಕಾ ಕರ್ನೆಲಿಯೊ

ಉಡುಪಿ: ರಾಜ್ಯದ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎನ್ನುವ ಮೂಲಕ ಪ್ರಚೋದನಾತ್ಮಕವಾಗಿ ಮಾತನಾಡಿದ ಸಚಿವ ಡಾ|ಸಿ ಎನ್ ಅಶ್ವಥ್ ನಾರಾಯಣ್ ಅವರ ವಿರುದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ.

ರಾಜ್ಯಕ್ಕೆ ಉತ್ತಮ ಜನಪರ ಆಡಳಿತ ನೀಡಿರುವ ಹಿರಿಯ ರಾಜಕಾರಣಿ ಸಿದ್ದರಾಮಯ್ಯ ಅವರ ವಿರುದ್ದ ಸಚಿವ ಡಾ|ಸಿ ಎನ್ ಅಶ್ವಥ್ ನಾರಾಯಣ್ ಮಾತನಾಡಿದ ಪದಗಳನ್ನು ಯಾರೂ ಕೂಡ ಒಪ್ಪುವಂತದಲ್ಲ. ಬಿಜೆಪಿ ಪಕ್ಷದವರು ಏನೇ ಮಾತನಾಡಿದರೂ ನಡೆಯುತ್ತದೆ ಎಂಬ ಅಹಂಕಾರದ ವರ್ತನೆ ಅವರ ಮಾತುಗಳಲ್ಲಿ ಎದ್ದು ಕಾಣುತ್ತದೆ. ರಾಜಕೀಯ ವಿಚಾರಗಳಲ್ಲಿ ಪರ ವಿರೋಧ ಮಾಡುವುದನ್ನು ಬಿಟ್ಟು ಹೊಡೆದು ಸಾಯಿಸಿ ಎಂಬ ಪ್ರಚೋದನಾತ್ಮಕ ಪದ ಬಳಸಿರುವುದು ಅವರ ಕೀಳು ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ.

ಬಿಜೆಪಿಯ ಜಗದೀಶ್ ಶೆಟ್ಟರ್, ಯಡಿಯೂರಪ್ಪ, ಆರ್ ಅಶೋಕ್, ಬಸವರಾಜ ಬೊಮ್ಮಾಯಿ ಸಹಿತ ಹಲವು ಬಿಜೆಪಿಗರು ಟಿಪ್ಪು ಸುಲ್ತಾನ್ ಅವರನ್ನು ಹಲವು ವೇದಿಕೆಗಳಲ್ಲಿ ಹೊಗಳಿದ ದಾಖಲೆಗಳಿದ್ದು ಅದೇ ಕೆಲಸವನ್ನು ಸಿದ್ದರಾಮಯ್ಯ ಮಾಡಿದರೆ ಇವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಇವರ ಇಬ್ಬಗೆ ಧೋರಣೆಯನ್ನು ಎತ್ತಿತೋರಿಸುತ್ತದೆ. ಒಮ್ಮೆ ಪ್ರಚೋದನಾತ್ಮಕ ಹೇಳಿಕೆ ನೀಡಿ ಬಳಿಕ ಕ್ಷಮೆ ಕೇಳುವ ನಾಟಕ ಮಾಡಿದರೆ ಅವರು ಆಡಿದ ಮಾತು ಮರೆತು ಹೋಗುವುದಿಲ್ಲ. ಒಬ್ಬ ಸಚಿವರಾಗಿ ಇಂತಹ ಹೇಳಿಕೆ ನೀಡಿದ ಅಶ್ವಥ್ ನಾರಾಯಣ್ ಅವರನ್ನು ಬೊಮ್ಮಾಯಿ ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಮತ್ತು ಅವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago