ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್ ಸರಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾವು ಶನಿವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ನಡೆಸಿತು.
ರಾಜ್ಯ ಸರಕಾರ ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಲತಾಯಿ ಧೋರಣೆ ತೋರಿ ಜಿಲ್ಲೆಯ ಜನತೆಗೆ ಅನ್ಯಾಯ ಮಾಡುತ್ತಿದೆ. 2013ರಲ್ಲಿ ಉಡುಪಿ ನಗರ ಭಾಗಕ್ಕೆ ಆರಂಭಗೊಂಡ ನರ್ಮ್ ಬಸ್ ಯೋಜನೆಯಲ್ಲಿ 40ಕ್ಕೂ ಹೆಚ್ಚು ಬಸ್ಸುಗಳಿದ್ದರೆ ಇಂದು ಸರಕಾರ ಗ್ಯಾರಂಟಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿ ಶೇ.50ರಷ್ಟು ಬಸ್ಗಳನ್ನು ಕಡಿತಗೊಳಿಸಿದೆ ಎಂದು ಮೋರ್ಚಾದ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಆರೋಪಿಸಿದರು.
ಇದನ್ನೂ ಓದಿ :
ಉಡುಪಿ ಜಿಲ್ಲಾ ಆಸ್ಪತ್ರೆ ಕಾಮಗಾರಿಯನ್ನು ಪೂರ್ಣಗೊಳಿಸದೆ ಜಿಲ್ಲೆಯ ಬಡ ರೋಗಿಗಳ ಜೀವದೊಂದಿಗೆ ಆಟವಾಡುತ್ತಿದೆ. ಉಡುಪಿಯ ಪರ್ಯಾಯಕ್ಕೆ ಅನುದಾನ ನೀಡುವ ಭರವಸೆಯನ್ನು ನೀಡಿ ನಂತರ ಬಿಡಿಗಾಸು ನೀಡದೆ ಅನ್ಯಾಯ ಮಾಡಿದೆ ಎಂದು ಅವರು ದೂರಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲಾಧಿಕಾರಿ ಕಚೇರಿಗೆ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಂತೆ ಪ್ರತಿಭಟನಾಕಾರರು ಗೋ ಬ್ಯಾಕ್ ಘೋಷಣೆಗಳನ್ನು ಕೂಗಿದರು. ಬಳಿಕ ರಸ್ತೆಗೆ ನುಗ್ಗಲು ಪ್ರಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಇದನ್ನೂ ಓದಿ :
ಪ್ರತಿಭಟನೆಯಲ್ಲಿ ಮುಖಂಡರಾದ ಸಂಧ್ಯಾ ರಮೇಶ್, ಅಭಿರಾಜ್ ಸುವರ್ಣ, ಶಿವಕುಮಾರ್ ಅಂಬಲಪಾಡಿ, ಸಚಿನ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…
ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…