ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.
ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರಿಗೆ ಸೇರಿದ ಹನೆಹಳ್ಳಿ ಗ್ರಾಮದ ಕೂರಾಡಿ ಸಂಕಮ್ಮ ತಾಯಿ ರೆಸಾರ್ಟ್‌ನಲ್ಲಿ ಅಕ್ರಮವಾಗಿ ದೇಶದೊಳಗೆ ಬಂದ ವಿದೇಶಿಗರನ್ನು ಸೇರಿಸಿ ಅವರಿಗೆ ಕಾನೂನುಬಾಹಿರವಾಗಿ ಆಶ್ರಯ ಮತ್ತು ಉದ್ಯೋಗ ನೀಡುತ್ತಿರುವುದು ಹಲವು ಮೂಲಗಳಿಂದ ಕಂಡು ಬಂದಿದ್ದು ಈ ವಿಷಯವು ಅತ್ಯಂತ ಗಂಭೀರವಾಗಿದ್ದು ಇದು ದೇಶದ ಭದ್ರತೆಗೆ ಅಪಾಯ ತರುವ ಸಾಧ್ಯತೆಗಳಿದ್ದು ಅಕ್ರಮ ನುಸುಳುಕೋರರಾದ ವಿದೇಶಿಗರ ಹಾಗೂ ಅವರಿಗೆ ಆಶ್ರಯ ಕಲ್ಪಿಸಿ ಉದ್ಯೋಗ ನೀಡುತ್ತಿರುವುದು ಅಕ್ಷಮ್ಯ ಅಪರಾಧವಾಗಿದ್ದು ಇಂತಹ ದುಷ್ಕೃತ್ಯವನ್ನು ಮಾಡುತ್ತಿರುವ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ತನಿಖೆ ನಡೆಸಿ ಯಾವುದೇ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಮನವಿ ಮಾಡಲಾಯಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…