ಬ್ರಹ್ಮಾವರ: ಬಿಜೆಪಿ ಯುವ ಮೋರ್ಚಾದ ಮುಖಂಡೊಬ್ಬನ ಮನೆಯ ಮೇಲೆ ಎ.8ರಂದು ರಾತ್ರಿ ವೇಳೆ ದಾಳಿ ನಡೆಸಿದ ಉಡುಪಿ ಅಬಕಾರಿ ಪೊಲೀಸರು ಓರ್ವನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.
ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ ಇವರುಗಳು ಮಾರ್ಗದರ್ಶನದಂತೆ ಖಚಿತ ಮಾಹಿತಿ ಮೇರೆಗೆ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬ್ರಹ್ಮಾವರ ಇಂದಿರಾನಗರದಲ್ಲಿರುವ ರಮೇಶ ಪ್ರಭು ಎಂಬವರ ಮನೆ ಮೇಲೆ ಈ ಅಬಕಾರಿ ದಾಳಿ ನಡೆದಿದೆ. ರಮೇಶ್ ಪ್ರಭು ಅವರ ಪುತ್ರ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾದ ಮುಖಂಡ ಎಂದು ತಿಳಿದು ಬಂದಿದೆ.
ಮನೆಯಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿರುವ ಖಚಿತ ಮಾಹಿತಿ ಮೇರೆಗೆ ಅಬಕಾರಿ ದಾಳಿ ನಡೆಸಿದಾಗ ಒಟ್ಟು 33.500 ಲೀಟರ್ ಡಿಫೆನ್ಸ್ ಮದ್ಯ ಪತ್ತೆಯಾಗಿದ್ದು, ಇದರ ಒಟ್ಟು ಮೌಲ್ಯ 1,55,000ರೂ. ಎಂದು ಅಂದಾಜಿಸಲಾಗಿದೆ. ಆರೋಪಿ ರಮೇಶ್ ಪ್ರಭುವನ್ನು ಬಂಧಿಸಲಾಗಿದೆ.
ಈ ಬಗ್ಗೆ ಉಡುಪಿ ಉಪ ವಿಭಾಗದ ಅಬಕಾರಿ ಉಪ ನಿರೀಕ್ಷಕಿ ಮಧುರಾ. ಎನ್. ದಾಸ್ ಮೊಕದ್ದಮೆಯನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…