Featured

ಉಡುಪಿ : ಬಿಜೆಪಿ ಶಾಸಕರ ಅಮಾನತು – ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ.: ಉದಯ ಕುಮಾರ್ ಶೆಟ್ಟಿ – Vishwanews24

ಉಡುಪಿ : ಬಿಜೆಪಿ ಶಾಸಕರ ಅಮಾನತು – ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ.: ಉದಯ ಕುಮಾರ್ ಶೆಟ್ಟಿ

ಉಡುಪಿ: ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಿರುವ ಸ್ಪೀಕರ್ ರವರ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಗೂಂಡಾರಾಜ್ ಆಡಳಿತ ಚಾಲ್ತಿಯಲ್ಲಿದೆ. ವಿಧಾನಸಭೆಯ ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಶಾಸಕರು ಸದನದಲ್ಲಿ ಗೂಂಡಾಗಿರಿ ನಡೆಸಿರುವುದನ್ನು ರಾಜ್ಯದ ಜನತೆ ಮರೆತಿಲ್ಲ. ಆಗ ಯಾವುದೇ ಅವಸರದ ಕ್ರಮ ಕೈಗೊಂಡಿರುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಇದನ್ನು ದಮನಿಸಬೇಕೆಂಬ ನಿಲುವನ್ನು ಹೊಂದಿರುವ ರಾಜ್ಯ ಕಾಂಗ್ರೆಸ್ ಸರಕಾರ ಸ್ಪೀಕರ್ ರವರನ್ನು ಮುಂದಿಟ್ಟುಕೊಂಡು ತಮ್ಮ ಅಜೆಂಡಾವನ್ನು ಕಾರ್ಯಗತ ಗೊಳಿಸುತ್ತಿರುವುದು ತೀರಾ ಶೋಚನೀಯ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ಕಾಂಗ್ರೆಸ್ ಇಂತಹ ಸಂವಿಧಾನ ಬಾಹೀರ ಕೃತ್ಯಗಳಿಗೆ ಮುಂದಿನ ದಿನಗಳಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

24 minutes ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

33 minutes ago

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! vishwanews24

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…

38 minutes ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

1 hour ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

2 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

23 hours ago