Featured

ಉಡುಪಿ ಬಿಜೆಪಿ ಶಾಸಕ ರಘಪತಿ ಭಟ್ ಸಂಬಂಧಿ, ಇಸ್ಪೀಟ್ ಕ್ಲಬ್‌ನ ಮಾಲಕನ ಭೀಕರ ಕೊಲೆ…!

ಉಡುಪಿ, : ಮಣಿಪಾಲ- ಪೆರಂಪಳ್ಳಿ ರಸ್ತೆಯ ಝೆಪ್ಟಾ ಲಾಂಗ್ ಕಟ್ಟಡದಲ್ಲಿರುವ ಸೆವೆನ್ತ್ ಹೆವೆನ್ ಹೊಟೇಲಿನ ಮೊದಲ ಮಹಡಿಯ ಸೆವೆನ್ತ್ ಆರ್‌ಸಿ ಹೆಸರಿನ ಇಸ್ಪೀಟ್ ಕ್ಲಬ್‌ನ ಮಾಲಕನನ್ನು ದುಷ್ಕರ್ಮಿಗಳ ತಂಡ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜು.29 ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ನಡೆದಿದೆ.

ಕೊಲೆಗೀಡಾದವರನ್ನು ಉಡುಪಿ ಪುತ್ತೂರು ಗ್ರಾಮ ಸುಬ್ರಹ್ಮಣ್ಯ ನಗರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸಮೀಪದ ನಿವಾಸಿ ದಿ.ಶ್ರೀಧರ್ ಭಟ್ ಎಂಬವರ ಪುತ್ರ ಗುರುಪ್ರಸಾದ್ ಭಟ್ (44) ಎಂದು ಗುರುತಿಸಲಾಗಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಕಂಡ್ಲೂರು ಚೆಕ್‌ಪೋಸ್ಟ್ ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕೊಡಂಕೂರು ನ್ಯೂ ಕಾಲನಿಯ ಪ್ರದೀಪ್ ಪೂಜಾರಿ (36), ಕಲ್ಯಾಣಪುರದ ಸುಜಿತ್ ಪಿಂಟೋ (35) ಹಾಗೂ ಕುಂಜಿಬೆಟ್ಟು ಕಕ್ಕುಂಜೆಯ ರಾಜೇಶ್ ಪೂಜಾರಿ (30) ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಟೂರಿಸ್ಟ್ ಬಿಳಿ ಬಣ್ಣದ ಒಮ್ನಿ ಕಾರಿನಲ್ಲಿ ಬಂದ ನಾಲ್ವರು ಕ್ಲಬ್‌ಗೆ ನುಗ್ಗಿ ಗುರುಪ್ರಸಾದ್ ಭಟ್‌ಗೆ ಹಲ್ಲೆ ನಡೆಸಿ ಕುತ್ತಿಗೆಯ ಹಿಂಭಾಗಕ್ಕೆ ಚೂರಿಯಿಂದ ಇರಿದು ಅದೇ ಕಾರಿನಲ್ಲಿ ಪರಾರಿಯಾಗಿದ್ದರು. ತೀವ್ರವಾಗಿ ಗಾಯಗೊಂಡ ಗುರುಪ್ರಸಾದ್ ರನ್ನು ಅದೇ ಕಟ್ಟಡದಲ್ಲಿರುವ ಹೊಟೇಲಿನ ಅಡುಗೆ ಕೆಲಸ ಗಾರರು ಕೂಡಲೇ ಗುರುಪ್ರಸಾದ್‌ರ ಕಾರಿನಲ್ಲೇ ಮಣಿಪಾಲ ಆಸ್ಪತ್ರೆಗೆ ಸಾಗಿಸಿದರು. ಆದರೆ ತೀವ್ರ ರಕ್ತಸ್ರಾವದಿಂದ ಗುರು ಪ್ರಸಾದ್ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.

ಹಣಕಾಸಿನ ವಿಚಾರಕ್ಕೆ ಕೊಲೆ: ಗುರುಪ್ರಸಾದ್ ಹಲವು ಮಂದಿಯ ಜೊತೆ ಹಣಕಾಸು ವ್ಯವಹಾರ ಹೊಂದಿದ್ದು, ಇದೇ ಕಾರಣಕ್ಕೆ ದುಷ್ಕರ್ಮಿಗಳು ಅವರನ್ನು ಕೊಲೆ ಮಾಡಿದ್ದಾರೆಂಬುದು ತಿಳಿದುಬಂದಿದೆ. ಬಹಳಷ್ಟು ದುಂದು ವೆಚ್ಚ ಮಾಡುತ್ತಿದ್ದ ಗುರುಪ್ರಸಾದ್, ಹಲವು ಮಂದಿಯಿಂದ ಹಣ ಪಡೆದು ಹಿಂತಿರುಗಿಸದೆ ದ್ವೇಷ ಕಟ್ಟಿಕೊಂಡಿದ್ದರು ಎಂದು ಹೇಳಲಾಗಿದೆ.

15ವರ್ಷಗಳ ಹಿಂದೆ ಗುರುಪ್ರಸಾದ್ ಭಟ್ ಹಾಯ್ ಮಾರುತ ಪತ್ರಿಕೆಯ ಹಿತೇಂದ್ರ ಪ್ರಸಾದ್ ಜೊತೆ ಗುರುತಿಸಿಕೊಂಡಿದ್ದರು. ಇವರು ‘ಸತ್ಯ ನ್ಯೂಸ್’ ಹಾಗೂ ‘ನಮ್ಮ ಉಡುಪಿ’ ಎಂಬ ವಾರಪತ್ರಿಕೆಯನ್ನು ನಡೆಸುತ್ತಿದ್ದರು. ಮುಂದೆ ಕಾರ್ ಗ್ಯಾಸ್, ಇನ್ವೈಟರ್, ಸೈಬರ್, ಭೂವ್ಯವಹಾರ, ಮರದ ಕೆತ್ತನೆ ಫ್ಯಾಕ್ಟರಿ ಸೇರಿದಂತೆ ಹಲವು ಉದ್ಯಮಗಳನ್ನು ನಡೆಸಿದ್ದರು. ಇತ್ತೀಚೆಗೆ ಮರದ ಕೆತ್ತನೆಯ ಫ್ಯಾಕ್ಟರಿಯನ್ನು ಮಾರಾಟ ಮಾಡಿದ್ದ ಗುರು ಭಟ್, 2018ರ ಮಾ.12ರಂದು ಈ ಇಸ್ಪೀಟ್ ಕ್ಲಬ್‌ನ್ನು ದಿನ ಬಾಡಿಗೆಗೆ ವಹಿಸಿಕೊಂಡಿದ್ದರು.

ಶನಿವಾರ ತಡರಾತ್ರಿವರೆಗೂ ಗೆಳೆಯರೊಂದಿಗೆ ಇಸ್ಪೀಟು ಆಟ ಆಡುತ್ತಿದ್ದ ಇವರ ಮೊಬೈಲ್‌ಗೆ ಹಲವು ಬಾರಿ ಕೊಲೆ ಬೆದರಿಕೆ ಕರೆ ಬಂದಿತ್ತೆನ್ನಲಾಗಿದೆ. ನಸುಕಿನ ವೇಳೆ ಸುಮಾರು ಮೂರು ಗಂಟೆಗೆ ಗೆಳೆಯರೆಲ್ಲ ಮನೆಗೆ ಹೋದ ನಂತ ಗುರುಪ್ರಸಾದ್ ಕ್ಲಬ್‌ನಲ್ಲೇ ಮಲಗಿದ್ದರು. ಜು.29 ಬೆಳಗ್ಗೆ 9ಗಂಟೆಗೆ ಅವರು ಮತ್ತೆ ಆಟದಲ್ಲಿ ತೊಡಗಿಸಿಕೊಂಡಿದ್ದರು. ಮಧ್ಯಾಹ್ನ 12ಗಂಟೆ ವೇಳೆಗೆ ಎಲ್ಲರೂ ಹೋದ ಬಳಿಕ ಕ್ಲಬ್‌ನ ಕೆಲಸದವರಾದ ಶಂಕರ ಹಾಗೂ ಜಯ ಅವರೊಂದಿಗೆ ಕ್ಲಬ್‌ನಲ್ಲೇ ಇದ್ದರು. ಇದೇ ಸಮಯ ಬಳಸಿಕೊಂಡು ದುಷ್ಕರ್ಮಿ ಗಳು ಕೊಲೆ ಮಾಡಿದ್ದಾರೆ. ಕೊಲೆ ಮಾಡುವ ವೇಳೆ ಕೆಲಸದವರಿಬ್ಬರು ಭೀತಿಯಿಂದ ಅಲ್ಲಿಂದ ಓಡಿ ಹೋಗಿದ್ದರು.

ಬಂಧನಕ್ಕೆ ನೆರವಾದ ಫೂಟೇಜ್: ಈ ಕಟ್ಟಡದಲ್ಲಿ ಸೆವೆನ್ ಹೆವೆನ್ ಬಾರ್, ಹೊಟೇಲು, ಪಬ್, ಲಾಡ್ಜಿಂಗ್, ಕ್ಲಬ್‌ಗಳಿದ್ದು, ಪ್ರತಿಯೊಂದು ಕಡೆಗಳಲ್ಲಿಯೂ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಅಲ್ಲದೆ ಕೊಲೆ ನಡೆದ ಕ್ಲಬ್‌ನಲ್ಲಿಯೂ ಸುಮಾರು ಐದು ಸಿಸಿ ಕ್ಯಾಮೆರಾಗಳಿವೆ.

ದುಷ್ಕರ್ಮಿಗಳು ಬಂದ ಬಿಳಿಬಣ್ಣ ಓಮ್ನಿ ಕಾರು, ಅದರ ನಂಬರ್ ಲಾಡ್ಜ್ ಹೊರಭಾಗದಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದರೆ, ಕ್ಲಬ್ ಒಳಗಿನ ಸಿಸಿ ಕ್ಯಾಮೆರಾದಲ್ಲಿ ನಾಲ್ವರು ದುಷ್ಕರ್ಮಿಗಳು ಗುರುಪ್ರಸಾದ್ ಭಟ್‌ಗೆ ಕೈಯಿಂದ ಹೊಡೆದು ಕಾಲಿನಿಂದ ತುಳಿಯುವ ಹಾಗೂ ಮೂವರು ಗುರು ಪ್ರಸಾದ್ ಭಟ್‌ರನ್ನು ಮೊಣಕಾಲಿನಲ್ಲಿ ಕುಳ್ಳಿರಿಸಿ ಕುತ್ತಿಗೆಯನ್ನು ಬಗ್ಗಿಸಿ, ಓರ್ವ ಚೂರಿಯಿಂದ ಅವರ ಕುತ್ತಿಗೆಯ ಹಿಂಭಾಗಕ್ಕೆ ಬಲವಾಗಿ ಇರಿಯುವ ದೃಶ್ಯ ಕೂಡ ದಾಖಲಾಗಿದೆ.

ಕಟ್ಟಡ ಹಾಗೂ ಕ್ಲಬ್‌ನ ಸಿಸಿ ಕ್ಯಾಮೆರಾಗಳ ಫೂಟೇಜ್‌ಗಳನ್ನು ವಶಪಡಿಸಿಕೊಂಡ ಪೊಲೀಸರು ಆರೋಪಿಗಳ ಗುರುತು ಪತ್ತೆ ಹಚ್ಚಿದರು. ಅಲ್ಲದೆ ನಿನ್ನೆ ರಾತ್ರಿ ಬೆದರಿಕೆ ಕರೆ ಬಂದಿರುವ ಗುರುಪ್ರಸಾದ್ ಭಟ್ ಮೊಬೈಲ್‌ನ್ನು ಕೂಡ ಪೊಲೀಸರು ವಶಪಡಿಸಿಕೊಂಡು, ಅದರಲ್ಲಿನ ಕಾಲ್‌ರೆಕಾರ್ಡ್‌ಗಳನ್ನು ಕೂಡ ಆಲಿಸಿ ಆರೋಪಿಗಳ ಬಂಧನಕ್ಕೆ ಕಾರ್ಯಾಚಣೆ ನಡೆಸಿದ್ದರೆಂದು ತಿಳಿದು ಬಂದಿದೆ.

ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ನಿಂಬರಗಿ, ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಮಣಿಪಾಲ ನಿರೀಕ್ಷಕ ಸುದರ್ಶನ್, ಉಡುಪಿ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕ ರಘುಪತಿ ಭಟ್ ಸಂಬಂಧಿ

ಕೊಲೆಯಾದ ಗುರುಪ್ರಸಾದ್ ಭಟ್ ಉಡುಪಿ ಶಾಸಕ ರಘುಪತಿ ಭಟ್ ಸೋದರ ಮಾವನ ಮಗ. ಮಣಿಪಾಲ ಆಸ್ಪತ್ರೆಯ ಶವಗಾರಕ್ಕೆ ಆಗಮಿಸಿದ ಶಾಸಕ ರಘುಪತಿ ಭಟ್ ಮಾಧ್ಯಮದವರೊಂದಿಗೆ ಮಾತನಾಡಿ, ಮೃತ ಗುರು ಭಟ್ ನಮ್ಮ ಸಂಬಂಧಿಕರಾಗಿದ್ದರೂ ನಮ್ಮ ಕುಟುಂಬದೊಂದಿಗೆ ಅವರ ವ್ಯವಹಾರದ ಬಗ್ಗೆ ಮಾತನಾಡುತ್ತಿರಲಿಲ್ಲ. ಇದೆಲ್ಲ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ ಎಂದರು.

ಸೆವೆನ್ತ್ ಹೆವೆನ್ ಹೊಟೇಲಿನಲ್ಲಿರುವ ಇಸ್ಪೀಟ್ ಕ್ಲಬ್ ನಡೆಸಿಕೊಂಡು ಬರು ತ್ತಿದ್ದ ಗುರುಪ್ರಸಾದ್ ಭಟ್ ಎಂಬವರನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿ ಯಾಗಿದ್ದರು. ನಮ್ಮ ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಕಂಡ್ಲೂರು ಚೆಕ್‌ಪೋಸ್ಟ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಓರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ತನಿಖೆ ಮುಂದುವರಿದಿದೆ.
-ಲಕ್ಷ್ಮಣ್ ನಿಂಬರ್ಗಿ, ಪೊಲೀಸ್ ಅಧೀಕ್ಷಕರು, ಉಡುಪಿ ಜಿಲ್ಲೆ

 

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago