Featured

ಉಡುಪಿ: ಬಿರುವೆರ್‌ ಕುಡ್ಲ ವಿರುದ್ದದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌  ಕ್ಷಮೆಯಾಚಿಸಬೇಕು ತಪ್ಪಿದ್ದಲ್ಲಿ ಬೃಹತ್‌ ಪ್ರತಿಭಟನೆಯ ಎಚ್ಚರಿಕೆ – Vishwanews24

ಉಡುಪಿ: ಬಿರುವೆರ್‌ ಕುಡ್ಲ ವಿರುದ್ದದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌  ಕ್ಷಮೆಯಾಚಿಸಬೇಕು ತಪ್ಪಿದ್ದಲ್ಲಿ ಬೃಹತ್‌ ಪ್ರತಿಭಟನೆಯ ಎಚ್ಚರಿಕೆ – Vishwanews24

ಉಡುಪಿ : ಸಂಘಟನೆ ವಿರುದ್ದದ ಆರೋಪಕ್ಕೆ ನಾಳೆಯೊಳಗೆ ಶರಣ್‌ ಪಂಪ್‌ವೆಲ್‌ ಕ್ಷಮೆಯಾಚಿಸದಿದ್ದರೆ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ” ಎಂಬ ಎಚ್ಚರಿಕೆಯನ್ನು ಬಿರುವೆರ್‌ ಕುಡ್ಲ ಸಂಘಟನೆ ನೀಡಿದೆ.

ಬಿರುವೆರ್ ಕುಡ್ಲ ಉಡುಪಿ ಘಟಕವೂ ಪತ್ರಿಕಾಗೋಷ್ಠಿ ನಡೆಸಿದ್ದು, “ಬಿರುವೆರ್‌ ಕುಡ್ಲ ಸಂಘಟನೆಯ ಹೆಸರನ್ನು ಕೆಡಿಸಲು ವ್ಯವಸ್ಥಿತವಾದ ಷಡ್ಯಂತ್ರ ನಡೆಯುತ್ತಿದೆ. ಸಂಘಟನೆ ಮಾಡುವ ಉತ್ತಮ ಸಮಾಜ ಸೇವೆಯನ್ನು ಕಂಡು ಸಹಿಸಲಾಗದ ಕೆಲವೊಂದು ವ್ಯಕ್ತಿಗಳು ನಮ್ಮ ಸಂಘಟನೆಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಶರಣ್‌ ಪಂಪ್‌ವೆಲ್‌ ಅವರು ಪೂರ್ಣ ಮಾಹಿತಿಯನ್ನು ತಿಳಿಯದೇ ಸಂಘಟನೆಯ ಮೇಲೆ ಆರೋಪ ಮಾಡಿ ನೋವುಂಟು ಮಾಡಿದ್ದಾರೆ. ಇದಕ್ಕಾಗಿ ಅವರು ಸಂಘಟನೆಯ ಕ್ಷಮೆಯಾಚಿಸಬೇಕು. ನಾಳೆಯ ಒಳಗೆ ಕ್ಷಮೆ ಕೇಳದೇ ಇದ್ದಲ್ಲಿ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಹೇಳಿದೆ.

” ಕೌಟುಂಬಿಕ ಸಂಬಂಧಗಳ ಆಧಾರದಲ್ಲಿ ಮೆಚ್ಚಿಸಲು ಏಕಾಏಕಿ ಬಿರುವೆರ್‌ ಕುಡ್ಲದ ಮೇಲೆ ಆರೋಪ ಮಾಡುವುದು ಸಲ್ಲದು. ಗುರ್ಜಿ ದೀಪೋತ್ಸವ ಮಾಡುವ ಜವಾಬ್ದಾರಿಯನ್ನು ಹೊತ್ತ ಸಮಿತಿಯ ಪವಿತ್ರ ಜಾಗದಲ್ಲಿ ಕುಡಿದು ಕುಪ್ಪಳಿಸಿ ದಾರಿಯಲ್ಲಿ ಹೋಗುವವರಿಗೆ ಗುರಾಯಿಸಿ ನೋಡುವ, ತಮಾಷೆ ಮಾಡುವ ಮೂಲಕ ಪ್ರಚೋದನೆ ನೀಡಿ ಹೊರಗಿನಿಂದ ಬಂದ ಜನ ಪಾರ್ಟಿಯ ಹೆಸರಿನಲ್ಲಿ ಗಲಾಟೆಗೆ ಕಾರಣರಾಗುತ್ತಿದ್ದಾರೆ. ಶರಣ್ ಪಂಪ್‌‌ವೆಲ್ ಅವರು ಮೊದಲು ಇದನ್ನು ತಡೆಯುವ ಕೆಲಸವನ್ನು ಮಾಡಬೇಕಿದೆ. ಬಳ್ಳಾಲ್‌ ಬಾಗ್‌ನಲ್ಲಿ ಬಂದು ಯಾರು ಗಲಾಟೆ ಮಾಡುತ್ತಿದ್ದಾರೆ ಎನ್ನುವುದನ್ನು ಶರಣ್‌ ಪಂಪ್‌ವೆ‌ಲ್‌‌ ಅವರು ಮೊದಲು ತಿಳಿದುಕೊಳ್ಳಬೇಕು” ಎಂದು ಬಿರುವೆರ್ ಕುಡ್ಲಸಂಘಟನೆ ಹೇಳಿದೆ

“ಪೊಲೀಸ್‌ ಇಲಾಖೆ ಕೂಡಾ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದ ತನಿಖೆ ಮಾಡುತ್ತಿದ್ದು, ಎಲ್ಲಿಯೂ ಬಿರುವೆರ್‌ ಕುಡ್ಲದ ಹೆಸರು ಪ್ರಸ್ತಾಪಿಸಿಲ್ಲ. ಒಂದೆರಡು ವ್ಯಕ್ತಿಗಳು ಬಂದು ನಮ್ಮ ಸಂಘಟನೆಯ ಮೇಲೆ ವಿನಾಕಾರಣ ಆರೋಪ ಮಾಡಿದರೆ ಜನತೆ ನಂಬುವುದಿಲ್ಲ. ಬಿರುವೆರ್‌‌ ಕುಡ್ಲದ ವತಿಯಿಂದ ಸಮಾಜ ಸೇವೆ ಮುಂದುವರಿಯಲಿದೆ” ಎಂದು ಸಂಘಟನೆ ಹೇಳಿದೆ.

“ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದಲ್ಲಿ ಬಿರುವೆರ್‌ ಕುಡ್ಲ ಸಂಘಟನೆಯ ಪಾತ್ರವಿಲ್ಲ. ಹಲ್ಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಕಾನೂನು ಕ್ರಮ ಕೈಗೊಂಡಿದ್ದಾರೆ. ಹಾಗಾಗಿ ಶರಣ್‌ ಪಂಪ್‌‌ವೆಲ್‌ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದೆ.

ಬಿರುವೆರ್‌ ಕುಡ್ಲ ಉಡುಪಿ ಘಟಕದ ಸಂಘಟನೆಯ ಉಡುಪಿ ಘಟಕ ಅಧ್ಯಕ್ಷ ಕಿಶೋರ್ ಪೂಜಾರಿ, ಉಪಾಧ್ಯಕ್ಷರಾದ ದಿನೇಶ್ ಅಮಿನ್, ಖಜಾಂಚಿ ರಾಜೇಶ್ ಕೊಪ್ಪ, ಕಾರ್ಯದರ್ಶಿ ಯೋಗಿಶ್ ಅಮಿನ್, ಮಾದ್ಯಮ ಸಲಹೆಗಾರ ತೇಜಸ್ ಜೆ ಬಂಗೇರಾ ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

16 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

16 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

16 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

16 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 days ago