Featured

ಉಡುಪಿ : ಬಿಲ್ ಪಾವತಿ ಬಾಕಿಯಿಂದ ಜಿಲ್ಲಾಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್ ಸೇವೆ ವ್ಯತ್ಯಯ ; ಸರ್ಕಾರ ತಕ್ಷಣ ಸಮಸ್ಯೆ ಪರಿಹರಿಸುವಂತೆ ಯಶ್ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ : ಬಿಲ್ ಪಾವತಿ ಬಾಕಿಯಿಂದ ಜಿಲ್ಲಾಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್ ಸೇವೆ ವ್ಯತ್ಯಯ ; ಸರ್ಕಾರ ತಕ್ಷಣ ಸಮಸ್ಯೆ ಪರಿಹರಿಸುವಂತೆ ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ ಜಿಲ್ಲಾಸ್ಪತ್ರೆ ಸಹಿತ ರಾಜ್ಯದಾದ್ಯಂತ ಸ್ಕ್ಯಾನಿಂಗ್ ಹಾಗೂ ಎಂ ಆರ್ ಐ ಸೇವೆ ಗುತ್ತಿಗೆ ಪಡೆದ ಕಂಪೆನಿಗೆ ರಾಜ್ಯ ಸರ್ಕಾರ ಬಿಲ್ ಪಾವತಿಸಲು ಬಾಕಿ ಇಟ್ಟಿರುವ ಪರಿಣಾಮ ರೋಗಿಗಳಿಗೆ ಸೇವೆ ಸಿಗದೇ ಸಂಕಷ್ಟ ಎದುರಾಗಿದ್ದು, ರಾಜ್ಯ ಸರ್ಕಾರ ತಕ್ಷಣ ಸಮಸ್ಯೆ ಪರಿಹರಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ತುರ್ತು ರೋಗಿಗಳಿಗೆ ಮಾತ್ರ ಎಂ ಆರ್ ಐ ಸೇವೆ ನೀಡುತ್ತಿದ್ದು, ಇತರ ರೋಗಿಗಳಿಗೆ ವೈದ್ಯರ ಸಲಹೆಯ ಮೇರೆಗೂ ಸ್ಕ್ಯಾನಿಂಗ್ ಸೇವೆ ನೀಡುತ್ತಿಲ್ಲ.

ಖಾಸಗಿ ಸಂಸ್ಥೆಗೆ 6 ತಿಂಗಳಿನಿಂದ ಬಿಲ್ ಪಾವತಿ ಬಾಕಿ ಇರುವ ಬಗ್ಗೆ ಸಂಸ್ಥೆ ಆರೋಪಿಸುತ್ತಿದ್ದು, ಸರಕಾರ ಆರೋಗ್ಯ ಸಂಬಂಧಿತ ಸೇವೆಗಳ ವಿಚಾರದಲ್ಲಿ ಎಂದಿಗೂ ರಾಜೀ ಮಾಡದೆ ಜನಸಾಮಾನ್ಯರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರಕಾರ ಆದ್ಯತೆಯ ಮೇರೆಗೆ ಕ್ರಮ ಕೈಗೊಳ್ಳಬೇಕು.

ರಾಜ್ಯ ಸರ್ಕಾರ ತಕ್ಷಣ ಖಾಸಗಿ ಸಂಸ್ಥೆಗೆ ಬಾಕಿ ಮೊತ್ತ ಪಾವತಿಸಿ ವ್ಯತ್ಯಯವಾಗಿರುವ ಸೇವೆಯನ್ನು ಪರಿಹರಿಸುವಂತೆ ಆರೋಗ್ಯ ಸಚಿವರಿಗೆ ಅಗ್ರಹಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

21 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

22 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

23 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

23 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago