Featured

ಉಡುಪಿ : ಬಿ.ಆರ್.ಶೆಟ್ಟಿ ಆಸ್ಪತ್ರೆಯನ್ನು ಅಧಿಕೃತವಾಗಿ ವಶಕ್ಕೆ ಪಡೆದ ರಾಜ್ಯ ಸರಕಾರ – Vishwanews24

ಉಡುಪಿ : ಬಿ.ಆರ್.ಶೆಟ್ಟಿ ಆಸ್ಪತ್ರೆಯನ್ನು ಅಧಿಕೃತವಾಗಿ ವಶಕ್ಕೆ ಪಡೆದ ರಾಜ್ಯ ಸರಕಾರ

ಉಡುಪಿ: ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ರಾಜ್ಯ ಸರಕಾರ ತನ್ನ ವಶಕ್ಕೆ ಪಡೆದು ಅಧಿಕೃತ ಸರಕಾರಿ ಆದೇಶವನ್ನು ಹೊರಡಿಸಿದೆ.

ಸಚಿವ ಸಂಪುಟ ಸಭೆಯ ನಿರ್ಣಯದಂತೆ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಇದರ ನಿರ್ವಹಣೆಯನ್ನು ಸರಕಾರದ ಸುಪರ್ದಿಗೆ ಪಡೆದು ಅಧಿಕೃತ ಸರಕಾರಿ ಆದೇಶ ಹೊರಬಿದ್ದಿದೆ.

ಇದರೊಂದಿಗೆ ಉಡುಪಿ ಜಿಲ್ಲೆ ಕಸಬಾ ತಾಲೂಕಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿರುವ ಸುಮಾರು 4 ಎಕರೆ ಜಮೀನನ್ನು ಸಹ ಸರಕಾರ ತನ್ನ ವಶಕ್ಕೆ ಪಡೆದುಕೊಂಡಿದೆ. ಅಲ್ಲದೇ ಆಸ್ಪತ್ರೆಯ ಕಟ್ಟಡದ ಸಂಪೂರ್ಣ ನಿರ್ವಹಣೆ ಹಾಗೂ ಇತರ ಜವಾಬ್ದಾರಿಗಳನ್ನು ಸರಕಾರವೇ ವಹಿಸಿಕೊಂಡಿದೆ.

ಈ ಆಸ್ಪತ್ರೆಯ ವಾರ್ಷಿಕ ನಿರ್ವಹಣಾ ವೆಚ್ಚ 7 ಕೋಟಿ ರೂ. ಹಾಗೂ ಅವಶ್ಯವಿರುವ ಮಾನವ ಸಂಪನ್ಮೂಲಗಳಿಗೆ ಅವರ್ತಕ ವೆಚ್ಚವಾಗಿ ವಾರ್ಷಿಕ 2.83 ಕೋಟಿ ರೂ. ಸೇರಿದಂತೆ ಒಟ್ಟು 9.83 ಕೋಟಿ ರೂ.ಗಳ ಅನುದಾನವನ್ನು ರಾಜ್ಯ ವಲಯದಿಂದ ಭರಿಸುವುದು ಹಾಗೂ 200 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಅವಶ್ಯವಿರುವ ಹುದ್ದೆಗಳನ್ನು ಸರಕಾರದ ವತಿಯಿಂದ ಭರ್ತಿ ಮಾಡುವ ಬಗ್ಗೆ ಸರಕಾರ ಆದೇಶದಲ್ಲಿ ಸಹಮತಿಯನ್ನು ವ್ಯಕ್ತಪಡಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿರುವ ಸುಮಾರು 4 ಎಕರೆ ಜಮೀನಿನಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು, 400 ಹಾಸಿಗೆಗಳ ಸೆಂಟರ್ ಆಫ್ ಎಕ್ಸಲೆನ್ಸ್ ಆಸ್ಪತ್ರೆ ಹಾಗೂ ಆರೋಗ್ಯ ಸೌಲಭ್ಯಗಳನ್ನೊಳಗೊಂಡ ಕೇಂದ್ರವನ್ನು ನಿರ್ವಹಿಸಲು ಬಿಆರ್‌ಎಸ್ ಹೆಲ್ತ್ ರಿಸರ್ಚ್ ಇನ್‌ಸ್ಟಿಟ್ಯೂಷನ್ ಪ್ರೈವೆಟ್ ಲಿಮಿಟೆಡ್ ಬೆಂಗಳೂರು ಇವರಿಗೆ 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನಿರ್ವಹಿಸಲು ಕೆಲವೊಂದು ಷರತ್ತುಗಳನ್ನು ಒಳಪಟ್ಟು ಸರಕಾರ ಅನುಮೋದನೆ ನೀಡಿತ್ತು.

ಆರ್ಥಿಕ ಮುಗ್ಗಟ್ಟಿನಿಂದ ಬಿ.ಆರ್.ಎಸ್.ಸಂಸ್ಥೆ ಆಸ್ಪತ್ರೆಯ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಲು ವಿಫಲವಾದ ಬಳಿಕ ಶಾಸಕ ಕೆ. ರಘುಪತಿ ಭಟ್ ಅವರು ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆಯನ್ನು ಸರಕಾರದ ಸುಪರ್ದಿಗೆ ಪಡೆಯುವಂತೆ ಇಲಾಖೆ ಮಟ್ಟದಲ್ಲಿ ನಿರಂತರವಾಗಿ ಪ್ರಯತ್ನಿಸಿದ್ದರು. ಅವರು ವಿಧಾನಸಭಾ ಅಧಿವೇಶನದಲ್ಲೂ ಈ ವಿಷಯ ಪ್ರಸ್ತಾಪಿಸಿದ್ದರು. ಕಳೆದ ಮಾ.30ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಆಸ್ಪತ್ರೆಯ ನಿರ್ವಹಣೆಯನ್ನು ಸರಕಾರಕ್ಕೆ ಹಸ್ತಾಂತರ ಮಾಡಿ ನಿರ್ಣಯ ಕೈಗೊಳ್ಳಲಾಗಿತ್ತು.

ಸರಕಾರಿ ಆದೇಶದ ಪ್ರಮುಖ ಅಂಶಗಳು

27.10.2016ರ ಸರಕಾರದ ಆದೇಶದ ಅನುಸಾರ ಬಿಆರ್‌ಎಸ್ ಹೆಲ್ತ್ ರಿಸರ್ಚ್ ಇನ್‌ಸ್ಟಿಟ್ಯೂಷನ್ ಪ್ರೈವೆಲ್ ಲಿ. ಇವರಿಗೆ 30 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿದ್ದ ಉಡುಪಿ ಜಿಲ್ಲೆ ಕಸಬಾ ತಾಲೂಕಿನ ಒಟ್ಟು ನಾಲ್ಕು ಎಕರೆ ಜಮೀನನ್ನು ಹಿಂಪಡೆಯಲಾಗಿದೆ.

ಉಡುಪಿಯಲ್ಲಿ ಹಾಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡದ ಸಂಪೂರ್ಣ ನಿರ್ವಹಣೆ ಹಾಗೂ ಇತರ ಜವಾಬ್ದಾರಿಗಳನ್ನು ಸರಕಾರ ವಹಿಸಿಕೊಂಡಿದೆ.

ಈ ಆಸ್ಪತ್ರೆಯ ವಾರ್ಷಿಕ ನಿರ್ವಹಣಾ ವೆಚ್ಚ ಏಳು ಕೋಟಿ ರೂ. ಹಾಗೂ ಅವಶ್ಯವಿರುವ ಮಾನವ ಸಂಪನ್ಮೂಲಗಳಿಗೆ ಆವರ್ತಕ ವೆಚ್ಚವಾಗಿ ೨.೮೩ ಕೋಟಿ ರೂ.ಗಳು ಸೇರಿದಂತೆ ಒಟ್ಟು ೯.೮೩ ಕೋಟಿ ರೂ.ಗಳ ಅನುದಾನವನ್ನು ರಾಜ್ಯ ವಲಯದಿಂದ ಭರಿಸಲಾಗುವುದು.

ಈ ಆಸ್ಪತ್ರೆಗೆ ಪ್ರಸ್ತುತ ಇರುವ ಕರ್ನಾಟಕ ಸರಕಾರ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಎಂಬ ಹೆಸರನ್ನು ಮುಂದುವರಿಸಲಾಗಿದೆ.

200ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಅವಶ್ಯವಿರುವ ಹುದ್ದೆಗಳನ್ನು ಸಹ ಭರ್ತಿ ಮಾಡಲಾಗುವುದು

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

7 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

7 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

7 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

10 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

11 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

11 hours ago