ಉಡುಪಿ: ಬಿ.ಆರ್.ಶೆಟ್ಟಿ ಆಸ್ಪತ್ರೆ ಉದ್ಯೋಗಿಗಳ ಸಂಬಳವನ್ನು ಶೀಘ್ರ ಬಿಡುಗಡೆ ಮಾಡಿ ಅವರಿಗೆ ಪಾವತಿ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಸರ್ಕಾರದ 8 ವರ್ಷದ ಸಾಧನೆಗಳ ಬಗ್ಗೆ ಹೇಳಿದರು. ಈ ವೇಳೆ ಅವರು, ಲವ್ ಜಿಹಾದ್ ಪ್ರಕರಣಗಳು ಈಗ ಶುರುವಾದದ್ದು ಅಲ್ಲ. ಇದು ಹಿಂದಿನಿಂದಲೂ ಇತ್ತು. ಸರ್ಕಾರ ಈಗಾಗಲೇ ಇವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ತಪ್ಪಿತಸ್ಥರನ್ನು ಹಾಗೆ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ. ಪೊಲೀಸರು ಅಂತಹವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಎಚ್ಚರಿಸಿದರು.
ಬಿ.ಆರ್.ಶೆಟ್ಟಿ ಆಸ್ಪತ್ರೆ ಉದ್ಯೋಗಿಗಳ ಸಂಬಳ ಸಮಸ್ಯೆಗಳ ಕುರಿತು ನನ್ನ ಗಮನಕ್ಕೆ ಬಂದಿದೆ. ಉದ್ಯೋಗಿಗಳ ಸಂಬಳವನ್ನು ಶೀಘ್ರ ಬಿಡುಗಡೆ ಮಾಡಿ ಅವರಿಗೆ ಪಾವತಿ ಮಾಡಲಾಗುವುದು ಎಂದು ಭರವಸೆ ಕೊಟ್ಟರು.
ಬಿಜೆಪಿ ಸರ್ಕಾರ ಬಂದರೆ ಲೋಕಾಯುಕ್ತವನ್ನು ಬಲಪಡಿಸುತ್ತವೆ ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ. ಆದರೆ ಆ ಕಾರ್ಯ ಇನ್ನೂ ಆಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾನೂನಾತ್ಮಕವಾಗಿ ಎಸಿಬಿಯನ್ನು ಮತ್ತಷ್ಟು ಬಲಪಡಿಸುವ ಕೆಲಸ ಮಾಡಿದ್ದೇವೆ. ಲೋಕಾಯುಕ್ತ ಕೂಡ ತನ್ನ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…