Featured

ಉಡುಪಿ: ಬೀದಿ ನಾಯಿಗಳ ಹಾವಳಿ ತಡೆಯಲು ಕ್ರಮಕ್ಕೆ ಸೂಚನೆ – vishwanews24

ಉಡುಪಿ: ಬೀದಿ ನಾಯಿಗಳ ಹಾವಳಿ ತಡೆಯಲು ಕ್ರಮಕ್ಕೆ ಸೂಚನೆ

ಉಡುಪಿ: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು, ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ, ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಪುರಸಭಾ ಮುಖ್ಯಾಧಿಕಾರಿಗೆ ತಿಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಮ್ಮ ಸಂಸ್ಥೆಯ ಅವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದರ ಮೇಲ್ವಿಚಾರಣೆ ನಡೆಸಲು ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವಂತೆ ಸೂಚಿಸಲಾಗಿದೆ.

ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಮತ್ತೆ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದ ವಸೂಲಿ ಮಾಡಲಾಗುವುದು. ಈ ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರಗಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago