Featured

ಉಡುಪಿ: ಬುಧವಾರದಿಂದ ರಾಷ್ಟೀಯ ಹೆದ್ದಾರಿ ಮಲ್ಪೆ ಆದಿ ಉಡುಪಿ ಕಾಮಗಾರಿ ಮರು ಆರಂಭ : ಶಾಸಕ ಯಶ್ ಪಾಲ್ ಸುವರ್ಣ ಸೂಚನೆ – vishwanews24

ಉಡುಪಿ: ಬುಧವಾರದಿಂದ ರಾಷ್ಟೀಯ ಹೆದ್ದಾರಿ ಮಲ್ಪೆ ಆದಿ ಉಡುಪಿ ಕಾಮಗಾರಿ ಮರು ಆರಂಭ : ಶಾಸಕ ಯಶ್ ಪಾಲ್ ಸುವರ್ಣ ಸೂಚನೆ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಮಲ್ಪೆ ಅದಿ ಉಡುಪಿ ಸಹಿತ ಹಿರಿಯಡ್ಕ, ಪರ್ಕಳ ಹಾಗೂ ಪೆರ್ಡೂರು ಭಾಗದ ರಾಷ್ಟೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಉಪಸ್ಥಿತಿಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಮಲ್ಪೆ ಆದಿ ಉಡುಪಿ ಕಾಮಗಾರಿ ಭೂ ಸ್ವಾಧೀನ ಪ್ರಕ್ರಿಯೆಯ ವಿಳಂಬದಿಂದ ಕುಂಠಿತವಾಗಿದ್ದು ಈಗಾಗಲೇ ಭೂ ಮಾಲೀಕರಿಗೆ ಪರಿಹಾರ ಪಾವತಿಯ ಮೊತ್ತದ ಬಗ್ಗೆ ನೋಟಿಸ್ ನೀಡಲಾಗಿದೆ.

ಭೂ ಸ್ವಾಧೀನ ಪ್ರಕ್ರಿಯೆಯ 214 ಕಡತಗಳ ಪೈಕಿ 19 ಸರ್ಕಾರಿ ಜಮೀನು ಹೊರತುಪಡಿಸಿ 195 ಖಾಸಗಿ ಜಮೀನು ಮಾಲಿಕರ ಪೈಕಿ 51 ನೋಟೀಸ್ ಸ್ವೀಕರಿಸಿದ್ದು, 48 ಮಂದಿ ಪರಿಹಾರ ಮೊತ್ತ ಪಡೆಯಲು ತಮ್ಮ ದಾಖಲಾತಿಗಳನ್ನು ಒದಗಿಸಿದ್ದಾರೆ. ಬಾಕಿ ಇರುವ 144 ಜಮೀನು ಮಾಲಕರನ್ನು ಸಂಪರ್ಕಿಸಿ ನೋಟೀಸ್ ನೀಡುವ ಪ್ರಕ್ರಿಯೆ ನಡೆಯುತ್ತಿರುವುದರಿಂದ ಬುಧವಾರದಿಂದಲೇ ಮಲ್ಪೆ ಆದಿ ಉಡುಪಿ ಕಾಮಗಾರಿ ಮರು ಆರಂಭ ಮಾಡುವಂತೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು.

ಪರ್ಕಳ ಹೆದ್ದಾರಿ ಕಾಮಗಾರಿ ನ್ಯಾಯಾಲಯ ತಡೆಯಾಜ್ಞೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವು ಸರ್ಕಾರದ ಪರವಾಗಿ ಬಂದಿದ್ದು, ಭೂ ಮಾಲೀಕರಿಗೆ ಕೂಡಲೇ ಪರಿಹಾರದ ಹಣ ನೀಡಬೇಕು, ಕಾಮಗಾರಿ ಪ್ರಾರಂಭಿಸಲು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

ಪೆರ್ಡೂರಿನ ದೇವಸ್ಥಾನ ಸಮೀಪದ 600 ಮೀ. ವ್ಯಾಪ್ತಿಯಲ್ಲಿ ಕಾಮಗಾರಿ ಸಂಬಂಧ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ಅದನ್ನು ಬಿಟ್ಟು ಉಳಿದ ಕಡೆ ಕಾಮಗಾರಿ ಕೈಗೊಳ್ಳಬೇಕು. ದೇವಸ್ಥಾನ, ಕಲ್ಯಾಣಿಯ ಮೂಲ ಸ್ವರೂಪಕ್ಕೆ ಧಕ್ಕೆ ಆಗಬಾರದೆಂಬುದು ಭಕ್ತರ ಬೇಡಿಕೆ. ಅದನ್ನು ಮನಗಂಡು ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮುಂದಾಗಬೇಕು ಎಂದು ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಹೇಳಿದರು.

ಸಭೆಯಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ ಶ್ರೀ ಮಹೇಶ್ ಚಂದ್ರ, ರಾಷ್ಟೀಯ ಹೆದ್ದಾರಿ 169 ಎ ಅಧಿಕಾರಿಗಳಾದ ಶ್ರೀ ಮಂಜುನಾಥ ಗೌಡ, ನವೀನ್ ರಾಜ್, ಮಂಜುನಾಥ ನಾಯಕ್, ನಗರಸಭಾ ಸದಸ್ಯರಾದ ಸುಂದರ ಕಲ್ಮಾಡಿ, ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago