Featured

ಉಡುಪಿ ಬೃಹತ್ ಜನಾಗ್ರಹ ಮೆರವಣಿಗೆಯಲ್ಲಿ ರಾರಾಜಿಸಿದ ಕೇಸರಿ ಧ್ವಜ ; ಮುಸ್ಲಿಂ ಅಭಿಮಾನಿಗಳಿಂದ ಪಾನಕ ಸೇವೆ

ಉಡುಪಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ವಿಶ್ವ ಹಿಂದೂ ಪರಿಷತ್‌ ಉಡುಪಿ ಜಿಲ್ಲೆ ವತಿಯಿಂದ ಭಾನುವಾರ ಬೃಹತ್‌ ಜನಾಗ್ರಹ ಜಾಥಾ ನಡೆಯಿತು.

ಜಿಲ್ಲೆಯ ನಾನಾ ಕಡೆಗಳಿಂದ ಬಂದ ಸಾವಿರಾರು ಹಿಂದೂಗಳು ಭಾಗವಹಿಸಿದ್ದರು. ಉಡುಪಿಯ ಜೋಡುಕಟ್ಟೆಯಿಂದ ಜನಾಗ್ರಹ ಸಭೆ ನಡೆಯುವ ಶ್ರೀಕೃಷ್ಣ ಮಠದ ಪಾರ್ಕಿಂಗ್‌ ಸ್ಥಳದವರೆಗೆ ಸುಮಾರು 3 ಕಿ.ಮೀ. ದೂರ ಮೆರವಣಿಗೆ ನಡೆಯಿತು.

ಉಡುಪಿ ನಗರದೆಲ್ಲೆಡೆ ಕೇಸರಿ ಭಗವಧ್ವಜಗಳು ಹಾರಾಡುತ್ತಿದ್ದವು. ಜಾತಿ ಮತ ಭೇದ ಮರೆತು ಪುರುಷರು, ಮಹಿಳೆಯರು, ಮಕ್ಕಳು, ಭಗವಧ್ವಜ ಹಿಡಿದು ಜೈ ಶ್ರೀರಾಮ್‌ ಘೋಷಣೆಯನ್ನು ಉಡುಪಿಯಲ್ಲಿ ಮೊಳಗಿಸಿದರು.

ಈ ವೇಳೆ ಉಡುಪಿ ಕೋರ್ಟ್ ಮುಂಭಾಗ ಶ್ರೀ ಪೇಜಾವರ ಶ್ರೀಪಾದರ ಮುಸ್ಲಿಂ ಅಭಿಮಾನಿಗಳ ವತಿಯಿಂದ ಮೆರವಣಿಗೆಯಲ್ಲಿ ಭಾಗವಹಿಸಿದವರಿಗೆ ಪಾನಕ ವ್ಯವಸ್ಥೆ ಮಾಡಲಾಗಿತ್ತು.

ಜನಾಗ್ರಹ ಜಾಥದಲ್ಲಿ ಬಾಳೆಕುದ್ರು ಮಠದ ಶ್ರೀ ನರಸಿಂಹಾಶ್ರಮ ಸ್ವಾಮೀಜಿ, ಉಡುಪಿ ಶಾಸಕ ರಘುಪತಿ ಭಟ್, ಕಾರ್ಕಳ ಶಾಸಕ ಸುನಿಲ್ ಕುಮಾರ್ ಮತ್ತಿತರು ಪಾಲ್ಗೊಂಡಿದ್ದರು.

Vishwa News 24

Recent Posts

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

13 hours ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

3 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

3 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

3 days ago

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು -vishwanews24

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…

3 days ago

ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ – vishwanews24

ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ ಶಬರಿಮಲೆ: ಅಯ್ಯಪ್ಪ…

3 days ago